ಸೋಮವಾರಪೇಟೆ, ನ. ೧೯: ತಾಲೂಕು ಆಡಳಿತದ ವತಿಯಿಂದ ತಹಶೀಲ್ದಾರ್ ಎಸ್.ಎನ್.ನರಗುಂದ ಅವರ ನೇತೃತ್ವದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮತದಾನದ ಜಾಗೃತಿ ಜಾಥಾ ನಡೆಯಿತು. ವಿವಿಧ ಇಲಾಖಾಧಿಕಾರಿಗಳು, ಸಂತ ಜೋಸೆಫರ ಕಾಲೇಜಿನ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿ ಮತದಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.