ಮಡಿಕೇರಿ, ನ. ೨೨: ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬAಧಿಸಿದAತೆ ಕಾಂಗ್ರೆಸ್ ಪಕ್ಷದಿಂದ ಮಡಿಕೇರಿ ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಬಯಸಿ ಹಲವು ಆಕಾಂಕ್ಷಿಗಳು ಪಕ್ಷದ ಟಿಕೆಟ್‌ಗಾಗಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ಜೆಡಿಎಸ್‌ನಿಂದ ಸ್ಪರ್ಧಿಸಿ ಪರಾಭವಗೊಂಡು ಪ್ರಸ್ತುತ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿರುವ ಮಾಜಿ ಸಚಿವ ಬಿ.ಎ. ಜೀವಿಜಯ, ಕಳೆದ ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದ ವೀಣಾ ಅಚ್ಚಯ್ಯ, ಈ ಹಿಂದೆ ಸ್ಥಳೀಯ ಸಂಸ್ಥೆಗಳಿAದ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದ ಚಂದ್ರಮೌಳಿ, ಕಳೆದ ಬಾರಿ ಸ್ಪರ್ಧಿಸಿ ಸೋಲನುಭವಿಸಿದ ಮಂಥರ್ ಗೌಡ, ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರಾಗಿರುವ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹಾಗೂ ಕೊಡಗು ಜಿಲ್ಲಾ ನಿರ್ದೇಶಕ ಹರಪಳ್ಳಿ ರವೀಂದ್ರ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಪಿ.ಎಂ. ಲತೀಫ್ ಇವರುಗಳು ಈಗಾಗಲೇ ಟಿಕೆಟ್‌ಗಾಗಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ. ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಯಾರಿಗೆ ಮಣೆ ಹಾಕಲಿದೆ ಎಂಬ ಕೌತುಕ ಎಲ್ಲೆಡೆ ಉಂಟಾಗಿದ್ದು, ಟಿಕೆಟ್ ವಿಚಾರದಲ್ಲಿ ಆಕಾಂಕ್ಷಿಗಳು ‘ಶಕ್ತಿ’ಯೊಂದಿಗೆ ಈ ಕೆಳಗಿನಂತೆ ಅಭಿಪ್ರಾಯ ಹಂಚಿಕೊAಡಿದ್ದಾರೆ.

ಪ್ರತಿಯೊಬ್ಬರಿಗೂ ಹಕ್ಕಿದೆ : ಜೀವಿಜಯ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಯಲ್ಲಿ ಟಿಕೆಟ್ ಕೇಳುವ ಹಕ್ಕು ಎಲ್ಲರಿಗೂ ಇದೆ. ಆದರೆ ಯಾರಿಗೆ ಟಿಕೆಟ್ ನೀಡಬೇಕು ಎಂಬುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರವಾಗಿದೆ. ಯರ‍್ಯಾರಿಗೆ ಏನೇನು ಶಕ್ತಿ ಇದೆ ಎಂಬುದನ್ನು ತಿಳಿದುಕೊಂಡು ಹೈಕಮಾಂಡ್ ಟಿಕೆಟ್ ನೀಡಬಹುದು. ಟಿಕೆಟ್ ನೀಡುವ ವಿಚಾರದಲ್ಲಿ ಹೈಕಮಾಂಡ್‌ಗೆ ಅದರದೇ ಆದ ಮಾನದಂಡವಿದೆ. ಅದರನ್ವಯ ತೀರ್ಮಾನವಾಗುತ್ತದೆ. ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಎಂದು ಮಡಿಕೇರಿ ಕ್ಷೇತ್ರದಿಂದ ಸ್ಪರ್ಧೆ ಬಯಸಿರುವ ಮಾಜಿ ಸಚಿವ ಬಿ.ಎ. ಜೀವಿಜಯ ತಿಳಿಸಿದ್ದಾರೆ.

ಪಕ್ಷಕ್ಕೆ ದ್ರೋಹ ಮಾಡಿಲ್ಲ : ವೀಣಾ

ಸುಮಾರು ೩೭ ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆಯಾಗಿ ಕೆಲಸ ಮಾಡಿದ ಅನುಭವವಿದೆ. ಎಂದೂ ಕೂಡ ಪಕ್ಷ ದ್ರೋಹದ ಕೆಲಸ ಮಾಡಿಲ್ಲ. ಅನೇಕ ಅವಕಾಶಗಳನ್ನು ಪಕ್ಷ ನೀಡಿದೆಯಾದರೂ ವಿಧಾನಸಭಾ ಸದಸ್ಯೆಯಾಗಿ ಜನಸೇವೆ ಮಾಡಬೇಕೆಂಬ ಆಸಕ್ತಿಯೊಂದಿಗೆ ಕೊನೆಯ ಬಾರಿಗೆ ಟಿಕೆಟ್ ಬಯಸಿ ಅರ್ಜಿ ಸಲ್ಲಿಸಿದ್ದೇನೆ ಎಂದು ವೀರಾಜಪೇಟೆ ಕ್ಷೇತ್ರದಿಂದ ಸ್ಪರ್ಧೆ ಬಯಸಿರುವ ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ ಹೇಳಿದ್ದಾರೆ.

ಪರಿಗಣಿಸುವ ನಂಬಿಕೆಯಿದೆ : ಪೊನ್ನಣ್ಣ

ಕೆಲಸ ಮಾಡುವ ಕ್ಷೇತ್ರದಲ್ಲಿ ಯಶಸ್ಸು ಸಂಪಾದನೆ ಎಲ್ಲವೂ ಇದ್ದರೂ ಕೂಡ ಅಂತವರಲ್ಲಿ ಜನಸೇವೆಗಾಗಿ ಮುಂದೆ ಬರುವವರ ಸಂಖ್ಯೆ ಕಡಿಮೆಯಿದೆ. ಈ ದಿಸೆಯಲ್ಲಿ ತಾನು ಜನಸೇವೆಗೆ ಅವಕಾಶ ಕೋರಿ ಟಿಕೆಟ್‌ಗೆ ಅರ್ಜಿ ಸಲ್ಲಿಸಿದ್ದೇನೆ. ಪ್ರಸ್ತುತ ಯುವ ಮತದಾರರ ಸಂಖ್ಯೆ ಹೆಚ್ಚಿದ್ದು, ಯುವ ಪ್ರತಿನಿಧಿಯ ನಿರೀಕ್ಷೆಯಲ್ಲಿ ಅವರಿದ್ದಾರೆ.

(ಮೊದಲ ಪುಟದಿಂದ) ಈ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ತನಗೆ ಟಿಕೆಟ್ ನೀಡುವ ಸಾಧ್ಯತೆ ಹೆಚ್ಚಿದೆ ಎಂದು ವೀರಾಜಪೇಟೆ ಕ್ಷೇತ್ರದಿಂದ ಸ್ಪರ್ಧೆ ಬಯಸಿರುವ ಎ.ಎಸ್. ಪೊನ್ನಣ್ಣ ನುಡಿದಿದ್ದಾರೆ.

ಸಿಕ್ಕರೂ, ಸಿಗದಿದ್ದರೂ ಕೆಲಸ ಮಾಡುವೆ: ಚಂದ್ರಮೌಳಿ

ವಕೀಲ ವೃತ್ತಿಯೊಂದಿಗೆ ರಾಜಕಾರಣವನ್ನು ತೆಗೆದುಕೊಂಡು ಹೋಗುತ್ತಿರುವವನು ನಾನು. ಕಾಂಗ್ರೆಸ್ ತತ್ವಗಳ ಮೇಲೆ ನಂಬಿಕೆ ಇಟ್ಟಿದ್ದೇನೆ. ವೃತ್ತಿಯಲ್ಲಿನ ತನ್ನ ಯಶಸ್ಸು; ೪ ಸರಕಾರಗಳಲ್ಲಿ ಸರಕಾರದ ವಕೀಲನಾಗಿ ಸೇವೆ ಮಾಡಿರುವ ಅನುಭವದಲ್ಲಿ ತಾನು ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಟಿಕೆಟ್ ಸಿಕ್ಕರೆ ಚುನಾವಣೆ ಎದುರಿಸಲು ಸಿದ್ಧನಿದ್ದೇನೆ. ಟಿಕೆಟ್ ಸಿಗದಿದ್ದರೆ ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಮಡಿಕೇರಿ ಕ್ಷೇತ್ರದಿಂದ ಸ್ಪರ್ಧಾಕಾಂಕ್ಷಿ ಆಗಿರುವ ಚಂದ್ರಮೌಳಿ ತಿಳಿಸಿದ್ದಾರೆ.

ಸಿಗುವ ನಿರೀಕ್ಷೆ ಇದೆ: ರವೀಂದ್ರ

೨೦೧೬ರಿAದ ತಾನು ಕಾಂಗ್ರೆಸ್ ಸದಸ್ಯನಾಗಿದ್ದೇನೆ. ತನ್ನ ಕ್ಷೇತ್ರದಲ್ಲಿ ೨೫ ವರ್ಷಗಳಿಂದ ಜನಸೇವೆ ಮಾಡುತ್ತಾ ಬಂದಿದ್ದೇನೆ. ಹಿಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಹಕಾರ ನೀಡಿದ್ದೇನೆ. ಚುನಾವಣೆಗೆ ಸ್ಪರ್ಧಿಸುವ ಅರ್ಹತೆಯೂ ಇದೆ. ಈ ಹಿನ್ನೆಲೆಯಲ್ಲಿ ತನಗೆ ಟಿಕೆಟ್ ಸಿಗುವ ನಿರೀಕ್ಷೆ ಇದೆ ಎಂದು ಮಡಿಕೇರಿ ಕ್ಷೇತ್ರದಿಂದ ಸ್ಪರ್ಧೆ ಬಯಸಿರುವ ಹರಪಳ್ಳಿ ರವೀಂದ್ರ ಹೇಳಿದ್ದಾರೆ.

ಪಕ್ಷ ತೀರ್ಮಾನಕ್ಕೆ ಬದ್ಧ: ಮಂಥರ್ ಗೌಡ

ಟಿಕೆಟ್ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಸಿದ್ದೇನೆ. ಆದರೆ ತನಗೆ ಟಿಕೆಟ್ ನೀಡುವುದು; ಬಿಡುವುದು ಪಕ್ಷದ ತೀರ್ಮಾನಕ್ಕೆ ಬಿಟ್ಟ ವಿಚಾರವಾಗಿದೆ. ಟಿಕೆಟ್ ಸಿಗದಿದ್ದರೂ ಪಕ್ಷಕ್ಕಾಗಿ ತ್ಯಾಗ ಮಾಡಲು ಸಿದ್ಧನಾಗಿದ್ದೇನೆ ಎಂದು ಮಡಿಕೇರಿ ಕ್ಷೇತ್ರದಿಂದ ಟಿಕೆಟ್ ಬಯಸಿರುವ ಮಂಥರ್‌ಗೌಡ ತಿಳಿಸಿದ್ದಾರೆ.

ಜೀವಿಜಯಗೆ ಬೆಂಬಲ: ಮಂಜುನಾಥ್ ಕುಮಾರ್

ತಾನು ಜೀವಿಜಯ ಅವರ ಬೆಂಬಲಿಗನಾಗಿದ್ದೇನೆ. ಅವರಿಗೆ ನನ್ನ ಬೆಂಬಲವಿದ್ದು, ಅವರಿಗೆ ಟಿಕೆಟ್ ಸಿಗಬೇಕು. ಒಂದು ವೇಳೆ ಅವರಿಗೆ ಟಿಕೆಟ್ ನೀಡದೆ ಬೇರೊಬ್ಬ ಅಭ್ಯರ್ಥಿಯ ಪರಿಶೀಲನೆಗೆ ಹೈಕಮಾಂಡ್ ಮುಂದಾದರೆ ಆ ಸಂದರ್ಭ ತಾನು ಪ್ರಬಲ ಆಕಾಂಕ್ಷಿಯಾಗುತ್ತೇನೆ. ಚುನಾವಣೆಗೆ ಸ್ಪರ್ಧಿಸಲು ಇರಬೇಕಾದ ಎಲ್ಲಾ ಅರ್ಹತೆಗಳು ತನಗಿದೆ ಎಂದು ಮಡಿಕೇರಿ ಕ್ಷೇತ್ರದ ಸ್ಪರ್ಧಾಕಾಂಕ್ಷಿ ಕೆ.ಕೆ. ಮಂಜುನಾಥ್ ಕುಮಾರ್ ಹೇಳಿದ್ದಾರೆ.

ಅಲ್ಪಸಂಖ್ಯಾತರಿಗೂ ಮನ್ನಣೆ ಬೇಕು: ಲತೀಫ್

ವೀರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು ೪೦ ಸಾವಿರ ಅಲ್ಪಸಂಖ್ಯಾತ ಮತದಾರರಿದ್ದಾರೆ. ಅಲ್ಪಸಂಖ್ಯಾತರ ಮತಗಳೆ ಕಾಂಗ್ರೆಸ್‌ನ ಬೆನ್ನೆಲುಬಾಗಿದೆ. ಆದರೂ ಅಲ್ಪಸಂಖ್ಯಾತರಿಗೆ ಪಕ್ಷದಲ್ಲಿ ಯಾವುದೇ ಪ್ರಮುಖ ಸ್ಥಾನಗಳು ಲಭ್ಯವಾಗಿಲ್ಲ. ಆದ್ದರಿಂದ ಅಲ್ಪಸಂಖ್ಯಾತ ಮುಖಂಡರ ಸೂಚನೆಯಂತೆ ತಾನು ಸ್ಪರ್ಧೆ ಬಯಸಿದ್ದೇನೆ. ಪಕ್ಷಕ್ಕಾಗಿ ಇದುವರೆಗೂ ದುಡಿದಿದ್ದೇನೆ; ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿದ್ದೇನೆ ಎಂದು ವೀರಾಜಪೇಟೆ ಕ್ಷೇತ್ರದಿಂದ ಸ್ಪರ್ಧೆ ಬಯಸಿರುವ ಪಿ.ಎಂ. ಲತೀಫ್ ನುಡಿದಿದ್ದಾರೆ.

ಜನಪರ ಕೆಲಸ ಮಾಡಿದ್ದೇನೆ: ಚಂದ್ರಕಲಾ

ಕಾAಗ್ರೆಸ್‌ನಿAದ ನಿಗಮ ಮಂಡಳಿ ಅಧ್ಯಕ್ಷೆಯಾಗಿ, ಜಿ.ಪಂ. ಅಧ್ಯಕ್ಷೆಯಾಗಿ ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದ್ದೇನೆ. ತಲಕಾವೇರಿ ಅಭಿವೃದ್ಧಿಯಲ್ಲಿ ನನ್ನ ಪಾತ್ರವೂ ಇದ್ದು, ಹಲವು ಅಭಿವೃದ್ಧಿ ಕಾರ್ಯಗಳನ್ನು ಅಧಿಕಾರದ ಅವಧಿಯಲ್ಲಿ ನಿರ್ವಹಿಸಿದ್ದೇನೆ. ಕಳೆದ ಬಾರಿ ಅಲ್ಪಾವಧಿಯಲ್ಲಿ ಪಕ್ಷ ಟಿಕೆಟ್ ನೀಡಿತ್ತಾದರೂ; ಯಾವುದೇ ಹಣ ನೀಡಿರಲಿಲ್ಲ. ಆದರೂ ಸ್ವಂತ ಖರ್ಚಿನಿಂದ ಸ್ಪರ್ಧಿಸಿ ೪೧ ಸಾವಿರ ಮತಗಳನ್ನು ಪಡೆದಿದ್ದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಟಿಕೆಟ್ ಸಿಗುವ ನಿರೀಕ್ಷೆಯಿದೆ ಎಂದು ಮಡಿಕೇರಿ ಕ್ಷೇತ್ರದ ಸ್ಪರ್ಧಾಕಾಂಕ್ಷಿ ಕೆ.ಪಿ. ಚಂದ್ರಕಲಾ ತಿಳಿಸಿದ್ದಾರೆ.