ಮಡಿಕೇರಿ, ನ. ೨೧: ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರಕಾರಗಳ ಸಾಧನೆಗಳನ್ನು ಜನರಿಗೆ ತಿಳಿಸುವ ಕೆಲಸವನ್ನು ಪಕ್ಷದ ಪ್ರತಿಯೊಬ್ಬರೂ ಮಾಡಬೇಕಿದೆ ಎಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.
ನಗರದ ಓಂಕಾರ ಸದನದಲ್ಲಿ ಏರ್ಪಡಿಸಲಾಗಿದ್ದ ಕೊಡಗು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಂಬರುವ ವಿಧಾನಸಭೆ ಚುನಾವಣೆ ಮಾತ್ರವಲ್ಲದೆ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳು ಕೂಡ ಯಾವ ಸಂದರ್ಭದಲ್ಲಿ ಬೇಕಾದರೂ ಘೋಷಣೆ ಆಗಬಹುದು. ಕಳೆದ ಬಾರಿ ಜಿಲ್ಲಾ ಪಂಚಾಯತ್ ಹಾಗೂ ಮೂರು ತಾಲೂಕು ಪಂಚಾಯತ್ಗಳಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಆದರೆ ಈ ಬಾರಿ ಎರಡು ಹೊಸ ತಾಲೂಕುಗಳು ಸೇರ್ಪಡೆಗೊಂಡಿದ್ದು, ಅವುಗಳಲ್ಲೂ ಕೂಡ ಗೆಲುವು ಸಾಧಿಸಬೇಕಾದ ಸವಾಲು ಎದುರಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸರಕಾರದ ಸಾಧನೆಗಳನ್ನು ಜನರ ಮುಂದಿಟ್ಟು ಮುಂಬರುವ ಚುನಾವಣೆಗಳನ್ನು ಎದುರಿಸಬೇಕಿದೆ ಎಂದರು.
ರಾಜ್ಯದಲ್ಲಿ ಉಂಟಾದ ಅತಿವೃಷ್ಟಿ, ಕೊರೊನಾ ಇವುಗಳನ್ನು ಸಮರ್ಥವಾಗಿ
(ಮೊದಲ ಪುಟದಿಂದ) ಎದುರಿಸಿದ ಸರಕಾರ ಅಭಿವೃದ್ಧಿ ಕೆಲಸಗಳಿಗೂ ಒತ್ತು ನೀಡಿದೆ. ಬೆಳೆ ನಷ್ಟ ಪರಿಹಾರವನ್ನು ಹೆಚ್ಚಳ ಮಾಡಿದ್ದು, ರೈತರ ಖಾತೆಗಳಿಗೆ ಜಮೆ ಮಾಡುವ ಕೆಲಸವೂ ನಡೆಯುತ್ತಿದೆ. ರೈತರು ಆಧಾರ್ ಕಾರ್ಡ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಯ ವಿವರವನ್ನು ಸಂಬAಧಿಸಿದವರಿಗೆ ನೀಡಬೇಕು. ದಾಖಲಾತಿಗಳಲ್ಲಿ ಸಣ್ಣ ತಪ್ಪುಗಳಿದ್ದರೂ ಕೂಡ ಅಂತಹ ಅರ್ಜಿಗಳು ತಿರಸ್ಕರಿಸಲ್ಪಡುತ್ತವೆ. ಈ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಪಕ್ಷದ ಸರ್ವರೂ ಮಾಡಬೇಕು.
ಕಳೆದ ಬಾರಿ ೪೪ ಸಾವಿರ ಮಂದಿಗೆ ೭೨ ಕೋಟಿಯಷ್ಟು ಪರಿಹಾರ ನೀಡಲಾಗಿದೆ. ಭತ್ತ ಬೆಳೆಗೆ ಬೆಂಬಲ ಬೆಲೆಯನ್ನು ಕೂಡ ಸರಕಾರ ಘೋಷಿಸಿದೆ ಎಂದು ಬೋಪಯ್ಯ ಹೇಳಿದರು. ಹಿಂದೂ ಕಾರ್ಯಕರ್ತರ ಹತ್ಯೆಯೊಂದಿಗೆ ದೇಶದ ಆಂತರಿಕ ಹಾಗೂ ಬಾಹ್ಯ ಭದ್ರತೆಗೆ ಸವಾಲೊಡ್ಡುವ ಕೆಲಸವನ್ನು ದುಷ್ಟ ಶಕ್ತಿಗಳು ಮಾಡುತ್ತಿದ್ದು, ಅವೆಲ್ಲವನ್ನು ಸಮರ್ಥವಾಗಿ ಎದುರಿಸುವುದರ ಜೊತೆಗೆ ಬಿಜೆಪಿ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿದೆ ಎಂದು ಕೆ.ಜಿ. ಬೋಪಯ್ಯ ನುಡಿದರು.
‘ವಾಸ್ತವ ಅರಿಯದೆ ಟೀಕಿಸಬೇಡಿ’
ಕೊಡಗಿನ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಅನುದಾನವಿದೆ. ಆದರೆ ಮಳೆ ನಿಲ್ಲದ ಕಾರಣ ಕಾಮಗಾರಿ ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬುದು ವಾಸ್ತವ. ಇದನ್ನು ಅರಿಯದೆ ಸಾಮಾಜಿಕ ಜಾಲತಾಣಗಳಲ್ಲಿ ಬಾಯಿಗೆ ಬಂದAತೆ ಟೀಕಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದು, ಇವರುಗಳೊಂದಿಗೆ ನಮ್ಮವರು ಕೆಲವರು ಸೇರಿಕೊಂಡಿ ರುವುದು ಬೇಸರ ಮೂಡಿಸಿದೆ. ಅಭಿವೃದ್ಧಿ ಕಾರ್ಯಕ್ಕೆ ಉಂಟಾಗಿರುವ ಅಡಚಣೆಯ ಬಗ್ಗೆ ಜನರಿಗೆ ಅರ್ಥೈಸುವ ಕೆಲಸ ಶಾಸಕರು, ಜನಪ್ರತಿನಿಧಿಗಳಿಗೆ ಮಾತ್ರ ಸೀಮಿತವಲ್ಲ. ಪಕ್ಷದ ಪ್ರತಿಯೊಬ್ಬರು ಕೂಡ ಈ ಕೆಲಸವನ್ನು ಮಾಡಬೇಕೆಂದು ಕೆ.ಜಿ. ಬೋಪಯ್ಯ ಹೇಳಿದರು.
ಪ್ರಸ್ತುತ ಸಾಮಾಜಿಕ ಜಾಲತಾಣ ಪ್ರಭಾವ ಬೀರುವ ಮಾಧ್ಯಮವಾಗಿದ್ದು, ಅದರಲ್ಲಿ ಪಕ್ಷದ ಜವಾಬ್ದಾರಿ ಸ್ಥಾನದಲ್ಲಿರುವ ಕ್ರಿಯಾಶೀಲತೆ ಹೆಚ್ಚಾಗಬೇಕಿದೆ ಎಂದು ಹೇಳಿದ ಬೋಪಯ್ಯ, ನಮ್ಮ ತಪ್ಪುಗಳಿದ್ದರೆ ನೇರವಾಗಿ ನಮ್ಮನ್ನೇ ಪ್ರಶ್ನೆ ಮಾಡಿ; ಏನೇ ಭಿನ್ನಾಭಿಪ್ರಾಯಗಳಿದ್ದರೂ ಪಕ್ಷದ ನಾಲ್ಕು ಗೋಡೆಗಳ ಮಧ್ಯೆ ಚರ್ಚಿಸಿ ಸರಿಮಾಡಿಕೊಳ್ಳೋಣ. ಪಕ್ಷದ ಜವಾಬ್ದಾರಿಗಳನ್ನು ನಿಭಾಯಿಸಿದವರಿಗೆ ಚುನಾವಣೆಗಳಲ್ಲಿ ಅಭ್ಯರ್ಥಿಗಳಾಗುವ ಅರ್ಹತೆಯೂ ಇರುತ್ತದೆ. ಆ ಬಗ್ಗೆಯೂ ಪಕ್ಷದೊಳಗೆ ಚರ್ಚೆ ಮಾಡೋಣ. ಬಿಜೆಪಿ ಬಗ್ಗೆ ಕೊಡಗಿನ ಜನ ಇಟ್ಟಿರುವ ವಿಶ್ವಾಸವನ್ನು ಸದಾ ಉಳಿಸಿಕೊಳ್ಳೋಣ ಎಂದು ಸಲಹೆ ನೀಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು. ಈ ದಿಸೆಯಲ್ಲಿ ಪಕ್ಷ ಸಂಘಟನೆಯನ್ನು ಗಟ್ಟಿಗೊಳಿಸುವುದರ ಜೊತೆಗೆ ಮುಂಬರುವ ಚುನಾವಣೆಗಳನ್ನು ಎದುರಿಸಲು ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಹೇಳಿದರು. ಪಕ್ಷದ ಜಿಲ್ಲಾ ಕಾರ್ಯಾಲಯ ಕಟ್ಟಡಕ್ಕೆ ಆದಷ್ಟು ಶೀಘ್ರ ಶಂಕುಸ್ಥಾಪನೆ ನೆರವೇರಿಸಿ ೬ ತಿಂಗಳಿನಲ್ಲಿ ಕಾಮಗಾರಿಯನ್ನು ಪೂರ್ಣಗೊಳಿ ಸಲಾಗುತ್ತದೆ ಎಂದು ತಿಳಿಸಿದರು. ಈ ಸಂದರ್ಭ ಬಿಜೆಪಿ ವಿಭಾಗ ಪ್ರಬಾರಿ ಉದಯಕುಮಾರ್ ಶೆಟ್ಟಿ, ಕಾಫಿ ಮಂಡಳಿ ಸದಸ್ಯ ತಳೂರು ಕಿಶೋರ್ ಕುಮಾರ್, ರಾಜ್ಯ ಸಹಕಾರ ರತ್ನ ಪ್ರಶಸ್ತಿ ವಿಜೇತ ಕುಮಾರಪ್ಪ, ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಇವರುಗಳನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಸುನಿಲ್ ಸುಬ್ರಮಣಿ, ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಮಾಜಿ ಅಧ್ಯಕ್ಷ ರವಿಕುಶಾಲಪ್ಪ, ಬಿಜೆಪಿ ಮಾಜಿ ಅಧ್ಯಕ್ಷ ಭಾರತೀಶ್, ಶಿಸ್ತು ಸಮಿತಿ ಸದಸ್ಯೆ ರೀನಾ ಪ್ರಕಾಶ್, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು.
ಪಕ್ಷದ ಉಪಾಧ್ಯಕ್ಷ ಬಿ.ಕೆ. ಅರುಣ್ ಕುಮಾರ್ ವಂದೇ ಮಾತರಂ ಹಾಡಿದರು. ಪ್ರಧಾನ ಕಾರ್ಯದರ್ಶಿ ಮಾದಪ್ಪ ಸ್ವಾಗತಿಸಿ, ಅರುಣ್ ಭೀಮಯ್ಯ ನಿರೂಪಿಸಿ, ಕಾರ್ಯದರ್ಶಿ ಸತೀಶ್ ವಂದಿಸಿದರು.