ಸೋಮವಾರಪೇಟೆ, ನ. ೨೧: ಇಲ್ಲಿನ ತಾಲೂಕು ಕಚೇರಿಯಲ್ಲಿ ರೈತರು ಹಾಗೂ ಸಾರ್ವಜನಿಕರ ಕೆಲಸ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಹಣ ನೀಡದಿದ್ದರೆ ಯಾವ ಕಡತಗಳೂ ಮುಂದುವರೆ ಯುವುದಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ತಹಶಿಲ್ದಾರ್ ಎಸ್.ಎನ್. ನರಗುಂದ್ ಅವರನ್ನು ಆಗ್ರಹಿಸಿದರು.

ಜೆಡಿಎಸ್ ಪಕ್ಷದ ಮುಖಂಡರ ಸಹಿತ ಸಾರ್ವಜನಿಕರ ತಂಡವೊAದು ಇಂದು ತಾಲೂಕು ಕಚೇರಿಗೆ ತೆರಳಿ ತಹಶಿಲ್ದಾರ್ ಎಸ್.ಎನ್. ನರಗುಂದ್ ಅವರೊಂದಿಗೆ ಈ ಬಗ್ಗೆ ಚರ್ಚಿಸಿತು. ಶಾಂತಳ್ಳಿ ಗ್ರಾ.ಪಂ. ಮಾಜಿ ಅಧ್ಯಕ್ಷ ಬಗ್ಗನ ಅನಿಲ್‌ಕುಮಾರ್ ಮಾತನಾಡಿ, ರೈತರ ಜಮೀನಿಗೆ ಸಂಬAಧಿಸಿದ ಕೆಲಸ ಕಾರ್ಯಗಳು ಲಂಚವಿಲ್ಲದೇ ತಾಲೂಕು ಕಚೇರಿಯಲ್ಲಿ ನಡೆಯುವು ದಿಲ್ಲ. ಮಧ್ಯವರ್ತಿಗಳ ಮೂಲಕ ಬರುವ ಕಡತಗಳು ವಿಲೇವಾರಿಯಾ ಗುತ್ತವೆ. ಆದರೆ ನೇರವಾಗಿ ಸಾರ್ವಜನಿಕರು, ರೈತರು ನೀಡುವ ಅರ್ಜಿಗಳು ಧೂಳು ಹಿಡಿಯುತ್ತಿರುತ್ತವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾರ್ವಜನಿಕರು ದಿನನಿತ್ಯ ತಮ್ಮ ಕೆಲಸ ಕಾರ್ಯಗಳಿಗೆ ತಾಲೂಕು ಕಚೇರಿಗೆ ಅಲೆಯುವಂತಾಗಿದೆ. ಹಣ ನೀಡಿದವರ ಕೆಲಸ ಮಾತ್ರ ಇಲ್ಲಿ ನಡೆಯುತ್ತಿದೆ. ಹಣ ನೀಡದಿದ್ದರೆ ಇಲ್ಲಸಲ್ಲದ ಕಾರಣ ಹೇಳಿ ಅಲೆದಾಡಿಸುತ್ತಿದ್ದಾರೆ. ಬ್ರೋಕರ್‌ಗಳ ಮುಖಾಂತರ ಹಣ ನೀಡಿದರೆ ಕೆಲಸ ಆಗುತ್ತದೆ ಎಂದು ಆರೋಪಿಸಿದರು.

ಅನೇಕ ರೈತರು ತಮ್ಮ ಜಮೀನಿನ ಸರ್ವೆ ನಂಬರುಗಳನ್ನು ಸರಿಪಡಿಸಲು ಅರ್ಜಿ ನೀಡಿ ವರ್ಷಗಳೇ ಕಳೆದಿದ್ದರೂ ಈವರೆಗೆ ದುರಸ್ತಿಗೆ ಕ್ರಮ ಕೈಗೊಂಡಿಲ್ಲ. ಇದರಿಂದ ರೈತರು ತಮ್ಮ ಜಮೀನಿನ ಮೇಲೆ ಸಾಲ ತೆಗೆದುಕೊಳ್ಳಲು ಮತ್ತು ಜಮೀನು ಮಾರಾಟ ಮಾಡುವಾಗ ಸಮಸ್ಯೆ ಎದುರಿಸುವಂತಾಗಿದೆ. ಬಾಕಿ ಇರುವ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಬೇಕು. ತಪ್ಪಿದ್ದಲ್ಲಿ ಅವ್ಯವಸ್ಥೆಯ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು. ಜಮೀನಿನ ಸರ್ವೆ ಸರಿಪಡಿಸುವ ಸಂಬAಧ ಅರ್ಜಿ ನೀಡಿದ್ದ ಹಲವು ರೈತರು ಈ ಸಂದರ್ಭ ಉಪಸ್ಥಿತರಿದ್ದು, ಸರ್ವೆ ಹಾಗೂ ಕಂದಾಯ ಇಲಾಖೆಯ ಕಾರ್ಯವೈಖರಿಯ ಬಗ್ಗೆ ದೂರುಗಳ ಬಗ್ಗೆ ಸುರಿಮಳೆಗೈದರು.

ತಾಲೂಕು ಕಚೇರಿಯ ಅವ್ಯವಸ್ಥೆ ಸರಿಪಡಿಸುವುದು ಹಾಗೂ ಬಾಕಿಯಿರುವ ಕಡತಗಳ ವಿಲೇವಾರಿಗೆ ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ಹೋರಾಟ ನಡೆಸಲಾಗುವುದು ಕಾಫಿ ಬೆಳೆಗಾರರ ಹೋರಾಟ ಸಮಿತಿ ಅಧ್ಯಕ್ಷ ಎಂ.ಸಿ. ಮುದ್ದಪ್ಪ ಎಚ್ಚರಿಸಿದರು.

ನಂತರ ಮಾತನಾಡಿದ ತಹಶೀಲ್ದಾರ್, ಸರ್ಕಾರಿ ಕೆಲಸಕ್ಕೆ ಯಾರೂ ಹಣ ನೀಡಬೇಕಾಗಿಲ್ಲ. ರೈತರ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಲು ಕ್ರಮಕೈಗೊಳ್ಳಲಾ ಗುವುದು ಎಂದು ಭರವಸೆ ನೀಡಿದರಲ್ಲದೆ, ಕೆಲವೊಂದು ಅರ್ಜಿಗಳಿಗೆ ಸಂಬAಧಿಸಿದAತೆ ‘ಕೇಸ್‌ವರ್ಕರ್’ಗಳನ್ನು ಕರೆದು ಕಡತ ವಿಲೇವಾರಿಗೆ ಸೂಚನೆ ನೀಡಿದರು.

ಈ ಸಂದರ್ಭ ಜೆಡಿಎಸ್ ಮಡಿಕೇರಿ ಕ್ಷೇತ್ರ ಸಮಿತಿ ಅಧ್ಯಕ್ಷ ಹೆಚ್.ಆರ್. ಸುರೇಶ್, ಮುಖಂಡರಾದ ನಾಪಂಡ ಮುತ್ತಪ್ಪ, ಯುವ ಜೆಡಿಎಸ್ ಅಧ್ಯಕ್ಷ ತ್ರಿಶೂಲ್, ಜಿಲ್ಲಾ ಕಾರ್ಯದರ್ಶಿ ಸ್ವಾಗತ್, ಪ್ರವೀಣ್, ಮೋಹನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.