ಸೋಮವಾರಪೇಟೆ,ನ.೨೨: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತ ಆಶ್ರಯದಲ್ಲಿ ತಾ.೨೩ ರಂದು ಸ್ಥಳೀಯ ಮಹಿಳಾ ಸಮಾಜದಲ್ಲಿ ಮಧ್ಯಾಹ್ನ ೨:೩೦ಕ್ಕೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಗುವುದು ಎಂದು ತಾಲ್ಲೂಕು ಅಧ್ಯಕ್ಷ ಎಸ್.ಡಿ.ವಿಜೇತ ತಿಳಿಸಿದ್ದಾರೆ.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ. ಕೆ. ಚಂದ್ರು, ಮಾಜಿ ಸಚಿವÀ ಬಿ. ಎ. ಜೀವಿಜಯ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್. ಜಿ. ಮೇದಪ್ಪ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ. ಪಿ. ರಮೇಶ್, ತಾಲೂಕು ತಹಶೀಲ್ದಾರ್ ಎಸ್. ಎನ್. ನರಗುಂದ್, ಪೊಲೀಸ್ ವೃತ್ತ ನಿರೀಕ್ಷಕರಾದ ರಾಮಚಂದ್ರ ನಾಯಕ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ವಿ. ಸುರೇಶ್, ಮುಖ್ಯ ಭಾಷಣಕಾರರಾಗಿ ಡಾ. ಕಾವೇರಿ ಪ್ರಕಾಶ್, ಪ್ರಾಧ್ಯಾಪಕರು, ಪ್ರಥಮ ದರ್ಜೆ ಕಾಲೇಜು ಮಡಿಕೇರಿ ಇವರುಗಳು ಭಾಗವಹಿಸಲಿದ್ದಾರೆ.