ಕೊಡ್ಲಿಪೇಟೆ,ನ.೨೦: ಇಲ್ಲಿನ ಕೃಷಿ ವ್ಯವಸಾಯೋತ್ಪನ್ನ ಸಹಕಾರ ಸಂಘದ ಅಧ್ಯಕ್ಷರಾಗಿ ಚನ್ನಕೇಶವ(ಮೂರ್ತಿ) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ಸಭಾಂಗಣದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಚನ್ನಕೇಶವ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಈವರೆಗೆ ಅಧ್ಯಕ್ಷರಾಗಿದ್ದ ಶಂಭುಲಿAಗಪ್ಪ ಅವರು ರಾಜೀನಾಮೆ ನೀಡಿದ್ದರಿಂದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಈ ಸಂದರ್ಭ ಹಿರಿಯ ಸಹಕಾರಿಗಳಾದ ಬಿ.ಕೆ. ಚಿಣ್ಣಪ್ಪ ಸೇರಿದಂತೆ ನಿರ್ದೇಶಕರುಗಳು ಉಪಸ್ಥಿತರಿದ್ದರು.