ವೋಟರ್ ಐಡಿ ಹಗರಣ: ನಾಪತ್ತೆಯಾಗಿದ್ದ ಚಿಲುಮೆ ಆಡಳಿತಾಧಿಕಾರಿ ಬಂಧನ
ಬೆAಗಳೂರು, ನ. ೨೨: ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ವೋಟರ್ ಐಡಿ ಹಗರಣ ಸಂಬAಧಿಸಿದAತೆ ನಾಪತ್ತೆಯಾಗಿದ್ದ ಚಿಲುಮೆ ಸಂಸ್ಥೆಯ ಆಡಳಿತಾಧಿಕಾರಿ ಕೆ.ಎಂ.ಲೋಕೇಶ್ ಅವರನ್ನು ಮಂಗಳವಾರ ಹಲಸೂರು ಗೇಟ್ ಬಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಲೋಕೇಶ್ ನನ್ನು ಇಂದು ಸಂಜೆ ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ಅವರು ತಿಳಿಸಿದ್ದಾರೆ. ಕಾಡುಗೋಡಿ ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಎ???ಆರ್ ನಲ್ಲಿ ಲೋಕೇಶ್ ಹೆಸರು ಉಲ್ಲೇಖವಾಗಿತ್ತು. ಆತನನ್ನು ಬಂಧಿಸಿ ಒಂದು ರೌಂಡ್ ವಿಚಾರಣೆ ನಡೆಸಲಾಗಿದೆ. ಹೆಚ್ಚಿನ ವಿಚಾರಣೆ ಮಾಡಲಾಗುತ್ತಿದೆ ಎಂದು ಶ್ರೀನಿವಾಸಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದ್ದು ಎಂದು ದೂರು ದಾಖಲಾಗುತ್ತಿದ್ದಂತೆಯೇ ಲೋಕೇಶ್ ತಲೆಮರೆಸಿಕೊಂಡಿದ್ದ. ಆತನ ಬಂಧನಕ್ಕಾಗಿ ವಿಶೇಷ ತಂಡ ರಚಿಸಲಾಗಿತ್ತು. ಇದೀಗ ಪ್ರಕರಣದ ಪ್ರಮುಖ ಆರೋಪಿ, ಚಿಲುಮೆ ಮುಖ್ಯಸ್ಥ ರವಿಕುಮಾರ್ ಹಾಗೂ ಅದರ ಆಡಳಿತಾಧಿಕಾರಿ ಲೋಕೇಶ್ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಚುನಾವಣಾ ಬಾಂಡ್ ಯೋಜನೆ ಪ್ರಶ್ನಿಸಿ ಅರ್ಜಿ
ನವದೆಹಲಿ, ನ. ೨೨: ಚುನಾವಣಾ ಬಾಂಡ್ (ಎಲೆಕ್ಟೋರಲ್ ಬಾಂಡ್) ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಡಿ. ೬ ರಂದು ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಹಲವು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಾರ್ವತ್ರಿಕ ಚುನಾವಣೆಯ ವರ್ಷವಾಗಿದ್ದು ಈ ನಡುವೆಯೇ ಸರ್ಕಾರ ಅಧಿಸೂಚನೆಯ ಮೂಲಕ ಚುನಾವಣಾ ಬಾಂಡ್‌ಗಳ ಮಾರಾಟವನ್ನು ೧೫ ದಿನಗಳ ಕಾಲ ವಿಸ್ತರಿಸಿದೆ, ಸರ್ಕಾರದ ಅಧಿಸೂಚನೆಯ ವಿರುದ್ಧ ಕಾಂಗ್ರೆಸ್ ನಾಯಕರೊಬ್ಬರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ನ್ಯಾ. ಡಿ ವೈ ಚಂದ್ರಚೂಡ್ ಹಾಗೂ ನ್ಯಾ. ಹಿಮಾ ಕೊಹ್ಲಿ, ನ್ಯಾ. ಜೆ.ಬಿ ಪರ್ದಿವಾಲ ಅವರಿರುವ ಪೀಠ, ಜಯ ಠಾಕೂರ್ ಸೇರಿದಂತೆ ಇನ್ನಿತರರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲಿದೆ. ೨೦೧೮ ರ ಚುನಾವಣಾ ಬಾಂಡ್ ಯೋಜನೆಯ ಸಿಂಧುತ್ವವನ್ನು ಪ್ರಶ್ನಿಸಿ ಈ ಅರ್ಜಿಗಳನ್ನು ಸಲ್ಲಿಸಲಾಗಿದೆ. ರಾಜಕೀಯ ದೇಣಿಗೆಗಳ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮೂಡಿಸುವ ಸಲುವಾಗಿ ಚುನಾವಣಾ ಬಾಂಡ್ ಗಳನ್ನು ನಗದು ದೇಣಿಗೆಗಳಿಗೆ ಪರ್ಯಾಯವಾಗಿ ಪರಿಚಯಿಸಲಾಗಿತ್ತು. ಸರ್ಕಾರ ೨೦೧೮ ರ ಜ.೨ ರಂದು ಚುನಾವಣಾ ಬಾಂಡ್ ಯೋಜನೆಗೆ ಅಧಿಸೂಚನೆ ಪ್ರಕಟಿಸಿತ್ತು. ಯೋಜನೆಯ ನಿಬಂಧನೆಗಳ ಪ್ರಕಾರ, ಚುನಾವಣಾ ಬಾಂಡ್‌ಗಳನ್ನು ಭಾರತದ ಪೌರತ್ವ ಹೊಂದಿರುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಖರೀದಿಸಬಹುದಾಗಿದೆ.
೫.೮೬ ಲಕ್ಷ ವಿಶೇಷ ಚೇತನರಿಗೆ ವಿಶಿಷ್ಟ ಗುರುತಿನ ಚೀಟಿ
ಬೆಂಗಳೂರು, ನ. ೨೨: ವಿಶೇಷ ಚೇತನರಿಗೆ ವಿಶಿಷ್ಟ ಗುರುತಿನ ಚೀಟಿಯ ವಿತರಣೆಯಲ್ಲಿ ರಾಜ್ಯದಲ್ಲಿ ಗಮನಾರ್ಹ ಸಾಧನೆಯಾಗಿದ್ದು, ಈವರೆಗೂ ೫.೮೬ ಲಕ್ಷ ವಿಶೇಷ ಚೇತರಿಗೆ ಕಾರ್ಡ್ ವಿತರಣೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದ್ದಾರೆ. ಯುಡಿಐಡಿ ಕಾರ್ಡ್ ವಿತರಣೆ ಪ್ರಕ್ರಿಯೆಯ ಪ್ರಗತಿ ಪರಶೀಲಿಸಿ ಮಾತನಾಡಿದ ಸಚಿವರು. ರಾಮನಗರ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಕಾರ್ಡ್ ಗಳು ವಿತರಣೆಯಾಗಿವೆ. ಚಿಕ್ಕಮಗಳೂರು ಎರಡನೇ ಸ್ಥಾನದಲ್ಲಿದ್ದು, ಬಾಗಲಕೋಟೆ, ಹಾವೇರಿ, ಉತ್ತರ ಕನ್ನಡ, ಬೆಳಗಾವಿ ಹಾಗೂ ಮಂಡ್ಯ ಜಿಲ್ಲೆಗಳು ನಂತರದ ಸ್ಥಾನಗಳಲ್ಲಿವೆ ಎಂದು ಸಚಿವರು ತಿಳಿಸಿದರು. ಈ ಕಾರ್ಡ್ ಗಳ ಮೂಲಕ ಸರ್ಕಾರದಿಂದ ಹಲವಾರು ಸೌಲಭ್ಯ ಪಡೆಯಬಹುದಾಗಿದೆ. ಈ ಕಾರ್ಡ್ ನಿಂದ ಬ್ಲಾಕ್, ಜಿಲ್ಲಾ ಹಂತ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಎಲ್ಲಾ ಹಂತದ ಅನುಷ್ಠಾನ ಶ್ರೇಣಿಯಲ್ಲಿ ಫಲಾನುಭವಿಯ ಸೌಲಭ್ಯಗಳನ್ನು ಟ್ರ‍್ಯಾಕ್ ಮಾಡಲಾಗುವುದು, ಕಟ್ಟಕಡೆಯ ದಿವ್ಯಾಂಗರಿಗೂ ಕಾರ್ಡ್ ವಿತರಣೆ ಸರ್ಕಾರದ ಗುರಿಯಾಗಿದ್ದು, ಇದಕ್ಕಾಗಿ ಎಲ್ಲಾ ವಲಯಗಳಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು. ಅಂಗವೈಕ್ಯಲದಲ್ಲಿ ಈ ಹಿಂದೆ ೭ ಬಗೆಯ ನ್ಯೂನತೆಗಳನ್ನು ಮಾತ್ರ ಪರಿಗಣಿಸಲಾಗುತಿತ್ತು, ಆದರೆ, ೨೦೧೬ರ ಆರ್ ಪಿ ಡಬ್ಲ್ಯೂಡಿ ಕಾಯ್ದೆಗೆ ತಿದ್ದುಪಡಿ ತಂದ ನಂತರ ೨೧ ರೀತಿಯ ನ್ಯೂನತೆಗಳನ್ನು ಗುರುತಿಸಲಾಗಿದೆ. ವಿಶೇಷ ಚೇತನರ ವೈಯಕ್ತಿಕ ಹಾಗೂ ದೈಹಿಕ ನ್ಯೂನತೆಗಳ ಬಗ್ಗೆ ದತ್ತಾಂಶ ಸಂಗ್ರಹಿಸಲಾಗುತ್ತಿದೆ. ಶೈಕ್ಷಣಿಕ, ಉದ್ಯೋಗ ವಿವರಗಳನ್ನು ಸಹ ಇದು ಒಳಗೊಂಡಿರಲಿದೆ. ಶೇ.೪೦ ರಷ್ಟು ದೈಹಿಕ ನ್ಯೂನತೆ ಹೊಂದಿರುವವರನ್ನು ವಿಶೇಷ ಚೇತನರು ಎಂದು ಗುರುತಿಸಲಾಗುತ್ತಿದೆ. ೨೦೧೧ರ ಜನಗಣತಿ ವರದಿಯಂತೆ ದೇಶದಲ್ಲಿ ಶೇ. ೨.೨೧ ರಷ್ಟು ಮಂದಿ ಇಂತಹ ಸಮಸ್ಯೆ ಹೊಂದಿದ್ದಾರೆ ಎಂದು ಸಚಿವರು ತಿಳಿಸಿದರು.
ರಾಜ್ಯಗಳ ಮಧ್ಯೆ ವ್ಯಾಜ್ಯ ಹುಟ್ಟಿಸುವ ಕೆಲಸ : ಸಿಎಂ ಬೊಮ್ಮಾಯಿ
ಬೆಂಗಳೂರು, ನ. ೨೨: ರಾಜ್ಯ-ರಾಜ್ಯಗಳ ಮಧ್ಯೆ ವಾಜ್ಯ ಹುಟ್ಟಿಸುವ ಕೆಲಸವನ್ನು ಮಹಾರಾಷ್ಟç ಸರ್ಕಾರ ಮತ್ತು ಅಲ್ಲಿನ ಮುಖ್ಯಮಂತ್ರಿ ಏಕನಾಥ ಶಿಂಧೆ ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿAದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎಲ್ಲ ಭಾಷಿಕರನ್ನು ಒಂದೇ ಎಂದು ನೋಡುತ್ತಿರುವಾಗ, ರಾಜ್ಯ ರಾಜ್ಯಗಳ ಮಧ್ಯೆ ಸೌಹಾರ್ದತೆಯಿರುವಾಗ ಬೃಹತ್ ಸಂಖ್ಯೆಯಲ್ಲಿ ಕನ್ನಡಿಗರಿರುವ ಮಹಾರಾಷ್ಟçದಲ್ಲಿನ ಕನ್ನಡಿಗರ ಹಿತರಕ್ಷಣೆ ಮಾಡುವುದು ನಮ್ಮ ಕರ್ತವ್ಯ ಎಂದರು. ಮಹಾರಾಷ್ಟçಕ್ಕೆ ನೀರು ಕೊಟ್ಟು ಸಹಾಯ ಮಾಡಬೇಕೆಂದು ನಾವು ಎಲ್ಲ ರೀತಿಯ ಸಹಕಾರ ನೀಡಿದ್ದೇವೆ. ಜೆತ್ ತಾಲೂಕು ಕರ್ನಾಟಕಕ್ಕೆ ಸೇರಬೇಕೆಂದು ಅವರು ಗ್ರಾಮ ಪಂಚಾಯತ್‌ಗಳಲ್ಲಿ ಕೂಡ ನಿರ್ಣಯ ಹೊರಡಿಸಿದರು. ನಾವು ಅದನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಎಂದರು. ಮಹಾರಾಷ್ಟçದಲ್ಲಿರುವ ಕನ್ನಡ ಶಾಲೆಗೆ ಗಡಿ ಪ್ರಾಧಿಕಾರದಿಂದ ಅವುಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲು ಸರ್ಕಾರ ತೀರ್ಮಾನಿಸಿದೆ. ಕರ್ನಾಟಕ ಏಕೀಕರಣದಲ್ಲಿ ಹೋರಾಟ ಮಾಡಿರುವ ಮಹಾರಾಷ್ಟçದಲ್ಲಿರುವ ಕನ್ನಡಿಗರು ಮತ್ತು ಸ್ವತಂತ್ರ ಹೋರಾಟದಲ್ಲಿ, ಗೋವಾ ವಿಮೋಚನೆಗೆ ಹೋರಾಟ ಮಾಡಿರುವ ಕನ್ನಡಿಗರು, ಅವರ ದಾಖಲೆಗಳನ್ನು ತರಿಸಿ ಅವರಿಗೆ ಪಿಂಚಣಿಯನ್ನು ನೀಡುವ ಯೋಜನೆಯನ್ನು ನಮ್ಮ ಸರ್ಕಾರ ಮಾಡಿದೆ ಎಂದರು. ಗಡಿ ಪ್ರಾಧಿಕಾರದಿಂದ, ಮಹಾರಾಷ್ಟçದಲ್ಲಿರುವ ಕನ್ನಡ ಶಾಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದರು.