ಕೂಡಿಗೆ, ನ. ೨೧: ವಿಶ್ವ ಶೌಚಾಲಯ ದಿನದ ಅಂಗವಾಗಿ ಮುಳ್ಳುಸೋಗೆ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛತಾ ಓಟ ಕಾರ್ಯಕ್ರಮವನ್ನು ಹಮ್ಮಿಕೊಂಡು ಗ್ರಾಮೀಣ ಭಾಗದ ಜನರಲ್ಲಿ ಸ್ವಚ್ಛತೆಯ ಅರಿವನ್ನು ಮೂಡಿಸಲಾಯಿತು.
ಸ್ವಚ್ಛತಾ ಓಟ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಕೆ ಚೆಲುವರಾಜು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮುಳ್ಳುಸೋಗೆ ಹಾಗೂ ಗುಮ್ಮನಕೊಲ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು ಹಾಗೂ ಗ್ರಾಪಂ ಸದಸ್ಯರು, ಅಭಿವೃದ್ಧಿ ಅಧಿಕಾರಿ ಸುಮೇಶ್ ಪಾಲ್ಗೊಂಡಿದ್ದರು.
ಸ್ವಚ್ಛತಾ ಓಟ ಕಾರ್ಯಕ್ರಮದ ಮೂಲಕ ಸಾರ್ವಜನಿಕರಲ್ಲಿ ಹಾಗೂ ಮಕ್ಕಳಲ್ಲಿ ಶೌಚಾಲಯದ ಅವಶ್ಯಕತೆ ಬಳಕೆ ಹಾಗೂ ಸ್ವಚ್ಛತೆಯ ಅಗತ್ಯತೆಯನ್ನು ಮನದಟ್ಟು ಮಾಡಿಕೊಡಲಾಯಿತು.