ಮಡಿಕೇರಿ, ನ. ೨೧: ಜಿಲ್ಲಾ ಪಂಚಾಯಿತಿ ಕೊಡಗು, ತಾಲೂಕು ಪಂಚಾಯಿತಿ ಪೊನ್ನಂಪೇಟೆ ಹಾಗೂ ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ತಾ. ೨೩ ರಂದು ಬೆಳಿಗ್ಗೆ ೧೦ ಗಂಟೆಯಿAದ ಗೋಣಿಕೊಪ್ಪಲು ಸರಕಾರಿ ಪ್ರೌಢಶಾಲಾ ಮೈದಾನದಲ್ಲಿ ಗ್ರಾಮೀಣ ಕ್ರೀಡಾಕೂಟ ನಡೆಯಲಿದೆ.

ಪುರುಷರಿಗೆ ವಾಲಿಬಾಲ್ ಮತ್ತು ಕಬಡ್ಡಿ, ಮಹಿಳೆಯರಿಗೆ ಥ್ರೋಬಾಲ್ ಮತ್ತು ಹಗ್ಗಜಗ್ಗಾಟ ಏರ್ಪಡಿಸ ಲಾಗಿದ್ದು, ಸ್ಪರ್ಧೆಯಲ್ಲಿ ವಿಜೇತರಾದ ವರಿಗೆ ಪ್ರಶಸ್ತಿಗಳನ್ನು ನೀಡಲಾಗುವುದು. ಆಸಕ್ತ ತಂಡಗಳು ತಾ. ೨೨ ರಂದು (ಇಂದು) ಸಂಜೆ ೫.೩೦ ಗಂಟೆಯೊಳಗೆ ಗ್ರಾ.ಪಂ. ಕಚೇರಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಗೋಣಿಕೊಪ್ಪಲು ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.