ಕುಶಾಲನಗರ, ನ. ೨೦: ಗಣಪತಿ ದೇವಾಲಯ ಜಾತ್ರೆ ಅಂಗವಾಗಿ ಗುಂಡೂರಾವ್ ಬಡಾವಣೆಯಲ್ಲಿ ನಡೆಯುತ್ತಿರುವ ಜಾತ್ರಾ ಮಳಿಗೆಗಳಿಗೆ ಕುಶಾಲನಗರ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪಂಚಾಯಿತಿ ಆರೋಗ್ಯಾಧಿಕಾರಿ ಉದಯ್‌ಕುಮಾರ್ ಮತ್ತು ದಫೇದಾರ್ ಮೋಹನ್‌ಕುಮಾರ್ ಹಾಗೂ ಸಿಬ್ಬಂದಿಗಳು ಅಂಗಡಿ ಮಳಿಗೆಗಳಿಗೆ ಭೇಟಿ ಮಾಡಿ ಸ್ವಚ್ಛತೆ ಹಾಗೂ ನಿಯಮಬಾಹಿರ ಪ್ಲಾಸ್ಟಿಕ್ ಬಳಕೆ ಬಗ್ಗೆ ಪರಿಶೀಲಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ಮತ್ತು ಸಿಬ್ಬಂದಿಗಳು ಗುರುವಾರ ಜಾತ್ರಾ ಮೈದಾನದ ಅಂಗಡಿ ಮಳಿಗೆಗಳಿಗೆ ಭೇಟಿ ನೀಡಿ ಆಹಾರಗಳ ಗುಣಮಟ್ಟ ಪರಿಶೀಲನೆ ನಡೆಸಿದರು.