ಮಡಿಕೇರಿ, ನ. ೨೦: ಭಾರತ ಸಂವಿಧಾನದ ಪಿತಾಮಹ, ಸಾಮಾಜಿಕ ಕ್ಷೇತ್ರದ ಸುಧಾರಕ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಗ್ರ ಬರಹಗಳು ಮತ್ತು ಭಾಷಣಗಳನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಕರೆ ನೀಡಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶೇಷ ಘಟಕ ಯೋಜನೆಯಡಿ ‘ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಓದು’ ಕುರಿತು ಬುಧವಾರ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸ್ವಾತಂತ್ರö್ಯ ಭಾರತದ ಮೊದಲ ಕಾನೂನು ಸಚಿವರಾಗಿ ಹಲವಾರು ಕಾಯ್ದೆ ಮತ್ತು ಕಾನೂನುಗಳನ್ನು ಸಂವಿಧಾನದ ಮೂಲಕ ಜಾರಿಗೊಳಿಸಿ ದ್ದಾರೆ. ಬಾಂಬೆ ವಿವಿಯಲ್ಲಿ ಅರ್ಥಶಾಸ್ತç ಮತ್ತು ರಾಜ್ಯಶಾಸ್ತç ಪದವಿ, ಬಳಿಕ ಅಮೆರಿಕಾದ ಕೊಲಂಬಿಯಾ ವಿಶ್ವ ವಿದ್ಯಾನಿಲಯದಲ್ಲಿ ಅರ್ಥಶಾಸ್ತç ಅಧ್ಯಯನ ಮಾಡಿದ್ದಾರೆ. ನಂತರ ಲಂಡನ್ನ ವಿವಿಯಲ್ಲಿ ಡಿಎಸ್ಸಿ ಪದವಿ ಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ವಿದೇಶದಲ್ಲಿ ಹೆಚ್ಚಿನ ಅಧ್ಯಯನ ಮಡಿಕೇರಿ, ನ. ೨೦: ಭಾರತ ಸಂವಿಧಾನದ ಪಿತಾಮಹ, ಸಾಮಾಜಿಕ ಕ್ಷೇತ್ರದ ಸುಧಾರಕ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಗ್ರ ಬರಹಗಳು ಮತ್ತು ಭಾಷಣಗಳನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಕರೆ ನೀಡಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶೇಷ ಘಟಕ ಯೋಜನೆಯಡಿ ‘ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಓದು’ ಕುರಿತು ಬುಧವಾರ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸ್ವಾತಂತ್ರö್ಯ ಭಾರತದ ಮೊದಲ ಕಾನೂನು ಸಚಿವರಾಗಿ ಹಲವಾರು ಕಾಯ್ದೆ ಮತ್ತು ಕಾನೂನುಗಳನ್ನು ಸಂವಿಧಾನದ ಮೂಲಕ ಜಾರಿಗೊಳಿಸಿ ದ್ದಾರೆ. ಬಾಂಬೆ ವಿವಿಯಲ್ಲಿ ಅರ್ಥಶಾಸ್ತç ಮತ್ತು ರಾಜ್ಯಶಾಸ್ತç ಪದವಿ, ಬಳಿಕ ಅಮೆರಿಕಾದ ಕೊಲಂಬಿಯಾ ವಿಶ್ವ ವಿದ್ಯಾನಿಲಯದಲ್ಲಿ ಅರ್ಥಶಾಸ್ತç ಅಧ್ಯಯನ ಮಾಡಿದ್ದಾರೆ. ನಂತರ ಲಂಡನ್ನ ವಿವಿಯಲ್ಲಿ ಡಿಎಸ್ಸಿ ಪದವಿ ಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ವಿದೇಶದಲ್ಲಿ ಹೆಚ್ಚಿನ ಅಧ್ಯಯನ ತಂದೆ ತಾಯಂದಿರು ತಮ್ಮ ಮಕ್ಕಳ ಬಗ್ಗೆ ಕನಸು ಕಟ್ಟಿಕೊಂಡಿರುತ್ತಾರೆ. ಪೋಷಕರ ಕನಸನ್ನು ನನಸು ಮಾಡುವತ್ತ ವಿದ್ಯಾರ್ಥಿಗಳು ಅಧ್ಯಯನ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಸಲಹೆ ಮಾಡಿದರು.
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಿ.ಜೆ. ಜವರಪ್ಪ ಅವರು ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರು ‘ವಿಶ್ವ ಜ್ಞಾನಿ, ಕ್ರಾಂತಿಕಾರಿ ಸಮಾಜ ಸುಧಾರಕ ಎಂದು ವರ್ಣಿಸಿದರು.
ಸಮಾಜದ ಎಲ್ಲಾ ವರ್ಗದ ಬಡ ಜನರಿಗೆ ಸಮಾನ ಅವಕಾಶಗಳು ದೊರೆಯಬೇಕು ಎಂಬುದು ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯವಾಗಿತ್ತು. ಶಿಕ್ಷಣ, ಸಂಘಟನೆ, ಹೋರಾಟದ ಮೂಲಕ ಸಮಾಜದಲ್ಲಿ ಸೌಲಭ್ಯ ಪಡೆಯಲು ಸಾಧ್ಯ ಎಂದು ಅಂಬೇಡ್ಕರ್ ಅವರು ಪ್ರತಿಪಾದಿಸಿದರು ಎಂದು ನುಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಮಾತನಾಡಿ, ಸರ್ಕಾರ ಡಾ. ಬಿ.ಆರ್. ಅಂಬೇಡ್ಕರ್ ಅವರ ‘ಸಮಗ್ರ ಬರಹಗಳು ಮತ್ತು ಭಾಷಣಗಳ’ ಕುರಿತು ೨೧ ಸಂಪುಟಗಳನ್ನು ಹೊರತಂದಿದ್ದು, ಈ ಪುಸ್ತಕಗಳನ್ನು ಅಧ್ಯಯನ ಮಾಡಬೇಕು ಎಂದರು.
ಡಾ. ಬಿ.ಆರ್. ಅಂಬೇಡ್ಕರ್ ಅವರ ಓದು, ಜೀವನ ಮತ್ತು ಬದುಕು ಕುರಿತು ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಎಂ.ಎಸ್. ನೇತ್ರಾವತಿ (ಪ್ರಥಮ), ಎ.ಎಸ್. ಜಸ್ಮಿತಾ (ದ್ವಿತೀಯ), ಹೆಚ್. ನೇಹಾ ಸತೀಶ್ (ತೃತೀಯ) ವಿದ್ಯಾರ್ಥಿನಿ ಯರಿಗೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಗ್ರ ಬರಹಗಳು ಮತ್ತು ಭಾಷಣಗಳ ಪುಸ್ತಕವನ್ನು ಬಹುಮಾನವಾಗಿ ನೀಡಲಾಯಿತು. ಇವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ, ಬದುಕು, ಸಾಧನೆ ಕುರಿತು ಮಾತನಾಡಿದರು.
ಸಹಾಯಕ ಪ್ರಾಧ್ಯಪಕರಾದ ಕೋರನ ಸರಸ್ವತಿ, ಕನ್ನಿಕಾ, ಸತೀಶ್, ನಿರ್ಮಲ, ನಮಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಣಜೂರು ಮಂಜುನಾಥ್ ಇತರರು ಇದ್ದರು.