ಕೂಡಿಗೆ, ನ. ೨೩: ಕೊಡಗು ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ, ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆ ಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ವೆಂಕಟೇಶ್ ನೆರವೇರಿಸಿ ಮಾತನಾಡಿ, ಗ್ರಾಮಾಂತರ ಪ್ರದೇಶದ ಜನರಿಗೆ ಅರೋಗ್ಯ ಇಲಾಖೆಯ ಯೋಜನೆ ಸದುಪಯೋಗ ಪಡಿಸಿಕೊಳ್ಳಲು ಇಂತಹ ಉಚಿತ ಆರೋಗ್ಯ ತಪಾಸಣೆಯ ಶಿಬಿರಗಳು ಉಪಯುಕ್ತವಾಗುತ್ತವೆ. ಇಂತಹ ಶಿಬಿರಗಳ ಮೂಲಕ ವಿವಿಧ ವೈದ್ಯಕೀಯ ತಪಾಸಣೆ ಮಾಡಿಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿ ಕೊಳ್ಳಲು ಸಹಕಾರವಾಗುವುದು ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್, ಉಪಾಧ್ಯಕ್ಷ ಭಾಸ್ಕರ್ ನಾಯಕ್ ಮಾತನಾಡಿದರು,
ಈ ಸಂದರ್ಭ ಕೊಡಗು ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆಯ ಪ್ರಮುಖರಾದ ಡೀನ್ ಕಾರ್ಯಪ್ಪ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ, ಡಾ. ನಂಜುAಡಯ್ಯ, ಡಾ. ಲೋಕೇಶ್, ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ತೇಜಸ್ವಿ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಸೇರಿದಂತೆ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನುರಿತ ವಿವಿಧ ವಿಭಾಗದ ವೈದ್ಯಾಧಿಕಾರಿಗಳು ಭಾಗವಹಿಸಿ ೪೦೦ ಕ್ಕೂ ಹೆಚ್ಚು ಮಂದಿಯ ಆರೋಗ್ಯ ತಪಾಸಣೆ ಮಾಡಿದರು.