ಮಡಿಕೇರಿ, ನ. ೧೯: ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ ಕೊಡಗು ಜಿಲ್ಲಾ ಪಂಚಾಯಿತಿ ಮತ್ತು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಮಡಿಕೇರಿ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಕಾವೇರಿ ಶಾಲೆಯ ೯ನೇ ತರಗತಿಯ ವಿದ್ಯಾರ್ಥಿನಿ ಮೋಕ್ಷ ಎ.ಕೆ. ಭಾಗವಹಿಸಿ ಪ್ರಥಮ ಮೆರಿಟ್ ಬಹುಮಾನವನ್ನು ಪಡೆದಿದ್ದು, ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.