ಚೆಯ್ಯಂಡಾಣೆ, ನ. ೧೭: ಗಾಳಿಬೀಡು ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಗಾಳಿಬೀಡು ಗ್ರಾಮ ಪಂಚಾಯಿತಿ, ಗ್ರಾಮ ಒನ್ ಹಾಗೂ ಕೆ. ನಿಡುಗಣೆ ಪಂಚಾಯಿತಿ ಸಹಯೋಗದೊಂದಿಗೆ ಗ್ರಾಮಸ್ಥರಿಗೆ ಅಭಾ ಮತ್ತು ಆಯುಷ್ ಮಾನ್ ಭಾರತ್ ಆರೋಗ್ಯ ಕಾರ್ಡ್ ನೋಂದಣಿ ಶಿಬಿರವನ್ನು ಏರ್ಪಡಿಸಲಾಗಿತ್ತು. ಶಿಬಿರದಲ್ಲಿ ಚೇರಂಬಾಣೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪಾರ್ವತಿ, ಗಾಳಿಬೀಡು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಶಿಕಿರಣ್, ಗ್ರಾಮ ಪಂಚಾಯಿತಿ ಸದಸ್ಯೆ ಕೆ.ಸಿ. ಸರೋಜಾ, ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಉಷಾ, ಸಮುದಾಯ ಆರೋಗ್ಯ ಅಧಿಕಾರಿ ರಮ್ಯಾ, ಆಶಾ ಕಾರ್ಯಕರ್ತೆಯರಾದ ಕವಿತಾ, ಸೌಭಾಗ್ಯ ಹಾಜರಿದ್ದರು.