ಮಡಿಕೇರಿ, ನ. ೧೭: ಮಡಿಕೇರಿ ಗ್ರಾಮೀಣ ಶಾಲಾ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಕಲ್ಪಿಸುವ ನಿಟ್ಟಿನಲ್ಲಿ ಓಜಸ್ವಿ ಫೌಂಡೇಶನ್ ಜಿಲ್ಲೆಯಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಮೊದಲ ಕಾರ್ಯಕ್ರಮ ತಾ. ೧೮ ರಂದು (ಇಂದು) ನಡೆಯಲಿದೆ ಎಂದು ಫೌಂಡೇಶನ್ ಸಂಸ್ಥಾಪಕರಲ್ಲಿ ಒಬ್ಬರಾದ ಡಾ. ಕವಿತಾ ಪಿ.ಸಿ. ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬೆಳಿಗ್ಗೆ ಮೂರ್ನಾಡಿನ ಸರಕಾರಿ ಪ್ರೌಢಶಾಲೆಯಲ್ಲಿ ಮತ್ತು ಮಧ್ಯಾಹ್ನ ನಂತರ ಹಾಕತ್ತೂರು ಸರಕಾರಿ ಪ್ರೌಢಶಾಲೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ, ಈ ಕಾರ್ಯಕ್ರಮ ವಿದ್ಯಾರ್ಥಿಗಳ ಉನ್ನತಿಗೆ ಗೆಲುವಿನ ಸೂತ್ರಗಳು, ವಿಜ್ಞಾನ, ತಂತ್ರಜ್ಞಾನದ ವಿಚಾರ ಹಾಗೂ ರೊಬೊಟಿಕ್ಸ್ ಪ್ರದರ್ಶನ ಒಳಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.