ಸಿದ್ದಾಪುರ, ನ. ೨೦: ವಿದ್ಯುತ್ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ನೆಲ್ಲಿಹುದಿಕೇರಿ ಗ್ರಾ.ಪಂ. ಕಚೇರಿಯ ವಿದ್ಯುತ್ ಸಂಪರ್ಕವನ್ನು ಚೆಸ್ಕಾಂ ಕಡಿತಗೊಳಿಸಿದೆ. ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡು ಹೆಸರುವಾಸಿಯಾಗಿದ್ದ ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿಯು ಚೆಸ್ಕಾಂಗೆ ರೂ. ೧೬ ಲಕ್ಷಕ್ಕೂ ಅಧಿಕ ಮೊತ್ತದ ಬಿಲ್ ಪಾವತಿ ಮಾಡಬೇಕಿತ್ತು.
ಈ ಬಗ್ಗೆ ಚೆಸ್ಕಾಂ ಅಧಿಕಾರಿಗಳು ಹಲವಾರು ಬಾರಿ ಗ್ರಾಮ ಪಂಚಾಯಿತಿಗೆ ಬಿಲ್ ಪಾವತಿಸುವಂತೆ ತಿಳಿಸಿದ್ದರೂ ಕೂಡ ಪಂಚಾಯಿತಿ ಆಡಳಿತ ಮಂಡಳಿ ಸ್ಪಂದನ ನೀಡದ ಹಿನ್ನೆಲೆಯಲ್ಲಿ ಮೇಲಾಧಿಕಾರಿಗಳ ಆದೇಶದಂತೆ ಇದೀಗ ಚೆಸ್ಕಾಂ ಮೊದಲ ಹಂತವಾಗಿ ಗ್ರಾಮ ಪಂಚಾಯಿತಿ ಕಚೇರಿಯ ಕಟ್ಟಡದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. -ವಾಸು.