ಸೋಮವಾರಪೇಟೆ, ನ. ೧೭: ಪಟ್ಟಣ ವ್ಯಾಪ್ತಿಯಲ್ಲಿ ಕೆಲವು ನಾಯಕರು ಕಾಂಗ್ರೆಸ್ ಕಾರ್ಯಕರ್ತರ ಸಭೆಗಳನ್ನು ನಡೆಸುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಈ ಬಗ್ಗೆ ಪಕ್ಷದ ಹೈಕಮಾಂಡ್‌ಗೆ ಮಾಹಿತಿ ನೀಡಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್ ಹೇಳಿದರು.

ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಪಕ್ಷದ ಕಚೇರಿಯಲ್ಲಿ ಅಧ್ಯಕ್ಷ ಹೆಚ್.ಎ. ನಾಗರಾಜ್ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಈ ವಿಚಾರದ ಬಗ್ಗೆ ಚರ್ಚೆ ನಡೆಯಿತು.

ಪಟ್ಟಣ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಕಾಂಗ್ರೆಸ್ ಮುಖಂಡರು ಸಭೆಗಳನ್ನು ನಡೆಸುತ್ತಿದ್ದಾರೆ ಎಂದು ನಗರ ಕಾಂಗ್ರೆಸ್ ಪದಾಧಿಕಾರಿಗಳು ಸಭೆಯ ಗಮನಕ್ಕೆ ತಂದರು. ಈ ಸಂದರ್ಭ ಮಾತನಾಡಿದ ಸತೀಶ್, ನಾಯಕರು ನಡೆಸುತ್ತಿರುವ ಸಭೆಗಳು ಅವರ ವೈಯಕ್ತಿಕ ಸಭೆಗಳಾಗಿವೆ. ಪಕ್ಷದ ಅಧಿಕೃತ ಸಭೆಗಳಲ್ಲ. ಪಕ್ಷದ ಸಂಘಟನೆ ದೃಷ್ಟಿಯಿಂದ ಬ್ಲಾಕ್ ಕಾಂಗ್ರೆಸ್ ಹಾಗೂ ನಗರ ಕಾಂಗ್ರೆಸ್ ಸಮಿತಿಗಳು ಕಾರ್ಯನಿರ್ವಹಿಸುತ್ತಿವೆ ಎಂದರು.

ಸಭೆಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಚಂಗಪ್ಪ, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಬಿ.ಈ. ಜಯೇಂದ್ರ, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರಾದ ವಿ.ಎ. ಲಾರೆನ್ಸ್, ಹಿರಿಯ ಮುಖಂಡರಾದ ಹೆಚ್.ಸಿ. ನಾಗೇಶ್, ಪ.ಪಂ. ಸದಸ್ಯರಾದ ಶೀಲಾ ಡಿಸೋಜ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಜೆ. ಸುನಿಲ್, ಹೆಚ್. ಮಂಜುನಾಥ್, ಮೀನಾಕುಮಾರಿ, ಎನ್.ಎಂ. ರಮೇಶ್, ಲೋಹಿತಾಶ್ವ, ಗೌರಮ್ಮ, ಮಹಮ್ಮದ್ ಶಫಿ, ಜಮೀರ್, ಭುವನೇಶ್, ಹೆಚ್.ಬಿ. ರಾಜಪ್ಪ, ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.