ನಾಪೋಕ್ಲು, ನ. ೨೨: ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಆಂಗ್ಲ ಮಾಧ್ಯಮ ಅತಿಥಿ ಶಿಕ್ಷಕಿಯರಿಗೆ ವೇತನ ನೀಡದೆ ವಜಾ ಮಾಡಿರುವುದನ್ನು ಖಂಡಿಸಿ ಪೋಷಕರು ಹಾಗೂ ವಿದ್ಯಾರ್ಥಿಗಳು ಕೆಪಿಎಸ್ ಶಾಲೆಯ ಮುಖ್ಯದ್ವಾರದಲ್ಲಿ ಧರಣಿ, ಪ್ರತಿಭಟನೆ ನಡೆಸಿದರು.

ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಆಂಗ್ಲ ಮಾಧ್ಯಮ ವಿಭಾಗದಲ್ಲಿ ಶಿಕ್ಷಕರ ಕೊರತೆಯಿದ್ದ ಹಿನ್ನೆಲೆಯಲ್ಲಿ ಶಾಲೆ ಆರಂಭದಿAದ ಸರ್ಕಾರದ ಆದೇಶದಂತೆ ಇಬ್ಬರು ಅತಿಥಿ ಶಿಕ್ಷಕರನ್ನು ನೇಮಿಸಿ ಕೊಳ್ಳಲಾಗಿತ್ತು. ಆದರೆ ಶೈಕ್ಷಣಿಕ ವರ್ಷದ ಮಧ್ಯದಲ್ಲಿ ಅತಿಥಿ ಶಿಕ್ಷಕರನ್ನು ವಜಾಗೊಳಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿ ಸ್ಥಳಕ್ಕೆ ಆಗಮಿಸಿದ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಶಾಲೆಯ ಆಂಗ್ಲ ಮಾಧ್ಯಮದಲ್ಲಿ ಇಬ್ಬರು ಶಿಕ್ಷಕರಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಿಆರ್ಪಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕೆಲವರ ಸಂಚಿನಿAದಾಗಿ ಇಬ್ಬರು ಹೊಸ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗಿದೆ. ಇದು ಖಂಡನೀಯ ಎಂದು ಶಿಕ್ಷಣಾಧಿಕಾರಿಗಳು ಹಾಗೂ ಅಧಿಕಾರಿಗಳ ವಿರುದ್ಧ ಪೋಷಕರು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ಸರ್ಕಾರದ ಆದೇಶದಂತೆ ಆಂಗ್ಲ ಮಾಧ್ಯಮ ವಿಭಾಗಕ್ಕೆ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗಿದ್ದು ಆದರೆ ಸರ್ಕಾರದ

(ಮೊದಲ ಪುಟದಿಂದ) ಮರು ಆದೇಶ ಬಂದಿರುವುದರಿAದ ಹೊಸದಾಗಿ ಶಿಕ್ಷಕರನ್ನು ನೇಮಿಸಲಾಗಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದರು. ಶೈಕ್ಷಣಿಕ ವರ್ಷದ ಮಧ್ಯಭಾಗದಲ್ಲಿ ಶಿಕ್ಷಕರನ್ನು ವಜಾ ಮಾಡಿರುವುದರಿಂದ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆ ಆಗಿದೆ, ಶೈಕ್ಷಣಿಕ ವರ್ಷ ಪೂರ್ಣಗೊಳ್ಳುವವರೆಗೆ ಅನಿತಾ ಮತ್ತು ಕಾವೇರಮ್ಮ ಎಂಬಿಬ್ಬರು ಅತಿಥಿ ಶಿಕ್ಷಕರನ್ನು ಮರುನೇಮಕ ಮಾಡಿಕೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಅತಿಥಿ ಶಿಕ್ಷಕರನ್ನು ಮರು ನೇಮಕ ಮಾಡಿಕೊಳ್ಳುವ ಬಗ್ಗೆ ಇಲಾಖೆಯ ದೊಡ್ಡೇಗೌಡ, ತಾಲೂಕು ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಮನೋಹರ್ ನಾಯಕ್, ಸಿಇಓ ಹರೀಶ್, ಮಾರುತಿ ಅರೇರ, ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮೋಹನ್ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ತಮ್ಮ ಧರಣಿಯನ್ನು ಹಿಂತೆಗೆದುಕೊAಡರು.

ಈ ಸಂದರ್ಭ ಎಸ್‌ಡಿಎಂಸಿ ಉಪಾಧ್ಯಕ್ಷ ಕೆ.ಎ. ಹ್ಯಾರಿಸ್, ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಬಿದ್ದಾಟಂಡ ಜಿನ್ನು ನಾಣಯ್ಯ, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಚಂದ್ರಕಲಾ ಪೋಷಕರಾದ ಪ್ರಕಾಶ್, ಅಬ್ದುಲ್ ಸಮ್ಮದ್, ದಿನೇಶ್, ಶಿವಣ್ಣ, ಸುಮಿತ್ರ, ಸುರೇಶ್, ಹುಸೈನಾರ್, ಜಾಫರ್, ಸಾಧಿಕ್ ಮತ್ತಿತರರು ಇದ್ದರು.