ಮಡಿಕೇರಿ, ನ. ೧೯: ಮತದಾರರ ಪಟ್ಟಿಯ ಮಾಹಿತಿ ಕಳವು ಮಾಡುತ್ತಿದ್ದ ಆರೋಪಕ್ಕೆ sರಾಜ್ಯದಲ್ಲಿ ಸಂಸ್ಥೆಯೊAದು ಗುರಿಯಾಗಿದೆ. ಇದೇ ರೀತಿಯ ಅವ್ಯವಹಾರ ಕೊಡಗಿನಲ್ಲಿ ನಡೆಯದಂತೆ ಜಿಲ್ಲಾಡಳಿತ ಎಚ್ಚರವಹಿಸಬೇಕೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಒತ್ತಾಯಿಸಿದರು.
ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕೊಡಗು ಜಿಲ್ಲೆಯಲ್ಲಿ ನಡೆದ ಪಂಚಾಯಿತಿ ಚುನಾವಣೆಗಳ ಸಂದರ್ಭ ಬಹಳಷ್ಟು ಮತದಾರರ ಹೆಸರು ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ಬಿಟ್ಟುಹೋಗಿದೆ. ಸರಕಾರದಿಂದ ನೇಮಕಗೊಂಡ ಬೂತ್ ಮಟ್ಟದ ಅಧಿಕಾರಿಗಳು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವಂತಾಗಬೇಕು. ಮತದಾರರ ಪರಿಷ್ಕರಣೆ ನ್ಯಾಯಯುತವಾಗಿ ಆಗಬೇಕು. ಇಲ್ಲದಿದ್ದಲ್ಲಿ ಜಿಲ್ಲಾಡಳಿತವೇ ನೇರ ಹೊಣೆ ವಹಿಸಬೇಕೆಂದರು.
ಜಿಲ್ಲೆಯಲ್ಲಿ ೫೪೨ ಬೂತ್‌ಗಳಿದ್ದು ಎಲ್ಲಾ ಬೂತ್‌ಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿಯದೆ ನ್ಯಾಯಯುತವಾಗಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸುವಂತೆ ಆಗ್ರಹಿಸಿದರು.
ಜಿಲ್ಲಾ ಕಾಂಗ್ರೆಸ್ ವಕ್ತಾರ ಟಾಟು ಮೊಣ್ಣಪ್ಪ ಅವರು ಮಾತನಾಡಿ, ಕೆಲ ಗ್ರಾಮೀಣ ಭಾಗಗಳಲ್ಲಿ ಮತದಾರರ ಪರಿಷ್ಕರಣೆ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದಿದ್ದರೆ ಅಂತಹವರ ಹೆಸರು ಮತದಾರರ ಪಟ್ಟಿಯಿಂದ ಹೊರಗುಳಿದ ಕೆಲವು ಉದಾಹರಣೆ ಗಳಿವೆ. ಈ ರೀತಿ ಆಗದಂತೆ ಜಿಲ್ಲಾಡಳಿತ ಸೂಕ್ತ ಕ್ರಮ ವಹಿಸುವಂತೆ ಒತ್ತಾಯಿಸಿದರು.
ರಸ್ತೆ ದುಸ್ಥಿತಿ ಬಗ್ಗೆ ಅಸಮಾಧಾನ - ಶ್ವೇತ ಪತ್ರ ಹೊರಡಿಸಲು ಒತ್ತಾಯ
ಕೊಡಗಿನ ಎಲ್ಲಾ ರಸ್ತೆಗಳು ಗುಂಡಿಯAತಾಗಿದ್ದು, ಮಳೆಗಾಲದಲ್ಲಿ ಬಿಡುಗಡೆಯಾಗುವ ಅನುದಾನವನ್ನು ಶಾಸಕರುಗಳು ಸಮರ್ಪಕ ರೀತಿಯಲ್ಲಿ ಬಳಸದೆ ಕ್ಷೇತ್ರಗಳಲ್ಲಿ ನಿರ್ಲಕ್ಷö್ಯ ವಹಿಸಿದ್ದಾರೆ ಎಂದು ಧರ್ಮಜ ಉತ್ತಪ್ಪ ಆರೋಪಿಸಿದರು. ಮಳೆಗಾಲದ ಪರಿಹಾರ ನಿಧಿಯಡಿ ನಡೆದಂತ ಕಾಮಗಾರಿಗಳು, ಖರ್ಚು ಸಂಬAಧ ಸರಕಾರ ಶ್ವೇತಪತ್ರ ಹೊರಡಿಸುವಂತೆ ಆಗ್ರಹಿಸಿದರು. ಪೊನ್ನಂಪೇಟೆ ತಾಲೂಕಿನ ಕಾನೂರು ಹರಿಹರ ನಾಲ್ಕೇರಿ ರಸ್ತೆಗಳ ಅಭಿವೃದ್ಧಿಗೆ ಕಾಂಗ್ರೆಸ್ ಸರಕಾರವಿದ್ದಾಗ ೧ ಕೋಟಿ ೯೫ ಲಕ್ಷ ಬಿಡುಗಡೆಯಾಗಿ ಭೂಮಿ ಪೂಜೆ ಮಾಡಿ ೫ ವರ್ಷಗಳಾದರೂ ಇಲ್ಲಿಯ ವರೆಗೆ ರಸ್ತೆ ಕಾಮಗಾರಿ ಆರಂಭವಾಗಿಲ್ಲ ಎಂದರು. (ಮೊದಲ ಪುಟದಿಂದ) ಇದಲ್ಲದೆ ಲೋಕೋಪಯೋಗಿ ಇಲಾಖೆಗೆ ಬಿಡುಗಡೆಯಾಗುವ ರಸ್ತೆ ನಿರ್ವಹಣಾ ಅನುದಾನ ಬಳಕೆಯಾಗುತ್ತಿಲ್ಲ ಎಂದೂ ಆರೋಪಿಸಿದರು. Zಸುದ್ದಿಗೋಷ್ಠಿಯಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನ, ಕಾಂಗ್ರೆಸ್ ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ಬಾನಂಡ ಪ್ರಥ್ಯು, ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ಹೊಸೂರು ಸೂರಜ್, ಮಾಜಿ ತಾಲೂಕು ಪಂಚಾಯತಿ ಸದಸ್ಯ ಜಾನ್ಸನ್ ಹಾಜರಿದ್ದರು.