ಗುಡ್ಡೆಹೊಸೂರು: ಇಲ್ಲಿಗೆ ಸಮೀಪದ ಅತ್ತೂರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭ ಮಕ್ಕಳಿಗೆ, ಪೋಷಕರಿಗೆ, ಸಾರ್ವಜನಿಕರಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಗುಡ್ಡೆಹೊಸೂರು ಗ್ರಾ.ಪಂ. ಉಪಾಧ್ಯಕ್ಷೆ ಯಶೋಧ, ಸದಸ್ಯ ಲಕ್ಷö್ಮಣ, ಗ್ರಾಮಸ್ಥರಾದ ಗಣೇಶ್ ವಿ.ಎಸ್. ಅವರುಗಳು ಉಪಸ್ಥಿತರಿ ದ್ದರು. ಅಲ್ಲದೆ ಗ್ರಾಮಸ್ಥರಾದ ಕಣ್ಣನ್, ಎ.ಕೆ. ರಾಜಪ್ಪ, ಪದ್ಮಾವತಿ, ವಸಂತಿ ಹೆಚ್.ಪಿ., ಸುಚಿತ್ರ, ನಳಿನಿ, ಜೈನಾಭಿ, ಶಾಂತಮ್ಮ ಲೀಲಾವತಿ, ಶೈಲಾ ಮುಂತಾದವರು ಹಾಜರಿದ್ದರು. ಅಂಗನವಾಡಿ ಕಾರ್ಯಕರ್ತೆ ಜ್ಯೋತಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.ವೀರಾಜಪೇಟೆ: ವೀರಾಜಪೇಟೆ ತಾಲೂಕಿನ ವಿವಿಧ ಶಾಲೆಗಳಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿAದ ಆಚರಿಸಲಾಯಿತು.

ಶಾಲಾ ವಿದ್ಯಾರ್ಥಿಗಳು ಛದ್ಮವೇಷ, ಚಿತ್ರಕಲೆ, ಭಾಷಣ ಮತ್ತು ಶಾರದ ಪೂಜೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು. ವೀರಾಜಪೇಟೆ ಸಂತ ಅನ್ನಮ್ಮ ಶಾಲೆಯಲ್ಲಿ ಶಿಕ್ಷಕರು ಮಕ್ಕಳ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳು ನೃತ್ಯ, ಸಂಗೀತ ಮತ್ತು ಛದ್ಮವೇಷ ಮುಂತಾದ ವಿಭಿನ್ನ ಸ್ಪರ್ಧೆಗಳಲ್ಲಿ ತೊಡಗಿಸಿಕೊಂಡರು.

ಸ.ಹಿ.ಪ್ರಾ. ಶಾಲೆ ಚಿಟ್ಟಡೆಯ ವಿದ್ಯಾರ್ಥಿಗಳು ಛದ್ಮವೇಷ ಮತ್ತು ಚಿತ್ರಕಲೆ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆದರು. ಸ.ಹಿ.ಪ್ರಾ. ಶಾಲೆ ಕಂಡAಗಾಲ, ಸ.ಹಿ.ಪ್ರಾ. ಶಾಲೆ ವೀರಾಜಪೇಟೆ ಸೇರಿದಂತೆ ಹಲವು ಶಾಲೆಗಳಲ್ಲಿ ಮಕ್ಕಳ ದಿನಾಚರಣೆಯೊಂದಿಗೆ ಶಾರದ ಪೂಜೆಯನ್ನು ಕೂಡ ಆಚರಿಸಲಾಯಿತು.

ತ್ರಿವೇಣಿ ಶಾಲೆ ವೀರಾಜಪೇಟೆಯ ವಿದ್ಯಾರ್ಥಿಗಳು ವಿವಿಧ ರಾಷ್ಟç ನಾಯಕರ ಛದ್ಮವೇಷದಲ್ಲಿ ಪಾಲ್ಗೊಂಡು ಗಮನ ಸೆಳೆದರು. ಶಾಲೆಗಳಲ್ಲಿ ಮಕ್ಕಳ ದಿನಾಚರಣೆಯ ವೇದಿಕೆಯಲ್ಲಿ ಅಧ್ಯಕ್ಷರು, ಅತಿಥಿಗಳಾಗಿ ಮಕ್ಕಳೇ ಉಪಸ್ಥಿತರಾಗಿ ಕಾರ್ಯಕ್ರಮವನ್ನು ವಿಶೇಷವಾಗಿ ನಡೆಸಿಕೊಟ್ಟರು. ತಾಲೂಕಿನ ಎಲ್ಲಾ ಶಾಲೆಗಳಲ್ಲೂ ವಿದ್ಯಾರ್ಥಿಗಳು ಮಕ್ಕಳ ದಿನಾಚರಣೆಯಲ್ಲಿ ಸಂಭ್ರಮಿಸಿದರು.ವೀರಾಜಪೇಟೆ: ವೀರಾಜಪೇಟೆಯ ಕಾವೇರಿ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಮಕ್ಕಳಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ನಂತರ ಶಿಕ್ಷಕರು ಮಕ್ಕಳನ್ನು ಮನರಂಜಿಸಲು ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಾಲಾ ವಿದ್ಯಾರ್ಥಿ ಸಂಘದ ನಾಯಕ ಹಾಗೂ ನಾಯಕಿಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ವನ್ನು ಪ್ರಾರಂಭಿಸಲಾಯಿತು.

ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಸುದೇಶ್ ಅವರು ಕಾರ್ಯ ಕ್ರಮಕ್ಕೆ ಆಗಮಿಸಿದವರನ್ನು ಸ್ವಾಗತಿಸಿದರು. ಕಾರ್ಯಕ್ರಮ ವನ್ನು ಶ್ವೇತ ಹಾಗೂ ಭೂಶಿರ ನಿರೂಪಿಸಿದರು. ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಅವರು ಕಾರ್ಯಕ್ರಮದ ಮಹತ್ವದ ಬಗ್ಗೆ ಮಾತನಾಡಿದರು. ಮಕ್ಕಳಿಗೆ ಮಧ್ಯಾಹ್ನದ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ವಿನೋದ್ ಅವರು ವಂದಿಸಿದರು.ನಾಪೋಕ್ಲು: ದೇಶದ ಪ್ರಧಾನಿಯಾಗಿ ಜವಾಹರಲಾಲ್ ನೆಹರು ಪಂಚಶೀಲ ತತ್ವಗಳನ್ನು ಜಾರಿಗೆ ತರುವ ಮೂಲಕ ದೇಶದ ಅಭಿವೃದ್ಧಿಗೆ ಶ್ರಮಿಸಿದ್ದು ಅವರ ಕೊಡುಗೆ ಕೂಡ ಅಪಾರವಾದದ್ದು ಎಂದು ಇಲ್ಲಿನ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಡಾ. ಬೊಪ್ಪಂಡ ಜಾಲಿ ಬೋಪಯ್ಯ ಹೇಳಿದರು.

ಮಕ್ಕಳ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ದಿನದ ಮಹತ್ವದ ಬಗ್ಗೆ ಮಾತನಾಡಿದರು. ವೇದಿಕೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಯ ಉಪಾಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ, ನಿವೃತ್ತ ಪ್ರೊ. ಕಲ್ಯಾಟಂಡ ಪೂಣಚ್ಚ, ಬೊಪ್ಪಂಡ ಕುಶಾಲಪ್ಪ, ಬೊಳ್ಳಚೆಟ್ಟೀರ ಸುರೇಶ್, ಅಪ್ಪಾರಂಡ ಅಪ್ಪಯ್ಯ, ಅಪ್ಪಚೆಟ್ಟೊಳಂಡ ನವೀನ್ ಅಪ್ಪಯ್ಯ, ಶಾಲಾ ಪ್ರಾಂಶುಪಾಲೆ ಕಲ್ಯಾಟಂಡ ಶಾರದ ಅಪ್ಪಣ್ಣ ಉಪಸ್ಥಿತರಿ ದ್ದರು. ಹಿರಿಯ ಶಿಕ್ಷಕಿ ಮುಂಡAಡ ಕವಿತಾ ಅಯ್ಯಣ್ಣ, ಶಿಕ್ಷಕಿ ಪಾಡಿಯಮಂಡ ಚಂದ್ರಕಲಾ ಮಹೇಶ್, ವಿದ್ಯಾರ್ಥಿ ನಾಯಕ ಪರಮ್ ಪೂವಣ್ಣ, ವಿದ್ಯಾರ್ಥಿಗಳಾದ ಪ್ರಾಚೀ ಮುತ್ತಮ್ಮ, ರಮ್ಳ ಫಿರ್ಧೋಸ್, ಸಂಕೇತ್ ಚಂಗಪ್ಪ, ಸೋಮಣ್ಣ, ಸಾಬಾನ, ಶರ್ಮಿಳ, ಪ್ರಿಶಾ ಮಾಚಮ್ಮ ಉಪಸ್ಥಿತರಿದ್ದರು. ಮಕ್ಕಳ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿಜೇತರಾದವರಿಗೆ ಬಹುಮಾನವನ್ನು ನೀಡಿ ಗೌರವಿಸಲಾಯಿತು. ಇದೇ ರೀತಿ ಹೋಬಳಿ ವ್ಯಾಪ್ತಿಯ ವಿವಿಧ ಖಾಸಗಿ ಶಾಲೆ ಹಾಗೂ ಸರ್ಕಾರಿ ಶಾಲೆಗಳಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಮುಳ್ಳೂರು: ಸಮೀಪದ ಆಲೂರು-ಸಿದ್ದಾಪುರ ಜಾನಕಿ ಕಾಳಪ್ಪ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆ ವತಿಯಿಂದ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಲೂರುಸಿದ್ದಾಪುರ ರೋಟರಿ ಮಲ್ಲೇಶ್ವರ ಕ್ಲಬ್ ಅಧ್ಯಕ್ಷ ಬೇಬಿ ಕನ್ನಡ ಧ್ವಜರೋಹಣ ನೆರವೇರಿಸಿದರು, ನಂತರ ಮಕ್ಕಳ ದಿನಾಚರಣೆ ಪ್ರಯುಕ್ತ ನೆಹರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಮಕ್ಕಳ ದಿನಾಚರಣೆ ಆಚರಿಸಲಾಯಿತು.

ಕನ್ನಡ ನಾಡು ನುಡಿ, ಕನ್ನಡ ಸಾಹಿತಿಗಳು, ಕಿತ್ತೂರುರಾಣಿ ಚೆನ್ನಮ್ಮ, ಕನ್ನಡದ ರಾಜರು, ಗ್ರಾಮೀಣ ಕ್ರೀಡೆ, ಆದಿವಾಸಿಗಳು, ಮೂಲ ನಿವಾಸಿಗಳು, ಕನ್ನಡದ ಸೊಗಡು ಬಿಂಬಿಸುವ ಸ್ತಬ್ಧಚಿತ್ರಗಳು ಆಲೂರುಸಿದ್ದಾಪುರ, ಮಾಲಂಬಿ, ಕಂತೆಬಸವನಹಳ್ಳಿ, ಕಣಗಾಲು ಸೇರಿದಂತೆ ಪಕ್ಕದ ಹಾಸನ ಜಿಲ್ಲೆಗೆ ಸೇರಿದ ಒಡೆನೂರು, ಬನ್ನೂರು, ಮರಿಯನಗರ ಗ್ರಾಮಗಳಿಗೆ ಸಾಗಿದವು. ಈ ಸಂದರ್ಭ ಗ್ರಾ.ಪಂ. ಸದಸ್ಯ ಕಿರಣ್, ರೋಟರಿ ಕ್ಲಬ್ ಕಾರ್ಯದರ್ಶಿ ಹುಲಿಮನೆ ಮಧು, ವಿದ್ಯಾಸಂಸ್ಥೆ ಮ್ಯಾನೇಜಿಂಗ್ ಟ್ರಸ್ಟಿ ಹೊಸೂರು ಶಿವಪ್ರಕಾಶ್ ಮುಂತಾದವರು ಹಾಜರಿದ್ದರು.ಪೊನ್ನಂಪೇಟೆ: ದೇವರಪುರ ಶ್ರೀ ರಾಜೇಶ್ವರಿ ವಿದ್ಯಾನಿಕೇತನ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಫ್ಯಾನ್ಸಿ ಡ್ರೆಸ್ ಮತ್ತು ಚಿತ್ರ ಬಿಡಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ವಿದ್ಯಾರ್ಥಿಗಳಿಂದ ಮಕ್ಕಳ ದಿನಾಚರಣೆ ಬಗ್ಗೆ ಭಾಷಣ ಹಾಗೂ ನೃತ್ಯ ಕಾರ್ಯಕ್ರಮ ಮೂಡಿಬಂತು.

ಈ ಸಂದರ್ಭ ಶಾಲಾ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು.