ಶ್ರದ್ಧಾ ಹತ್ಯೆ ಪ್ರಕರಣ: ಪರೀಕ್ಷೆ ಪೂರ್ಣಗೊಳಿಸಲು ಸೂಚನೆ
ನವದೆಹಲಿ, ನ. ೧೮: ಶ್ರದ್ಧಾ ಹತ್ಯೆ ಪ್ರಕರಣ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾನಿಗೆ ಐದು ದಿನಗಳೊಳಗೆ ನಾರ್ಕೋ ಅನಾಲಿಟಿಕ್ ಪರೀಕ್ಷೆ ಪೂರ್ಣಗೊಳಿಸುವಂತೆ ದೆಹಲಿ ನ್ಯಾಯಾಲಯವು ನಗರ ಪೊಲೀಸರಿಗೆ ಸೂಚಿಸಿದೆ. ಆರೋಪಿ ಅಫ್ತಾಬ್ ಮೇಲೆ ಥರ್ಡ್ ಡಿಗ್ರಿ ಬಳಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ಮೆಟ್ರೋಪಾಲಿಟನ್ ಮ್ಯಾಜಿಸ್ಟೆçÃಟ್ ವಿಜಯಶ್ರೀ ರಾಥೋಡ್ ಅವರು ಐದು ದಿನಗಳೊಳಗೆ ಆರೋಪಿಗೆ ನಾರ್ಕೋ-ಅನಾಲಿಟಿಕ್ ಪರೀಕ್ಷೆಯನ್ನು ನಡೆಸಲು ತನಿಖಾಧಿಕಾರಿಗೆ ಅವಕಾಶ ನೀಡುವಂತೆ ರೋಹಿಣಿಯ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಸೂಚಿಸಿದರು. ೨೮ರ ಹರೆಯದ ಪೂನಾವಾಲಾ ತನ್ನ ಲಿವ್-ಇನ್ ಪಾಲುದಾರೆ ಶ್ರದ್ಧಾ ವಾಲ್ಕರ್ನನ್ನು ಕತ್ತು ಹಿಸುಕಿ ಆಕೆಯ ದೇಹವನ್ನು ೩೫ ತುಂಡುಗಳಾಗಿ ಕತ್ತರಿಸಿ ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿರುವ ತನ್ನ ನಿವಾಸದಲ್ಲಿ ಸುಮಾರು ಮೂರು ವಾರಗಳ ಕಾಲ ಫ್ರಿಜ್ನಲ್ಲಿ ಇರಿಸಿದ್ದನು. ಸುಮಾರು ೧೮ ದಿನಗಳ ಕಾಲ ದೇಹದ ಕೆಲ ಭಾಗಗಳನ್ನು ತೆಗೆದುಕೊಂಡು ಹೋಗಿ ನಿರ್ಜನ ಪ್ರದೇಶಗಳಲ್ಲಿ ಎಸೆದು ಬರುತ್ತಿದ್ದನು. ಈ ಜೋಡಿ ಹಣಕಾಸಿನ ವಿಚಾರವಾಗಿ ಆಗಾಗ್ಗೆ ಜಗಳವಾಡುತ್ತಿದ್ದರು. ಇದು ಅತಿರೇಕಕ್ಕೆ ಹೋಗಿದ್ದು ಮೇ ೧೮ರ ಸಂಜೆ ಪೂನಾವಾಲಾ ಶ್ರದ್ಧಾ ವಾಕರ್ನನ್ನು ಹತ್ಯೆ ಮಾಡಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.
ವೋಟರ್ ಐಡಿ ಅಕ್ರಮ: ನಾಲ್ವರು ವಶಕ್ಕೆ
ಬೆಂಗಳೂರು, ನ. ೧೮: ಬೆಂಗಳೂರಿನಲ್ಲಿ ಮತದಾರರ ವೈಯಕ್ತಿಕ ಮಾಹಿತಿ (ದತ್ತಾಂಶ) ಕಳವು ಪ್ರಕರಣದ ಸಂಬAಧ ಚಿಲುಮೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮೇಲೆ ಪೊಲೀಸರು ದಾಳಿ ಮಾಡಿದ್ದು, ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಮತಗಟ್ಟೆ ಅಧಿಕಾರಿ ಸೋಗಿನಲ್ಲಿ ಮತದಾರರ ವೈಯಕ್ತಿಕ ಮಾಹಿತಿ ಸಂಗ್ರಹಿಸುತ್ತಿರುವ ಆರೋಪ ಸಂಬAಧ ಬಿಬಿಎಂಪಿ ವತಿಯಿಂದ ಪ್ರಕರಣ ದಾಖಲಾಗಿತ್ತು. ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಸಹಭಾಗಿತ್ವ ಚಟುವಟಿಕೆಯಲ್ಲಿ ತೊಡಗಿರುವ ಎನ್ಜಿಒ ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ವಿರುದ್ಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದೂರು ನೀಡಿತ್ತು. ಈ ಹಿನ್ನೆಲೆ ಹಲಸೂರು ಗೇಟ್ ಪೊಲೀಸರು ಮಲ್ಲೇಶ್ವರದಲ್ಲಿರುವ ಚಿಲುಮೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮೇಲೆ ನಗರ ಕೇಂದ್ರ ವಿಭಾಗದ ಪೊಲೀಸರು ದಾಳಿ ಮಾಡಿದ್ದಾರೆ. ಈ ದೂರಿನ ಆಧಾರದ ಮೇಲೆ ಹಲಸೂರು ಗೇಟ್ ಠಾಣೆ ಇನ್ಸ್ಪೆಕ್ಟರ್ ಜಗದೀಶ್ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ಪೊಲೀಸರು ಚಿಲುಮೆ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದಂತೆ ಸಂಸ್ಥೆಯ ಮುಖ್ಯಸ್ಥ ಲೋಕೇಶ್ ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಮಲ್ಲೇಶ್ವರಂನ ಚಿಲುಮೆ ಸಂಸ್ಥೆಯ ಕಚೇರಿಗೆ ಸಿಸಿಬಿ ಟೆಕ್ನಿಕಲ್ ತಂಡ ಕೂಡ ಆಗಮಿಸಿದ್ದು, ಚಿಲುಮೆ ಕಚೇರಿಯ ಕಂಪ್ಯೂಟರ್ನಲ್ಲಿರುವ ಡೇಟಾ ಪರಿಶೀಲನೆ ಮಾಡುತ್ತಿದೆ. ಸಿಸಿಬಿ ಇನ್ಸ್ಪೆಕ್ಟರ್ ಪ್ರಶಾಂತ್ ಬಾಬು ನೇತೃತ್ವದ ತಂಡ ಡಿಲೀಟ್ ಆಗಿರುವ ಡೇಟಾ ರಿಟ್ರೀವ್ ಮಾಡುತ್ತಿದೆ. ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿರುವ ಬಗ್ಗೆ ದೂರು ಬಂದಿದ್ದು ಷರತ್ತು ಉಲ್ಲಂಘಿಸಿರುವುದನ್ನು ಪರಿಗಣಿಸಿ ಅನುಮತಿ ಪತ್ರವನ್ನು ರದ್ದುಪಡಿಸಲಾಗಿದೆ. ಜೊತೆಗೆ ಈ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಅವರು ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಚಿಲುಮೆ ಶೈಕ್ಷಣಿಕ, ಸಾಮಾಜಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಬಿಬಿಎಂಪಿ ವ್ಯಾಪ್ತಿಯ ಬಿಎಲ್ಓಗಳೊಂದಿಗೆ ಸಮನ್ವಯ ಸಾಧಿಸಿ ಹಲವು ಷರತ್ತುಗಳನ್ನು ಪಾಲಿಕೆ ವಿಧಿಸಿತ್ತು. ಮತದಾರರ ಪಟ್ಟಿಪರಿಷ್ಕರಣೆಯ ಜಾಗೃತಿ ಹಾಗೂ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಲು ಬಿಎಲ್ಓ ಹಾಗೂ ಮತದಾರರ ನೋಂದಣಾಧಿಕಾರಿಗಳ ಸಹಯೋಗದೊಂದಿಗೆ ಕೆಲವು ಷರತ್ತುಗಳನ್ನು ವಿಧಿಸಿ ಅನುಮತಿ ನೀಡಲಾಗಿತ್ತು. ಷರತ್ತುಗಳನ್ನು ಉಲ್ಲಂಘಿಸಿದ್ದರಿAದ ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿಯನ್ನು ಬಿಬಿಎಂಪಿ ರದ್ದುಪಡಿಸಿತ್ತು. ಆದರೂ ಸಂಸ್ಥೆ ಮತ್ತು ಸಂಸ್ಥೆಗೆ ಸೇರಿದ್ದ ಕೆ.ಎಂ. ಲೋಕೇಶ್ ಎಂಬುವವರು ಬಿಬಿಎಂಪಿಯಿAದ ಯಾವುದೇ ಅನುಮತಿ ಪಡೆಯದೇ ಮತಗಟ್ಟೆಮಟ್ಟದ ಸಮನ್ವಯ ಅಧಿಕಾರಿ ಎಂಬ ಗುರುತಿನ ಚೀಟಿಯನ್ನು ಸೃಷ್ಟಿಸಿಕೊಂಡಿದ್ದರು. ಅಲ್ಲದೇ ನಾವು ಮತಗಟ್ಟೆಮಟ್ಟದ ಅಧಿಕಾರಿಗಳು ಎಂದು ಹೇಳಿಕೊಂಡು ನಕಲಿ ಮತಗಟ್ಟೆಮಟ್ಟದ ಅಧಿಕಾರಿಗಳ (ಬಿಎಲ್ಓ) ಗುರುತಿನ ಚೀಟಿಯನ್ನು ದುರುಪಯೋಗಪಡಿಸಿಕೊಂಡಿದ್ದಾರೆAದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.