ಸಿದ್ದಾಪುರ, ನ. ೨೦: ಮಾಲ್ದಾರೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಗೆ ಒಳಪಡುವ ದೊಡ್ಡಹಡ್ಲು ಹಾಡಿಯಲ್ಲಿ ರೂ. ೮೦ ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿದ ಕಾಂಕ್ರೀಟ್ ರಸ್ತೆಯನ್ನು ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಾಲ್ದಾರೆಯ ದೊಡ್ಡಹಡ್ಲು ಹಾಡಿಗಳಿಗೆ ತೆರಳುವ ರಸ್ತೆ ತೀವ್ರವಾಗಿ ಹದಗೆಟ್ಟಿತ್ತು. ಈ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮದ ಅನುದಾನದಿಂದ ರೂ. ೮೦ ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಯನ್ನು ನಿರ್ಮಾಣ ಮಾಡಲಾಗಿದೆ. ಕಾವೇರಿ ನೀರಾವರಿ ನಿಗಮದ ವತಿಯಿಂದ ವೀರಾಜಪೇಟೆ ಕ್ಷೇತ್ರದಲ್ಲಿ ಈಗಾಗಲೇ ರೂ.೧೨ ಕೋಟಿಗೂ ಅಧಿಕ ಅನುದಾನದಲ್ಲಿ ರಸ್ತೆಗಳು ಸೇರಿದಂತೆ ವಿವಿಧ ಕಾಮಗಾರಿಗಳನ್ನು ಮಾಡಲಾಗಿದೆ ಎಂದರು.
ಈ ಸಂದರ್ಭ ಮಾಲ್ದಾರೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸಮೀರ್, ತಾಲೂಕು ಕಾರ್ಯನಿರ್ವಹಣಾಧಿಕಾರಿ ಅಪ್ಪಣ್ಣ, ಪಿ.ಡಿ.ಓ. ರಾಜೇಶ್, ಕಾವೇರಿ ನೀರಾವರಿ ನಿಗಮದ ಅಧಿಕಾರಿ ನವೀನ್, ಗ್ರಾ.ಪಂ. ಸದಸ್ಯರುಗಳಾದ ಕುಂಞಣ್ಣ, ಸರಸ್ವತಿ, ಚಂದ್ರ ಕೆ.ಕೆ., ಮಾಜಿ ಗ್ರಾ.ಪಂ. ಸದಸ್ಯರುಗಳಾದ ಅಜಿನೀಕಂಡ ರಘು ಕರುಂಬಯ್ಯ, ರವಿ, ಯತೀಶ್, ಶಾಸಕರ ಆಪ್ತ ಕಾರ್ಯದರ್ಶಿ ಮಧು ದೇವಯ್ಯ, ಅಂಬೇಡ್ಕರ್ ಸೇನೆಯ ಜಿಲ್ಲಾಧ್ಯಕ್ಷ ಟಿ.ಆರ್. ಸತೀಶ್ ಹಾಗೂ ಇನ್ನಿತರರು ಹಾಜರಿದ್ದರು.