ಸಿದ್ದಾಪುರ, ನ. ೨೨: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿ., ಮಡಿಕೇರಿ ಹಾಗೂ ಗುಹ್ಯ ಅಗಸ್ತೆö್ಯÃಶ್ವರ ಪ್ಯಾಕ್ಸ್ ನಿ., ಸಿದ್ದಾಪುರ ಸಂಯುಕ್ತಾಶ್ರಯದಲ್ಲಿ ೬೯ ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನೆಯನ್ನು ಗುಹ್ಯ ಅಗಸ್ತೆö್ಯÃಶ್ವರ ಪ್ಯಾಕ್ಸ್ನ ಸಭಾಂಗಣದಲ್ಲಿ ಏರ್ಪಡಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆ ಯನ್ನು ನೆರವೇರಿಸಿ ಮಾತನಾಡಿದ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರು ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ನಿರ್ದೇಶಕ ಎ.ಕೆ. ಮನು ಮುತ್ತಪ್ಪ, ೧೯೦೫ ರಲ್ಲಿ ಗದಗಿನ ಕಣಗಿನಹಾಳ ಗ್ರಾಮದಲ್ಲಿ ಶಿದ್ದನಗೌಡ ಸಂಣರಾಮನಗೌಡ ಪಾಟೀಲರು ಪ್ರಪ್ರಥಮ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸುವುದರ ಮೂಲಕ ಪ್ರಾರಂಭಗೊAಡ ಕ್ರಾಂತಿ ಇಂದು ಎಲ್ಲಾ ವಿಧದ ಸಹಕಾರ ಸಂಘವನ್ನು ಸ್ಥಾಪಿಸುವಷ್ಟರ ಮಟ್ಟಿಗೆ ಬೆಳೆದಿದೆ. ಕೊಡಗು ಜಿಲ್ಲೆಯಲ್ಲಿಯೂ ಸಹಕಾರ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದು ೧೯೦೫ ರಲ್ಲಿಯೇ ಶಾಂತಳ್ಳಿಯ ತಲ್ತರೆ ಶೆಟ್ಟಳ್ಳಿಯಲ್ಲಿ ಪ್ರಥಮ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸಿ ರೈತರ ಹಾಗೂ ಬಡವರ ಏಳಿಗೆಗಾಗಿ ಶ್ರಮಿಸಲಾಯಿತು. ಸಹಕಾರ ಕ್ಷೇತ್ರದಲ್ಲಿ ಕೊಡಗಿನ ಪಿ.ಐ. ಬೆಳ್ಯಪ್ಪ, ಪಿ.ಎಂ. ಚಂಗಪ್ಪ, ಸಿ.ಎಂ. ಪೂಣಚ್ಚರವರ ಕೊಡುಗೆ ಅಪಾರ. ಅದರಲ್ಲೂ ಪಿ.ಐ. ಬೆಳ್ಯಪ್ಪರವರು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಸ್ಥಾಪನೆಗೆ ಕಾರಣಿಕರ್ತರಾಗಿ ದ್ದರು ಎಂಬುದು ಗಮನಾರ್ಹ. ಸಹಕಾರ ಕ್ಷೇತ್ರದಿಂದ ರೈತರ, ಬಡವರ, ಶೋಷಿತರ ಏಳಿಗೆ ಸಾಧ್ಯ ಎಂಬುದನ್ನು ಮನಗಂಡ ಕೇಂದ್ರ ಸರ್ಕಾರವು ಸಹಕಾರ ಸಚಿವಾಲಯವನ್ನು ಪ್ರಾರಂಭಿಸಿ ಸಹಕಾರ ಕ್ಷೇತ್ರವನ್ನು ಇನ್ನಷ್ಟು ಬಲಿಷ್ಟಗೊಳಿಸಲು ಪೂರಕ ಯೋಜನೆಯನ್ನು ರೂಪಿಸುತ್ತಿದ್ದು, ಮುಂದೊAದು ದಿನ ದೇಶದ ಪ್ರಗತಿಗೆ ಸಹಕಾರ ಕ್ಷೇತ್ರದಿಂದ ಮಾತ್ರ ಸಾಧ್ಯ ಎಂಬುದಾಗಿ ಅಭಿಪ್ರಾಯಪಟ್ಟರು.

ಸಹಕಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿದ್ದಾಪುರ ಗ್ರಾಮ ಪಂಚಾಯತ್ ಅಧ್ಯಕ್ಷೆ ಬಿ.ಎಸ್. ರೀನಾ ತುಳಸಿರವರು, ಸಹಕಾರ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರ ಹಾಗೂ ಮಹಿಳೆಯರು ಸಹಕಾರ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ದುಡಿಯುವಂತಾಗಬೇಕೆAದು ಹರಸುತ್ತಾ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗುಹ್ಯ ಅಗಸ್ತೆö್ಯÃಶ್ವರ ಪ್ಯಾಕ್ಸ್ನ ಅಧ್ಯಕ್ಷ ಎಂ.ಎಸ್. ವೆಂಕಟೇಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ೬೯ ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಸಹಕಾರ ಸಂಘದಲ್ಲಿ ಆಚರಿಸುತ್ತಿದ್ದು, ಹೆಮ್ಮೆಯ ವಿಚಾರವಾಗಿದ್ದು, ಸಹಕಾರ ಕ್ಷೇತ್ರದಲ್ಲಿ ಹಿರಿಯ ಚೇತನಗಳು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಸಾಗುತ್ತಿದ್ದು ಸಂಘವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಹಿರಿಯ ಸಹಕಾರಿಗಳನ್ನು ಇಂದು ಸನ್ಮಾನಿಸುತ್ತಿದ್ದು, ಸನ್ಮಾನಿತರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ‘ಸಹಕಾರ ಸಂಸ್ಥೆಗಳಲ್ಲಿ ವ್ಯಾಪಾರ ಸರಳೀಕರಣ, ರಫ್ತು ವೃದ್ಧಿಗಾಗಿ ಜೆಮ್ ಪೋರ್ಟಲ್ ಬಳಕೆ’ ವಿಷಯದ ಕುರಿತು ಕೆ.ಐ.ಸಿ.ಎಂ.ನ ಪ್ರಾಂಶುಪಾಲರಾದ ಡಾ. ಆರ್.ಎಸ್. ರೇಣುಕಾ ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷರಾದ ಪಿ.ಸಿ. ಮನು ರಾಮಚಂದ್ರ, ನಿರ್ದೇಶಕರಾದ ಬಿ.ಎ. ರಮೇಶ್ ಚಂಗಪ್ಪ, ಕೆ.ಪಿ. ವಾಸು ಮುದ್ದಯ್ಯ, ಎನ್.ಎಂ. ಉಮೇಶ್ ಉತ್ತಪ್ಪ, ಪಿ.ಸಿ. ಅಚ್ಚಯ್ಯ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕರಾದ ಪಿ.ಬಿ. ರಘು ನಾಣಯ್ಯ, ಎಚ್.ಎಂ. ರಮೇಶ್, ವೀರಾಜಪೇಟೆ ತಾಲೂಕು ಸಹಕಾರ ಕೂಟದ ಅಧ್ಯಕ್ಷರಾದ ಎಂ.ಟಿ. ಸುಬ್ಬಯ್ಯರವರುಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆ ಮತ್ತು ವಂದನಾರ್ಪಣೆಯನ್ನು ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಸಿದ್ದಾಪುರ ಪ್ಯಾಕ್ಸ್ನ ಉಪಾಧ್ಯಕ್ಷ ಎಂ. ಬಿಜಾಯ್ ಹಾಗೂ ಆಡಳಿತ ಮಂಡಳಿ ಸದಸ್ಯರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ, ಯೂನಿಯನ್ ಸಿಬ್ಬಂದಿ ಬಿ.ಸಿ. ಅರುಣ್ ಕುಮಾರ್‌ರವರು ಹಾಜರಿದ್ದರು.