ಸೋಮವಾರಪೇಟೆ, ನ. ೨೦: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ತಾಲೂಕು ಘಟಕದ ವತಿಯಿಂದ ಶಾಲಾ, ಕಾಲೇಜು ಮತ್ತು ಸಾರ್ವಜನಿಕರಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ನಡೆದವು.
ಇಲ್ಲಿನ ಮಹಿಳಾ ಸಮಾಜದಲ್ಲಿ ನಡೆದ ಕಾರ್ಯಕ್ರಮವನ್ನು ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಡಿ. ವಿಜೇತ್ ಉದ್ಘಾಟಿಸಿದರು. ನಂತರ ಅವರು ಮಾತನಾಡಿ, ವಿದ್ಯಾರ್ಥಿ ಗಳು ಕನ್ನಡ ಭಾ಼ಷೆಯನ್ನು ಹೆಚ್ಚಾಗಿ ಬಳಸುವುದರ ಮೂಲಕ ಭಾಷಾ ಬೆಳವಣಿಗೆಗೆ ತಮ್ಮ ಕೊಡುಗೆ ನೀಡಬೇಕು ಎಂದು ಮನವಿ ಮಾಡಿದರು.
ವಿದ್ಯಾರ್ಥಿಗಳಿದ್ದಾಗಲೇ ಕವನ, ಚುಟುಕು, ಕತೆ, ಕಾದಂಬರಿಗಳನ್ನು ಬರೆಯುವುದಕ್ಕೆ ಅಭ್ಯಾಸ ಮಾಡಿಕೊಳ್ಳ ಬೇಕು. ಆ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರದಲ್ಲೂ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.
ಗೀತಗಾಯನ, ನೃತ್ಯ, ಚಿತ್ರಕಲೆ, ರಸಪ್ರಶ್ನೆ, ಛದ್ಮವೇಷ ಸ್ಪರ್ಧೆಗಳು ನಡೆದವು. ಕಾರ್ಯಕ್ರಮದಲ್ಲಿ ಗೌರವ ಕಾರ್ಯದರ್ಶಿಗಳಾದ ಎ.ಪಿ. ವೀರರಾಜು, ಜ್ಯೋತಿ, ಪದಾಧಿಕಾರಿ ಗಳಾದ ಕೆ.ಪಿ. ದಿನೇಶ್, ಸಿ.ಎಸ್. ನಾಗರಾಜ್, ಕೀರ್ತಿಪ್ರಸಾದ್, ಎಚ್.ಜೆ. ಜವರಪ್ಪ, ಎಂ.ಎ. ರುಬೀನಾ, ಎಚ್.ಎ. ನಾಗರಾಜ್, ಬಿ.ಬಿ. ನಾಗರಾಜ್ ಮತ್ತಿತರರು ಭಾಗವಹಿಸಿದ್ದರು.