ಮಡಿಕೇರಿ, ನ. ೨೦: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಸಹಕಾರದಲ್ಲಿ ಮಡಿಕೇರಿ ನಗರಸಭೆ ವತಿಯಿಂದ ನಗರಸಭೆಯ ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗೆ ಆರೋಗ್ಯ ತಪಾಸಣಾ ಶಿಬಿರ (ಮಾಸ್ಟರ್ ಹೆಲ್ತ್ ಚೆಕ್‌ಅಪ್)ವು ನಡೆಯಿತು. ನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಜಿಲ್ಲಾ ಆಸ್ಪತ್ರೆಯಲ್ಲಿ ಏರ್ಪಡಿಸಲಾಗಿದ್ದ ಆರೋಗ್ಯ ತಪಾಸಣಾ ಉಚಿತ ಶಿಬಿರಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಮಾಹಿತಿ ಪಡೆದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಕಾರದಲ್ಲಿ ನಗರಸಭೆ ವತಿಯಿಂದ ೮೦ ಪೌರಕಾರ್ಮಿಕರು ಮತ್ತು ಸ್ವಚ್ಛತಾ ಸಿಬ್ಬಂದಿಗೆ ಆರೋಗ್ಯ ತಪಾಸಣೆ ಏರ್ಪಡಿಸಲಾಗಿದ್ದು, ಇದರ ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ತಿಳಿಸಿದರು. ಪ್ರತಿನಿತ್ಯ ನಗರ ಸ್ವಚ್ಛ ಮಾಡುವಲ್ಲಿ ಪೌರಕಾರ್ಮಿಕರು ಆರೋಗ್ಯವನ್ನು ಬದಿಗಿಟ್ಟು ಕಾರ್ಯ ನಿರ್ವಹಿಸುತ್ತಾರೆ. ಪೌರಕಾರ್ಮಿಕರು ಆರೋಗ್ಯಯುತರಾಗಿದ್ದಲ್ಲಿ ಉತ್ತಮ ಜೀವನ ನಡೆಸಲು ಸಾಧ್ಯ. ಆ ನಿಟ್ಟಿನಲ್ಲಿ ಆರೋಗ್ಯ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿ ಸಲಹೆ ಮಾಡಿದರು. ಆರೋಗ್ಯ ತಪಾಸಣೆಗೆ ಸಂಬAಧಿಸಿದAತೆ ಜಿಲ್ಲಾ ಶಸ್ತç ಚಿಕಿತ್ಸಕರಾದ ಡಾ. ನಂಜುAಡಯ್ಯ ಅವರು ಮಾಹಿತಿ ನೀಡಿದರು. ನಗರಸಭೆ ಅಧ್ಯಕ್ಷ ನೆರವಂಡ ಅನಿತಾ ಪೂವಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್. ವೆಂಕಟೇಶ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಕಾರ್ಯಪ್ಪ, ವೈದ್ಯಕೀಯ ಅಧೀಕ್ಷಕ ಡಾ. ರೂಪೇಶ್ ಗೋಪಾಲ್, ಡಾ. ಲೋಕೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಬಸಪ್ಪ, ಪೌರಾಯುಕ್ತ ವಿಜಯ, ನಗರಸಭೆ ಸದಸ್ಯರು ಇತರರು ಇದ್ದರು.