ಮಡಿಕೇರಿ, ನ. ೧೭: ಇಂಗ್ಲೆAಡ್ನಲ್ಲಿ ರಾಬರ್ಟ್ ಓವನ್ರವರಿಂದ ಪ್ರಾರಂಭವಾದ ಸಹಕಾರ ಕ್ಷೇತ್ರದಲ್ಲಿ ೧೯೦೪ ರಲ್ಲಿ ಪತ್ತಿನ ಸಹಕಾರ ಸಂಘಗಳ ಸ್ಥಾಪನೆಗೆ ಮಾತ್ರ ಇದ್ದ ಅವಕಾಶವನ್ನು ೧೯೧೨ ರಲ್ಲಿ ಸಹಕಾರ ಕಾಯ್ದೆಗೆ ತಿದ್ದುಪಡಿ ತರುವುದರ ಮೂಲಕ ಎಲ್ಲಾ ರೀತಿಯ ಸಹಕಾರ ಸಂಘಗಳ ಸ್ಥಾಪನೆಗೆ ಒತ್ತು ನೀಡಲಾಯಿತು. ಜಿಲ್ಲೆಯಲ್ಲಿ ಪ್ರಪ್ರಥಮ ಸಹಕಾರ ಸಂಘವು ತಲ್ತರೆ ಶೆಟ್ಟಳ್ಳಿ ಯಲ್ಲಿ ಪ್ರಾರಂಭವಾದ ನಂತರದಲ್ಲಿ ಸಹಕಾರ ದವಸ ಭಂಡಾರಗಳು, ಮಹಿಳಾ ಸಹಕಾರ ಸಂಘ, ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಜೇನು ಸಹಕಾರ ಸಂಘ, ಕಿತ್ತಳೆ ಬೆಳೆಗಾರರ ಸಹಕಾರ ಸಂಘ, ಹೀಗೆ ನಾಣ್ಣುಡಿಯಂತೆ ಆಡು ಮುಟ್ಟದ ಸೊಪ್ಪಿಲ್ಲ ಎಂಬAತೆ ಎಲ್ಲಾ ವಿಧದ ಸಹಕಾರ ಸಂಘವನ್ನು ನಾವು ಇಂದು ಕಾಣಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸಂಯುಕ್ತ ಆಶ್ರಯದಲ್ಲಿ ಚೌಡ್ಲು ಪ್ಯಾಕ್ಸ್ನಲ್ಲಿ ೬೯ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ. ಮನು ಮುತ್ತಪ್ಪ ಅವರು ಅಭಿಪ್ರಾಯಪಟ್ಟರು.
ಕೇಂದ್ರ ಸರ್ಕಾರವು ಸಹಕಾರ ಸಚಿವಾಲಯವನ್ನು ಹೊಸದಾಗಿ ಪ್ರಾರಂಭಿಸಿ ಸಹಕಾರ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಯೋಜನೆ ರೂಪಿಸುತ್ತಿದೆ. ಸಹಕಾರ ಕ್ಷೇತ್ರದ ಮೂಲಕ ಶೋಷಿತ, ಅಬಲ ವರ್ಗ, ರೈತರ ಹಿತ ಕಾಪಾಡುವ ಮೂಲಕ ಅವರ ಆರ್ಥಿಕ ಪರಿಸ್ಥಿತಿಯನ್ನು ಮೇಲ್ದರ್ಜೆಗೇರಿಸಲು ಯೋಜನೆ ರೂಪಿಸುತ್ತಿದ್ದು, ಸ್ವಯಂ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ನೀಡುತ್ತಿದೆ. ಮೇಕ್ ಇನ್ ಇಂಡಿಯಾ, ಅಗ್ನಿಪಥ ಯೋಜನೆಯಂತಹ ಯೋಜನೆ ಯನ್ನು ಜಾರಿಗೊಳಿಸಿ ಯಶಸ್ವಿ ಯಾಗಿದ್ದು ಮುಂದಿನ ೨೦೨೪ ರೊಳಗಾಗಿ ಭಾರತವನ್ನು ವಿಶ್ವಗುರು ಸ್ಥಾನದಲ್ಲಿ ಕಾಣಬಹುದಾಗಿದೆ ಎಂದು ಅಭಿಪ್ರಾಯಪಟ್ಟರು.
ಸಹಕಾರಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ಅಧ್ಯಕ್ಷ ಕೆ.ಪಿ. ಗಣಪತಿರವರು, ರಾಷ್ಟಿçÃಕೃತ ಬ್ಯಾಂಕ್ಗಳಿಗೆ ಸಹಕಾರ ಸಂಘಗಳು ಪೈಪೋಟಿಯನ್ನು ನೀಡುತ್ತಿದ್ದು ವಿನೂತನ ತಂತ್ರ ಜ್ಞಾನವನ್ನು ಅಳವಡಿಸಿಕೊಳ್ಳುವುದರ ಮೂಲಕ ಸಂಘಗಳು ಮತ್ತಷ್ಟು ಏಳಿಗೆಯನ್ನು ಸಾಧಿಸುತ್ತಿದೆ. ಹಿರಿಯ ಸಹಕಾರಿಗಳ ಮಾರ್ಗದರ್ಶನದಲ್ಲಿ ಸಂಘಗಳು ಇನ್ನೂ ಕೂಡ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಸರ್ಕಾರದಿಂದ ನೇರವಾಗಿ ಸಂಘಗಳಿಗೆ ಹಣಕಾಸಿನ ನೆರವು ದೊರಕದಿದ್ದರೂ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿವೆ. ಸರ್ಕಾರದ ವಾರ್ಷಿಕ ಬಡ್ಜೆಟ್ನಲ್ಲಿ ಸಹಕಾರ ಸಂಘಗಳಿಗೆ ಹಣಕಾಸಿನ ನೆರವನ್ನು ಘೋಷಣೆಯಾಗುತ್ತಿಲ್ಲ. ಸರ್ಕಾರವು ರೈತರ ಉತ್ಪನ್ನಗಳಿಗೆ ಬೆಲೆ ನಿಗದಿಗೆ ಹಾಗೂ ಮಾರುಕಟ್ಟೆ ಸೌಲಭ್ಯ ಮತ್ತು ಫಸಲನ್ನು ಶೇಖರಿಸಿಡಲು ಗೋದಾಮಿನ ವ್ಯವಸ್ಥೆಯನ್ನು ಮಾಡಿದ್ದಲ್ಲಿ ಸಹಕಾರಿ ಎಂದು ಅಭಿಪ್ರಾಯಪಟ್ಟರು. ಸರ್ಕಾರದಿಂದ ಡಿ.ಸಿ.ಸಿ. ಬ್ಯಾಂಕ್ಗೆ ಮತ್ತು ಜಿಲ್ಲೆಗೆ ಒಟ್ಟು ಸುಮಾರು ೧೦ ಕೋಟಿ ಸಾಲ ಮನ್ನಾ ಮೊತ್ತ ಬಿಡುಗಡೆಗೆ ಬಾಕಿ ಇದ್ದು ಈ ಮೊತ್ತವನ್ನು ಬಿಡುಗಡೆ ಗೊಳಿಸಲು ಸಹಕಾರ ಸಚಿವರು ಮತ್ತು ಇತರರಲ್ಲಿ ಮನವಿ ಮಾಡುತ್ತಿ ದ್ದೇವೆಂದು ಮಾಹಿತಿ ನೀಡಿದರು.
ಶ್ರೇಷ್ಠ ಸಹಕಾರಿ ಪ್ರಶಸ್ತಿ ಪುರಸ್ಕೃತರು ಹಾಗೂ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ನಿರ್ದೇಶಕರಾದ ಬಿ.ಡಿ. ಮಂಜುನಾಥ್ರವರು, ರೈತರು ಬೆಲೆ ನಿಗದಿ ಮಾಡುವಷ್ಟರ ಮಟ್ಟಿಗೆ ಬೆಳೆದಲ್ಲಿ ಅವರ ಆರ್ಥಿಕ ಪರಿಸ್ಥಿತಿ ವೃದ್ಧಿ ಸಾಧ್ಯ. ಮಾರುಕಟ್ಟೆಯ ಏರಿಳಿತದಿಂದಾಗಿ ಲಾಭಗಳಿಸುವುದು ಕಷ್ಟ-ಸಾಧ್ಯ. ದೀರ್ಘ ಕಾಲದವರೆಗೆ ಮಾರುಕಟ್ಟೆಯಲ್ಲಿ ನಿಲ್ಲುವ ಸಾಮರ್ಥ್ಯ ಇರಬೇಕು ಎಂದು ಅಭಿಪ್ರಾಯಪಟ್ಟರು.
ಚೌಡ್ಲು ಪ್ಯಾಕ್ಸ್ನ ಅಧ್ಯಕ್ಷರಾದ ಕೆ.ಟಿ. ಪರಮೇಶ್ ಅವರು ಸರ್ವರನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲಾ ಸಹಕಾರ ಯೂನಿಯನ್ ಮತ್ತು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸುತ್ತಿದ್ದು, ಸಹಕಾರ ಸಪ್ತಾಹದ ಎಲ್ಲಾ ಕಾರ್ಯಕ್ರಮಗಳನ್ನು ಸುಲಲಿತವಾಗಿ ಜರುಗಲೆಂದು ಪ್ರಾರ್ಥಿಸಿದರು. ಅಲ್ಲದೆ ಸಂಘದ ಅಭಿವೃದ್ಧಿಗಾಗಿ ಶ್ರಮಿಸಿದ ಹಿರಿಯ ಸಹಕಾರಿಗಳನ್ನು ನೆನೆಸುತ್ತಾ, ಸಂಘದ ಪ್ರಗತಿಯ ಕುರಿತು ಮಾಹಿತಿ ಒದಗಿಸಿದರು. ‘ಸಹಕಾರ ಮಾರುಕಟ್ಟೆ, ಗ್ರಾಹಕ, ರೂಪಾಂತರ ಮತ್ತು ಮೌಲ್ಯವರ್ಧನೆ’ ವಿಷಯದ ಕುರಿತು ಕೆ.ಐ.ಸಿ.ಎಂ.ನ ನಿವೃತ್ತ ಪ್ರಾಂಶುಪಾಲೆ ಎಂ.ಎA. ಶ್ಯಾಮಲಾ ಮಾತನಾಡಿದರು.
ವೇದಿಕೆಯಲ್ಲಿ ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್.ಟಿ. ಪರಮೇಶ್, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕರಾದ ಎಸ್.ಬಿ. ಭರತ್ ಕುಮಾರ್, ಜಲಜಾ ಶೇಖರ್, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಉಮೇಶ್ ಉತ್ತಪ್ಪ, ಪಿ.ಬಿ. ಯತೀಶ್ ಅವರುಗಳು ಉಪಸ್ಥಿತರಿದ್ದರು.
ಚೌಡ್ಲು ಪ್ಯಾಕ್ಸ್ನ ಉಪಾಧ್ಯಕ್ಷ ಪ್ರಾರ್ಥಿಸಿದರೆ, ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಚೌಡ್ಲು ಪ್ಯಾಕ್ಸ್ನ ಆಡಳಿತ ಮಂಡಳಿ ಸದಸ್ಯರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರೀಶ್ ಮತ್ತು ಯೂನಿಯನ್ ಸಿಬ್ಬಂದಿ ಬಿ.ಸಿ. ಅರುಣ್ ಕುಮಾರ್ ಉಪಸ್ಥಿತರಿದ್ದರು.