ಸೋಮವಾರಪೇಟೆ, ನ. ೧೯: ಸಮೀಪದ ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐಗೂರು ಗ್ರಾಮದಿಂದ ಕಿರಗಂದೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ ಮಾರ್ಗದಲ್ಲಿ ರಸ್ತೆಬದಿಯ ಗುಂಡಿಗಳು ಅಪಾಯಕ್ಕೆ ಆಹ್ವಾನ ನೀಡುತ್ತಿವೆ.
ಐಗೂರಿನಿಂದ ಕಿರಗಂದೂರು ಸಂಪರ್ಕಿಸುವ ರಸ್ತೆಯ ಬದಿಯಲ್ಲಿ ಮರ‍್ನಾಲ್ಕು ಅಡಿಗಳಷ್ಟು ಗುಂಡಿಗಳನ್ನು ತೆಗೆದು ಹಾಗೆಯೇ ಬಿಟ್ಟಿರುವುದರಿಂದ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಸಮಸ್ಯೆಯಾಗುತ್ತಿದೆ.
ಈ ರಸ್ತೆಯೂ ಕಿರಿದಾಗಿದ್ದು, ಎದುರಿನಿಂದ ಬರುವ ವಾಹನಗಳಿಗೆ ದಾರಿ ನೀಡುವ ಸಂದರ್ಭ ಗುಂಡಿಗಳಿಗೆ ಬಿದ್ದು ವಾಹನಗಳು ರಿಪೇರಿಗೆ ಬರುತ್ತಿವೆ. ಪಾದಚಾರಿಗಳಿಗೆ ನಡೆದಾಡಲೂ ಸಹ ಸಮಸ್ಯೆಯಾಗಿದೆ. ರಾತ್ರಿ ವೇಳೆಯಲ್ಲಿ ಸಂಚರಿಸುವ ಮಂದಿ ಆಗಾಗ್ಗೆ ಈ ಗುಂಡಿಗೆ ಬಿದ್ದ ಉದಾಹರಣೆ ಇದೆ. ತಕ್ಷಣ ಸಂಬAಧಪಟ್ಟ ಗ್ರಾಮ ಪಂಚಾಯಿತಿ ಈ ಬಗ್ಗೆ ಗಮನ ಹರಿಸಿ ರಸ್ತೆ ಬದಿಯ ಗುಂಡಿ ಮುಚ್ಚಲು ಕ್ರಮಕೈಗೊಳ್ಳ ಬೇಕೆಂದು ಕಿರಗಂದೂರಿನ ಮಹೇಶ್ ತಿಮ್ಮಯ್ಯ ಸೇರಿದಂತೆ ಇತರರು ಒತ್ತಾಯಿಸಿದ್ದಾರೆ.