ಮಡಿಕೇರಿ, ನ. ೨೨: ಕನ್ನಡ ಮತ್ತು ಸಂಸ್ಕೃತಿ ನಿರ್ದೆಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಈ ಎರಡೂ ಸಂಸ್ಥೆಗಳು ಒಟ್ಟಾಗಿ ನವೆಂಬರ್ ೧, ೧೯೮೫ ರಿಂದ ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲ ಸರ್ಕಾರಿ ನೌಕರರಿಗಾಗಿ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯೊಂದನ್ನು ನಡೆಸುತ್ತಿವೆ. ಇದಕ್ಕೆ ಕರ್ನಾಟಕದಲ್ಲಿರುವ ಎಲ್ಲ ನಗರಸಭೆ, ಕ.ವಿ.ಪ್ರ.ನಿ.ನಿ., ಕೆ.ಎಸ್.ಆರ್.ಟಿ.ಸಿ. ವಿಶ್ವವಿದ್ಯಾಲಯಗಳು, ಶಾಲಾ - ಕಾಲೇಜುಗಳು ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲ ರಾಷ್ಟಿçÃಕೃತ ಬ್ಯಾಂಕುಗಳ ನೌಕರರು ನೋಂದಾಯಿಸಿಕೊಳ್ಳಬಹುದು. ನೋಂದಣಿತರು ಶುಲ್ಕವನ್ನು ಕೊಡಬೇಕಾಗಿಲ್ಲ.
ಕರ್ನಾಟಕದ ಸರ್ಕಾರಿ ನೌಕರರು ಸಂಪರ್ಕ ಶಿಬಿರ ಹಾಗೂ ಪರೀಕ್ಷೆಗಳಿಗೆ ಹಾಜರಾಗುವಾಗಿನ ಅವರ ಕಚೇರಿ ಗೈರುಹಾಜರಿಯನ್ನು ಅನ್ಯಕಾರ್ಯ ನಿಮಿತ್ತ ಎಂದು ಪರಿಗಣಿಸಲಾಗುವುದು. ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ನೋಂದಾಯಿಸಿಕೊAಡು ಉತ್ತೀರ್ಣರಾದ ವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ಕರ್ನಾಟಕ ಸರ್ಕಾರದ ವಿನಾಯಿತಿಯಿದೆ.
ಈ ಯೋಜನೆಯನ್ನು ಈಗ ಸಾರ್ವಜನಿಕರಿಗೂ ವಿಸ್ತರಿಸಲಾಗಿದೆ. ಇವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ವಯೋಮಿತಿ ೧೮ ರಿಂದ ೫೦ ವಯಸ್ಸಿನ ಒಳಗಿರಬೇಕು. ಆಸಕರು ಭರ್ತಿ ಮಾಡಿದ ಅರ್ಜಿಯ ಜೊತೆಯಲ್ಲಿ ರೂ.೨೫೦ ಡಿಮ್ಯಾಂಡ್ ಡ್ರಾಫ್ಟನ್ನು ಕಳುಹಿಸಿಕೊಡಬೇಕು. ನೋಂದಣಿತರಿಗೆ ಇಪ್ಪತ್ತು ಪಾಠಾವಳಿಗಳನ್ನು ಕಳುಹಿಸಿಕೊಡಲಾಗುವುದು. ತರಬೇತಿ ಮತ್ತು ಸಂಪರ್ಕ ಶಿಬಿರದ ಅಂತ್ಯದಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು. ಮೂವತ್ತಾರನೆಯ ತಂಡದ ತರಬೇತಿಯು ನವೆಂಬರ್ ೧ ರಿಂದ ಆರಂಭವಾಗಿದ್ದು, ಅರ್ಜಿ ನಮೂನೆ ಮತ್ತು ತರಬೇತಿ ವಿವರಗಳನ್ನು ಪ್ರಭಾರ ಅಧಿಕಾರಿ, ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಮಾನಸಗಂಗೋತ್ರಿ ಮೈಸೂರು-೫೭೦೦೦೬, ಇವರಿಗೆ ಐದು ರೂಪಾಯಿಯ ಅಂಚೆ ಚೀಟಿಯನ್ನು ಹಚ್ಚಿದ ಸ್ವವಿಳಾಸಿತ ಲಕೋಟೆಯನ್ನು ಕಳುಹಿಸಿ ಪಡೆದುಕೊಳ್ಳ ಬಹುದು. ಭರ್ತಿ ಮಾಡಿದ ಅರ್ಜಿಯನ್ನು ಪ್ರಬಾರಿ ಅಧಿಕಾರಿಯವರಿಗೆ ೨೦೨೨ರ ಡಿಸೆಂಬರ್ ೧೦ರ ಒಳಗೆ ತಲುಪಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.