ಸಿದ್ದಾಪುರ, ನ. ೧೮: ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿ ತಲೆಮರೆಸಿಕೊಂಡಿದ್ದ ಯುವಕನನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ನೆಲ್ಲಿಹುದಿಕೇರಿ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅಪಹರಣ ಮಾಡಿದ ಆರೋಪದ ಅಡಿಯಲ್ಲಿ ಬಾಲಕಿಯ ತಾಯಿ ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ ಮೇರೆಗೆ ನೆಲ್ಲಿಹುದಿಕೇರಿ ಗ್ರಾಮದ ನಲ್ವತ್ತೇಕ್ರ‍್ರೆ ನಿವಾಸಿ ಆದಮ್ ಎಂಬವರ ಪುತ್ರ ಅನೀಸ್ (೨೫) ಎಂಬಾತನನ್ನು ಸಿದ್ದಾಪುರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ ಆತನ ವಿರುದ್ಧ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.