ಕುಶಾಲನಗರ, ನ. ೧೯: ಕನ್ನಡ ಸಾಹಿತ್ಯ ಪರಿಷತ್ತಿನ ಕುಶಾಲನಗರ ತಾಲೂಕು ಘಟಕದ ವತಿಯಿಂದ ಕನ್ನಡ ರಾಜ್ಯೋತ್ಸವ ಸಮಾರಂಭ ತಾ. ೨೨ ರಂದು ಕುಶಾಲನಗರದ ಮಹಾತ್ಮಗಾಂಧಿ ಪದವಿ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ. ತಾಲೂಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್. ಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ಪೊಲೀಸ್ ಉಪ ಅಧೀಕ್ಷಕ ಆರ್.ವಿ .ಗಂಗಾಧರಪ್ಪ ಮುಖ್ಯ ಭಾಷಣ ಮಾಡಲಿದ್ದಾರೆ.

ವಿಶೇಷ ಅತಿಥಿಗಳಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿ.ಪಿ. ಶಶಿಧರ್, ಮಡಿಕೇರಿ ಆಕಾಶವಾಣಿ ಕೃಷಿ ವಿಭಾಗದ ಮುಖ್ಯಸ್ಥ ಡಾ. ವಿಜಯ ಅಂಗಡಿ, ಕುಶಾಲನಗರ ವಿವೇಕಾನಂದ ವಿದ್ಯಾಸಂಸ್ಥೆಗಳ ಅಧ್ಯಕ್ಷ ಎನ್.ಎನ್. ಶಂಭುಲಿAಗಪ್ಪ, ಮಹಾತ್ಮ ಗಾಂಧಿ ಪದವಿ ಕಾಲೇಜಿನ ಪ್ರಾಂಶುಪಾಲೆ ಲಿಖಿತ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮಕ್ಕೂ ಮುನ್ನಾ, ತಾ. ೨೨ ರ ಬೆಳಿಗ್ಗೆ ೯ ಗಂಟೆಗೆ ಕುಶಾಲನಗರ ಗಣಪತಿ ದೇವಾಲಯದಿಂದ ಕಾಲೇಜು ವಿದ್ಯಾರ್ಥಿಗಳಿಂದ ಕನ್ನಡ ಜಾಗೃತಿ ಜಾಥಾ ತಾವರೆಕೆರೆಯ ಮಹಾತ್ಮ ಗಾಂಧಿ ಕಾಲೇಜಿನ ತನಕ ನಡೆಯಲಿದ್ದು, ಕುಶಾಲನಗರ ವೃತ್ತ ನಿರೀಕ್ಷಕ ಬಿ.ಜಿ. ಮಹೇಶ್ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಾಲೂಕು ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಎಸ್. ನಾಗರಾಜು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.