ಮಡಿಕೇರಿ, ನ. ೨೨ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇತಿಹಾಸ ವಿಭಾಗ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಇವರ ಸಹಯೋಗದೊಂದಿಗೆ ಇತಿಹಾಸ ಮತ್ತು ಪರಂಪರೆ ಸಂಘದ ಉದ್ಘಾಟನಾ ಕಾರ್ಯಕ್ರಮವು ತಾ. ೨೫ ರಂದು ಮಧ್ಯಾಹ್ನ ೧.೩೦ ಗಂಟೆಗೆ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

ನಿವೃತ್ತ ಪ್ರಾಂಶುಪಾಲ ಪ್ರೊ. ಎಚ್.ಬಿ. ಲಿಂಗಮೂರ್ತಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ಕೆ.ಡಿ.ನಿರ್ಮಲಾ, ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಸರ್ಕಾರಿ ವಸ್ತುಸಂಗ್ರಹಾಲಯದ ಮೇಲ್ವಿಚಾರಕಿ ಬಿ.ಪಿ.ರೇಖಾ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ ಮತ್ತು ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಅನುಪಮ ಸಭಾಪತಿ ಇತರರು ಪಾಲ್ಗೊಳ್ಳಲಿದ್ದಾರೆ.