ಸಿದ್ದಾಪುರ, ನ. ೨೦: ಕಾಡಾನೆಗಳ ಹಾವಳಿಯನ್ನು ತಡೆಗಟ್ಟಬೇಕು, ಶಾಶ್ವತ ಯೋಜನೆಯನ್ನು ರೂಪಿಸಬೇಕು ಹಾಗೂ ಹೊಂಡ ಗುಂಡಿಗಳಿAದ ಕೂಡಿರುವ ರಸ್ತೆಗಳನ್ನು ದುರಸ್ತಿಪಡಿಸಬೇಕು, ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಬೇಕು, ಹಾಗೆಯೇ ಕುಡಿಯುವ ನೀರಿನ ಯೋಜನೆಯನ್ನು ಕೂಡಲೇ ಅನುಷ್ಠಾನಕ್ಕೆ ತರಬೇಕೆಂದು ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಗ್ರಾಮಸ್ಥರು ಕಣ್ಣಂಗಾಲ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಒತ್ತಾಯಿಸಿದರು.
ಶನಿವಾರದಂದು ಕಣ್ಣಂಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಹಾಗೂ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ನಡೆಯಿತು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಮಾತನಾಡಿ, ಕಣ್ಣಂಗಾಲ ಗ್ರಾ.ಪಂ. ವ್ಯಾಪ್ತಿಯ ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಕಾಡಾನೆಗಳು ಮಿತಿಮೀರಿದ್ದು, ಕಾಫಿ ತೋಟಗಳಲ್ಲಿ ಬೀಡುಬಿಟ್ಟು ದಾಂಧಲೆ ನಡೆಸುತ್ತಿವೆ. ಅಲ್ಲದೇ ಕೃಷಿ ಫಸಲುಗಳನ್ನು ನಾಶಗೊಳಿಸುತ್ತಿದ್ದು, ಗ್ರಾಮಸ್ಥರು ಭಯದಲ್ಲಿ ಜೀವನ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು. ಕೂಡಲೇ ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಹಾಗೂ ಅರಣ್ಯ ಇಲಾಖಾಧಿಕಾರಿಗಳು ಶಾಶ್ವತ ಯೋಜನೆಯನ್ನು ರೂಪಿಸಬೇಕೆಂದು ಒತ್ತಾಯಿಸಿದರು. ಕಣ್ಣಂಗಾಲ ವ್ಯಾಪ್ತಿಯಲ್ಲಿ ಮುಖ್ಯ ರಸ್ತೆಗಳು ಸೇರಿದಂತೆ ಹಲವಾರು ರಸ್ತೆಗಳು ತೀವ್ರವಾಗಿ ಹದಗೆಟ್ಟಿದ್ದು, ವಾಹನಗಳು ಸಂಚರಿಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೂಡಲೇ ಹದಗೆಟ್ಟಿರುವ ರಸ್ತೆಯನ್ನು ದುರಸ್ತಿಪಡಿಸುವಂತೆ ಒತ್ತಾಯಿಸಿದರು.
ಕಣ್ಣಂಗಾಲ ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆ ತೀವ್ರವಾಗಿದ್ದು, ಈ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸಬೇಕೆAದರು. ಕಣ್ಣಂಗಾಲ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಜಲಜೀವನ್ ಯೋಜನೆಯನ್ನು ಕೂಡಲೇ ಅನುಷ್ಠಾನಕ್ಕೆ ತಂದು ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕೆಂದು ಒತ್ತಾಯಿಸಿದರು. ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಎಸ್ ಗೋಪಾಲಕೃಷ್ಣ ಮಾತನಾಡಿ ಸಮೀಪದ ನದಿ ಪಾತ್ರದಿಂದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಕೊಡುವಂತೆ ಒತ್ತಾಯಿಸಿದರು.
ಕಣ್ಣಂಗಾಲ ಗ್ರಾಮದ ನಿವಾಸಿ ತರುಣ್ ಗೌಡ ಮಾತನಾಡಿ, ಕಣ್ಣಂಗಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನವನ್ನು ಶುಚಿತ್ವಗೊಳಿಸದೇ ಪಾಳು ಬಿಡಲಾಗಿದೆ. ಶಾಲೆಗೆ ಸೇರಿದ ಕಾಫಿ ತೋಟದಿಂದಲೂ ವರಮಾನ ಬರುತ್ತಿದ್ದರೂ ಕೂಡ ಶಾಲಾ ಆಡಳಿತ ಮಂಡಳಿ ಹಾಗೂ ಶಾಲೆಯವರು ಮೈದಾನ ಶುಚಿತ್ವಗೊಳಿಸದೇ ನಿರ್ಲಕ್ಷö್ಯ ವಹಿಸುತ್ತಿರುವುದು ಸರಿಯಾದ ಕ್ರಮವಲ್ಲ ಎಂದರು. ಇದರಿಂದಾಗಿ ಕ್ರೀಡಾಪಟುಗಳಿಗೆ ಸಮಸ್ಯೆಯಾಗುತ್ತಿದೆ ಎಂದು ದೂರಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ ಮಾತನಾಡಿ, ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಿಂದಾಗಿ ಗ್ರಾಮಸ್ಥರ ಹಲವಾರು ಸಮಸ್ಯೆಗಳು ಬಗೆಹರಿದಿದ್ದು, ಇದೀಗ ಸರ್ಕಾರವು ಜಾರಿಗೆ ತಂದಿರುವ ಪೌತಿ ಖಾತೆ ಆಂದೋಲನದಿAದಾಗಿ ಕಂದಾಯ ಇಲಾಖೆಗೆ ಸಂಬAಧಪಟ್ಟ ಕಡತಗಳ ತಡಸ ಕಾರ್ಯಗಳು ತ್ವರಿತ ಗತಿಯಲ್ಲಿ ನಡೆಯುತ್ತಿವೆ ಎಂದರು.
ಕಾರ್ಯಕ್ರಮದಲ್ಲಿ ವೀರಾಜಪೇಟೆ ತಾಲೂಕು ತಹಶೀಲ್ದಾರ್ ಅರ್ಚನಾ ಭಟ್, ಉಪತಹಶೀಲ್ದಾರ್ ಪೊನ್ನು, ಅಮ್ಮತ್ತಿ ಹೋಬಳಿ ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್, ತಾಲೂಕು ಕಾರ್ಯನಿರ್ವಹಣಾಧಿಕಾರಿ ಅಪ್ಪಣ್ಣ, ಕಣ್ಣಂಗಾಲ ಗ್ರಾ.ಪಂ ಅಧ್ಯಕ್ಷ ಗಣೇಶ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಗ್ರಾಮ ಲೆಕ್ಕಿಗರು ಹಾಜರಿದ್ದರು. ಸಭೆಯಲ್ಲಿ ಗ್ರಾಮಸ್ಥರಾದ ಮಚ್ಚಾರಂಡ ಗಣೇಶ್, ವಕೀಲರಾದ ದೇವಲಿಂಗ, ಗೋಪಾಲಕೃಷ್ಣ ಸೇರಿದಂತೆ ಹಲವಾರು ಮಂದಿ ಗ್ರಾಮಸ್ಥರು ತಮ್ಮ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಗಮನ ಸೆಳೆದರು.