ಕೂಡಿಗೆ: ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಕುವೆಂಪು ಕನ್ನಡ ಭಾಷಾ ಸಂಘ, ರಾಷ್ಟಿçÃಯ ಸೇವಾ ಯೋಜನೆ ಹಾಗೂ ಶಾಲಾಭಿವೃದ್ಧಿ ಸಮಿತಿ ವತಿಯಿಂದ ಭಕ್ತ ಕನಕದಾಸ ಜಯಂತಿಯನ್ನು ಆಚರಿಸಲಾಯಿತು.
ಕನಕದಾಸರ ಜೀವನ ಚರಿತ್ರೆ ಹಾಗೂ ಅವರು ದಾಸ ಸಾಹಿತ್ಯಕ್ಕೆ ನೀಡಿದ ಕೊಡುಗೆ ಕುರಿತು ಮಾತನಾಡಿದ ಕನ್ನಡ ಭಾಷಾ ಶಿಕ್ಷಕ ಕೆ. ಗೋಪಾಲಕೃಷ್ಣ, ಕನಕದಾಸರು ಈ ನಾಡು ಕಂಡ ಶ್ರೇಷ್ಠ ದಾರ್ಶನಿಕ ಎಂದು ಬಣ್ಣಿಸಿದರು. ಕನಕದಾಸರು ಕರ್ನಾಟಕದಲ್ಲಿ ೧೫, ೧೬ ನೇ ಶತಮಾನ ದಲ್ಲಿ ಜನಪ್ರಿಯವಾದ ಭಕ್ತಿಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರಾಗಿದ್ದು, ಹಲವಾರು ವಚನಗಳನ್ನು ನೀಡಿದ್ದಾರೆ ಎಂದರು.
೧೬ನೇ ಶತಮಾನದಲ್ಲಿ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಎಂದರೆ ಕನಕದಾಸರು ಎಂದರೆ ತಪ್ಪಾಗಲಾರದು. ವಿದ್ಯಾರ್ಥಿಗಳು ಕನಕದಾಸರ ಚಿಂತನೆಗಳನ್ನು ಮೈಗೂಡಿಸಿ ಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್ ಮಾತನಾಡಿ, ಭಕ್ತ ಕನಕದಾಸರು ದಾಸ ಸಾಹಿತ್ಯದ ಮೂಲಕ ಗಮನಸೆಳೆದವರು. ಅವರ ಕೀರ್ತನೆಗಳು ಸಮಾಜಕ್ಕೆ ಪೂರಕವಾಗಿವೆ ಎಂದರು.
ಶಿಕ್ಷಕರಾದ ಎಂ.ಟಿ. ದಯಾನಂದ ಪ್ರಕಾಶ್, ಬಿ.ಡಿ. ರಮ್ಯ, ಎಸ್.ಎಂ. ಗೀತಾ ವೇದಿಕೆಯಲ್ಲಿದ್ದರು.
ವಿದ್ಯಾರ್ಥಿಗಳು ಕನಕದಾಸರ ಜೀವನ ಚರಿತ್ರೆ ಕುರಿತು ಮಾತನಾಡಿದರು.ಪೊನ್ನಂಪೇಟೆ : ಪೊನ್ನಂಪೇಟೆ ಕ್ಲಸ್ಟರ್‌ನ ಕುಶಾಲಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕನಕ ಜಯಂತಿ ಆಚರಿಸಲಾಯಿತು. ಈ ಸಂದರ್ಭ ಮುಖ್ಯ ಶಿಕ್ಷಕ ಎ. ಎಸ್ವಾ. ಸುವರ್ಣ, ಶಿಕ್ಷಕಿ ಭವ್ಯ, ವಿದ್ಯಾರ್ಥಿಗಳು ಅಡುಗೆಯವರು ಹಾಜರಿದ್ದರು. ಮಕ್ಕಳಿಗೆ ಸಿಹಿ ವಿತರಿಸಲಾಯಿತು.