ಮಡಿಕೇರಿ, ನ. ೧೮: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಡಿಕೇರಿ ಸರಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ ಸಂಯುಕ್ತಾಶ್ರಯದಲ್ಲಿ ೨೦೨೨-೨೩ನೇ ಸಾಲಿನ ಮೈಸೂರು ವಿಭಾಗ ಮತ್ತು ರಾಜ್ಯ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಮಟ್ಟದ ಬಾಲಕ, ಬಾಲಕಿಯರ ಹಾಕಿ ಪಂದ್ಯಾಟಕ್ಕೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಚಾಲನೆ ನೀಡಿದರು.

ಹಾಕಿಸ್ಟಿಕ್‌ನಿಂದ ಚೆಂಡು ತಳ್ಳುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ರಂಜನ್, ಭಾರತ ಹಾಕಿ ತಂಡದಲ್ಲಿ ಕೊಡಗಿನ ಹಲವರು ಅಮೋಘ ಪ್ರದರ್ಶನ ನೀಡಿ ಜಿಲ್ಲೆಗೆ ಹಾಗೂ ದೇಶಕ್ಕೆ ಕೀರ್ತಿ ತಂದಿದ್ದಾರೆ. ಕೊಡವ ಕೌಟುಂಬಿಕ ಹಾಕಿ ನಮ್ಮೆ ನಡೆಸುವುದು ಇಲ್ಲಿನ ಹಾಕಿಪ್ರೇಮವನ್ನು ತೋರುತ್ತದೆ. ಜೊತೆಗೆ ವಿವಿಧ ಸಂಘಟನೆಗಳು, ಸಮುದಾಯಗಳು ಕ್ರೀಡಾಕೂಟದ ಆಯೋಜನೆ ಮೂಲಕ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳಿಗೆ ವೇದಿಕೆ ನೀಡುತ್ತಿದೆ. ಕೊಡಗು ಕ್ರೀಡಾಪಟುಗಳ ಬೀಡು ಎಂದು ಬಣ್ಣಿಸಿದ ಅವರು, ತಾನು ಕ್ರೀಡಾ ಸಚಿವನಾಗಿದ್ದ

ನೀಡಿ ಮಾತನಾಡಿದ ರಂಜನ್, ಭಾರತ ಹಾಕಿ ತಂಡದಲ್ಲಿ ಕೊಡಗಿನ ಹಲವರು ಅಮೋಘ ಪ್ರದರ್ಶನ ನೀಡಿ ಜಿಲ್ಲೆಗೆ ಹಾಗೂ ದೇಶಕ್ಕೆ ಕೀರ್ತಿ ತಂದಿದ್ದಾರೆ. ಕೊಡವ ಕೌಟುಂಬಿಕ ಹಾಕಿ ನಮ್ಮೆ ನಡೆಸುವುದು ಇಲ್ಲಿನ ಹಾಕಿಪ್ರೇಮವನ್ನು ತೋರುತ್ತದೆ. ಜೊತೆಗೆ ವಿವಿಧ ಸಂಘಟನೆಗಳು, ಸಮುದಾಯಗಳು ಕ್ರೀಡಾಕೂಟದ ಆಯೋಜನೆ ಮೂಲಕ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳಿಗೆ ವೇದಿಕೆ ನೀಡುತ್ತಿದೆ. ಕೊಡಗು ಕ್ರೀಡಾಪಟುಗಳ ಬೀಡು ಎಂದು ಬಣ್ಣಿಸಿದ ಅವರು, ತಾನು ಕ್ರೀಡಾ ಸಚಿವನಾಗಿದ್ದ

ಮೈಸೂರು ವಲಯದ ೧೨ ತಂಡಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿವೆ. ಇಲ್ಲಿ ವಿಜೇತವಾಗುವ ತಂಡಗಳು ರಾಜ್ಯ ಮಟ್ಟಕ್ಕೆ ಅರ್ಹತೆ ಪಡೆದುಕೊಳ್ಳಲಿದೆ. ರಾಜ್ಯಮಟ್ಟದ ಪಂದ್ಯಾವಳಿಯೂ ಮಡಿಕೇರಿಯಲ್ಲಿ ನಡೆಯಲಿದೆ ಎಂದರು.

ಈ ಸಂದರ್ಭ ಮಡಿಕೇರಿ ತಾಲೂಕು ತಹಶೀಲ್ದಾರ್ ಪಿ.ಕೆ. ಮಹೇಶ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ವೇದಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಟಿ. ಮಂಜುನಾಥ್, ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಎಂ. ಕೃಷ್ಣಪ್ಪ, ನಗರಸಭಾ ಸದಸ್ಯ ಎಸ್.ಸಿ. ಸತೀಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸುಕ್ರುದೇವೇಗೌಡ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರುಗಳಾದ ಬಿ.ಆರ್. ಗಾಯಿತ್ರಿ, ಸುಕುಮಾರಿ, ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಮನೋಹರ್ ನಾಯ್ಕ್, ಜಿಲ್ಲಾ ಗ್ರೇಡ್-೧ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಎಂ. ಪ್ರವೀಣ್, ಸರಕಾರಿ ಪದವಿ ಪೂರ್ವ ಕಾಲೇಜು ಎಸ್.ಡಿ.ಎಂ.ಸಿ. ಸಮಿತಿ ಅಧ್ಯಕ್ಷ ಚಂದ್ರಶೇಖರ್ ಸೇರಿದಂತೆ ಇನ್ನಿತರರು ಹಾಜರಿದ್ದರು.