ಮಡಿಕೇರಿ, ನ.೨೦ : ಭಾರತೀಯ ಜನತಾ ಪಕ್ಷದಲ್ಲಿನ ಆಂತರಿಕ ವಿಚಾರಗಳಿಂದ ಮನನೊಂದು ಮಡಿಕೇರಿ ನಗರ ಬಿಜೆಪಿ ಅಧ್ಯಕ್ಷ ಮನು ಮಂಜುನಾಥ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಕ್ರಿಯ ಹಿಂದೂ ಕಾರ್ಯಕರ್ತ ರಾಗಿದ್ದುಕೊಂಡು, ರಾಷ್ಟಿçÃಯ ಸ್ವಯಂ ಸೇವಾ ಸಂಘದಲ್ಲಿಯೂ ತೊಡಗಿಸಿ ಕೊಂಡು ಮಡಿಕೇರಿ ನಗರ ಬಿಜೆಪಿ ಅಧ್ಯಕ್ಷರಾದ ಬಳಿಕ ನಗರಸಭೆಯಲ್ಲಿ ಬಿಜೆಪಿ ಅಧಿಕ ಮತಗಳಿಂದ ಗೆಲುವು ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮನು ಮಂಜುನಾಥ್ ರಾಜೀನಾಮೆ ಪಕ್ಷದ ಕಾರ್ಯಕರ್ತರಲ್ಲಿ ದಿಗ್ರö್ಭಮೆ ಮೂಡಿಸಿದೆ. ಪಕ್ಷದ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.