ಸೋಮವಾರಪೇಟೆ, ನ. ೨೨: ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗಿಯಾಗಿ ರಾಜ್ಯಮಟ್ಟಕ್ಕೆ ಆಯ್ಕೆ ಯಾದ ಸಮೀಪದ ನೇರುಗಳಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಜಿ.ಎಲ್. ನೇಸರಾಳನ್ನು ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಲಾಯಿತು.
ಶಾಲೆಯಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮ ದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪ, ತಾ.ಪಂ. ಮಾಜೀ ಅಧ್ಯಕ್ಷ ಎಸ್.ಎಂ. ಡಿಸಿಲ್ವಾ, ಗ್ರಾಮ ಪಂಚಾಯ್ತಿ ಸದಸ್ಯರಾದ ಅಜಿತ್, ಸಂಭ್ರಮ್, ಪ್ರಕಾಶ್, ಪ್ರಮುಖರಾದ ಎಂ.ಎ. ರುಬೀನಾ, ರವಿಕುಮಾರ್ ಸೇರಿದಂತೆ ಇತರರು ಸನ್ಮಾನಿಸಿ ದರು.