ಮಡಿಕೇರಿ, ನ.೨೧: ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ, ಬಾಲಕಿಯರ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಗೆ ಅರ್ಜುನ ಪ್ರಶಸ್ತಿ ವಿಜೇತ ಎಸ್.ವಿ.ಸುನಿಲ್, ಅಂತರರಾಷ್ಟಿçÃಯ ಹಾಕಿ ಕ್ರೀಡಾಪಟು ವಿ.ಎಸ್.ವಿನಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಸದಸ್ಯ ಎಸ್.ಸಿ.ಸತೀಶ್ ಅವರುಗಳು ಚಾಲನೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸಾಯಿ ಹಾಕಿ ಟರ್ಫ್ ಮೈದಾನದಲ್ಲಿ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ, ಬಾಲಕ, ಬಾಲಕಿಯರ ಹಾಕಿ ಪಂದ್ಯಾವಳಿಗೆ ಗಣ್ಯರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಎಸ್.ವಿ.ಸುನಿಲ್ ಕ್ರೀಡಾಪಟುಗಳು ಜಿಲ್ಲಾ, ರಾಜ್ಯ ಹಾಗೂ ದೇಶವನ್ನು ಪ್ರತಿನಿಧಿಸುವಂತಾಗಬೇಕು ಎಂದು ಕರೆ ನೀಡಿದರು. ಕ್ರೀಡಾಪಟುಗಳು ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡರೆ

(ಮೊದಲ ಪುಟದಿಂದ) ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು. ಆ ನಿಟ್ಟಿನಲ್ಲಿ ಕ್ರೀಡಾಪಟುಗಳು ಶಿಕ್ಷಣ ಮತ್ತು ಕ್ರೀಡೆಯಲ್ಲಿ ಸಮತೋಲನ ದಿಂದ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕ್ರೀಡೆಯಲ್ಲಿ ಸತತ ಪರಿಶ್ರಮವಿದ್ದಲ್ಲಿ ಯಶಸ್ಸುಗಳಿಸಲು ಸಾಧ್ಯ.

ಹಿಂದೆ ಹಾಕಿ ಕ್ರೀಡೆಯಲ್ಲಿ ಕೊಡಗು ಜಿಲ್ಲೆಯವರು ಹೆಚ್ಚಿನ ಸಂಖ್ಯೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಕೊಡಗು ಜಿಲ್ಲೆ ಹಾಗೂ ಕರ್ನಾಟಕ ರಾಜ್ಯದಿಂದ ಹಾಕಿ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿ ಕೊಳ್ಳುವುದೇ ಕಡಿಮೆಯಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆ ಹಾಗೂ ರಾಜ್ಯದವರು ಭಾರತವನ್ನು ಪ್ರತಿನಿಧಿಸುವಂತಾಗಬೇಕು ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ ಮಾತನಾಡಿ ಕ್ರೀಡಾಪಟುಗಳು ಶಿಕ್ಷಕರು, ಪೋಷಕರ ಕನಸನ್ನು ನನಸು ಮಾಡುವಂತಾಗಬೇಕು ಎಂದರು.

ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ಆದರೆ ಪಾಲ್ಗೊಳ್ಳುವುದು ಅತೀ ಮುಖ್ಯ ಎಂದರು. ಮೈಸೂರು ವಿಭಾಗದ ಜಂಟಿ ನಿರ್ದೇಶಕರ ಕಚೇರಿಯ ದೈಹಿಕ ಶಿಕ್ಷಣ ವಿಭಾಗದ ಉಪ ನಿರ್ದೇಶಕ ವೆಂಕಟೇಶ್ ಮೂರ್ತಿ ಮಾತನಾಡಿ ಕಠಿಣ ಶ್ರಮ ಇದ್ದಲ್ಲಿ ಪ್ರತಿಫಲ ಕಾಣಬಹುದು ಎಂದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್ ಮಾತನಾಡಿ ರಾಜ್ಯ ಮಟ್ಟದ ಹಾಕಿ ಕ್ರೀಡಾಕೂಟಕ್ಕೆ ರಾಜ್ಯದ ನಾಲ್ಕು ವಿಭಾಗದಿಂದ ೧೮ ಹಾಕಿ ತಂಡಗಳು ಪಾಲ್ಗೊಂಡಿವೆ. ರಾಜ್ಯ ಮಟ್ಟದಲ್ಲಿ ಪಾಲ್ಗೊಂಡು ಜಯಶಾಲಿಯಾದ ತಂಡಗಳು ರಾಷ್ಟç ಮಟ್ಟಕ್ಕೆ ಪಾಲ್ಗೊಳ್ಳಬಹುದಾಗಿದೆ ಎಂದರು. ನಗರಸಭಾ ಸದಸ್ಯ ಎಸ್.ಸಿ.ಸತೀಶ್ ಧ್ವಜಾರೋಹಣ ನೆರವೇರಿಸಿದರು. ಗಣ್ಯರು ಪಥ ಸಂಚಲನ, ಗೌರವ ವಂದನೆ ಸ್ವೀಕರಿಸಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕಿ ವೇದಮೂರ್ತಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವಯ್ಯ ಪಲ್ಲೇದ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಶ್ರೀನಿವಾಸ್, ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಎಸ್‌ಡಿಎಂಸಿ ಅಧ್ಯಕ್ಷ ಚಂದ್ರಶೇಖರ್, ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲೆ ಪಿ.ಕೆ. ನಳಿನಿ, ಜಿಲ್ಲಾ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸೋಮಶೇಖರ್, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಕುಮಾರ, ಜಿಲ್ಲಾ ದೈಹಿಕ ಶಿಕ್ಷಣ ಪ್ರವೀಣ್ ಪಿ.ಎ., ತಾಲೂಕು ಪ್ರೌಢಶಾಲಾ ಸಹಶಿಕ್ಷಕ ರವಿಕೃಷ್ಣ, ಮಡಿಕೇರಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮೋಹನ್ ಪೆರಾಜೆ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಅಶೋಕ್ ಕೆ.ಜಿ. ಇತರರು ಇದ್ದರು. ಉಪ ಪ್ರಾಂಶುಪಾಲೆ ಪಿ.ಕೆ.ನಳಿನಿ ಸ್ವಾಗತಿಸಿದರು. ಅನಿತಾ ಮತ್ತು ವರದರಾಜು ನಿರೂಪಿಸಿದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಸದಾಶಿವ ಪಲ್ಲೇದ್ ವಂದಿಸಿದರು.