ಮಡಿಕೇರಿ, ನ. ೧೯: ತಾ. ೨೨ ರಂದು ಬೆಳಿಗ್ಗೆ ೧೦.೩೦ಕ್ಕೆ ಕೆದಮುಳ್ಳೂರು ಗ್ರಾ.ಪಂ.ನ ೨೦೨೧-೨೨ನೇ ಸಾಲಿನ ಜಮಾಬಂದಿ ಸಭೆ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷೆ ನಡಿಕೇರಿಯಂಡ ಎನ್. ಶೀಲ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಹಾಗೂ ೧೧.೩೦ಕ್ಕೆ ೨೦೨೨-೨೩ನೇ ಸಾಲಿನ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆ ಅದೇ ಸಭಾಂಗಣದಲ್ಲಿ ಜರುಗಲಿದೆ. ಮಧ್ಯಾಹ್ನ ೧೨ ಗಂಟೆಗೆ ೨೦೨೨-೨೩ನೇ ಸಾಲಿನ ಮಹಿಳಾ ಗ್ರಾಮಸಭೆ ಆಯೋಜಿಸಲಾಗಿದೆ.