ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ತಡೆಗೆ ಕ್ರಮ : ಸಚಿವ ಕೆ.ಗೋಪಾಲಯ್ಯ

ಹಾಸನ, ನ. ೨೩: ಕಾಡಾನೆ ಹಾವಳಿ ತಡೆಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ. ಕಾಡಾನೆ ಹಾವಳಿ ತಡೆ ಸಂಬAಧ ವಿಶೇಷ ತಂಡ ಬಂದು ಈಗಾಗಲೇ ಅಧ್ಯಯನ ಕೂಡ ನಡೆಸಿದೆ. ಸಿಎಂ ಈ ವಿಚಾರವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ತಜ್ಞರ ತಂಡ ವರದಿ ಕೊಟ್ಟ ಬಳಿಕ ಸಿಎಂ ಜೊತೆ ಮತ್ತೆ ಮಾತನಾಡುವುದಾಗಿ ತಿಳಿಸಿದರು. ಆನೆ ಹಾವಳಿ ತಡೆಗೆ ಏನೆಲ್ಲಾ ಮಾಡಬಹುದು ಎಂದು ಚರ್ಚೆ ಮಾಡಲಾಗುತ್ತದೆ. ಒಂದೇ ದಿನಕ್ಕೆ ಎಲ್ಲವನ್ನೂ ಮಾಡಲು ಆಗುವುದಿಲ್ಲ. ರೈಲ್ವೆ ಬ್ಯಾರಿಕೇಡ್ ನಿರ್ಮಾಣ, ಆನೆಗಳ ಸ್ಥಳಾಂತರದ ಕೆಲಸ ಹಂತ ಹಂತವಾಗಿ ಆಗುತ್ತದೆ ಎಂದರು. ಆನೆ ಹಾವಳಿ ತಡೆಗೆ ರಾಜ್ಯದಲ್ಲಿ ನಿರಂತರ ಪ್ರಯತ್ನ ನಡೆಯುತ್ತಿದೆ. ಕೇಂದ್ರದಿAದ ಹೆಚ್ಚಿನ ಅನುದಾನ ಹಾಗೂ ಕಡಿಮೆ ಹಣದಲ್ಲಿ ರೈಲ್ವೆ ಹಳಿಗಳನ್ನು ನೀಡುವಂತೆ ಮನವಿ ಮಾಡಲಾಗುವುದು. ಗಣಿಗಾರಿಕೆ ಸೇರಿದಂತೆ ಹಲವು ಯೋಜನೆಗಳ ಅನುಷ್ಟಾನ ದಿಂದ ಆನೆ ಸೇರಿದಂತೆ ಹಲವು ಕಾಡು ಪ್ರಾಣಿಗಳು ತಮ್ಮ ಆವಾಸ ಸ್ಥಾನ ಬದಲಿಸುತ್ತಿವೆ. ವನ್ಯ ಜೀವಿಗಳು ಹಾಗೂ ಮಾನವ ಸಂಘರ್ಷ ತಡೆಗೆ ಇಲಾಖೆ ವತಿಯಿಂದ ಗಂಭೀರ ಪ್ರಯತ್ನವನ್ನು ವೈಜ್ಞಾನಿಕವಾಗಿ ಮಾಡಲಾಗುವುದು ಎಂದರು. ಆನೆಗಳು ಎರಡು, ಮೂರು ಗುಂಪುಗಳಾಗಿ ವಾಸ ಮಾಡುತ್ತಿವೆ. ಇದೀಗ ಇರುವ ಮಾಹಿತಿ ಪ್ರಕಾರ ಆನೆಗಳನ್ನು ಬೇರೆಕಡೆಗೆ ಸ್ಥಳಾಂತರ ಮಾಡಾಗುತ್ತಿದೆ. ಇದಕ್ಕಾಗಿ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದರು. ಕಳೆದ ಏಳೆಂಟು ವರ್ಷದಿಂದ ಆನೆಗಳ ಸಂತಾನಾಭಿವೃದ್ಧಿ ಅಧಿಕವಾಗಿದೆ. ಇವುಗಳಿಗೆ ಅರಣ್ಯದಲ್ಲಿಯೇ ನೀರು ಮತ್ತು ಆಹಾರ ಸಿಗುವಂತೆ ನೋಡಿಕೊಳ್ಳುವುದು ಅಗತ್ಯವಾಗಿದೆ ಎಂದರು.

ಚುನಾವಣಾ ಆಯುಕ್ತರ ನೇಮಕದಲ್ಲಿ ಕೈ ಚಳಕ?: ಕಡತ ಹಾಜರುಪಡಿಸಲು ಕೋರ್ಟ್ ಸೂಚನೆ

ನವದೆಹಲಿ, ನ. ೨೩: ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರ ನೇಮಕಕ್ಕೆ ಸಂಬAಧಪಟ್ಟ ಕಡತಗಳನ್ನು ತನ್ನೆದುರು ಹಾಜರುಪಡಿಸುವುದಕ್ಕೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಅರುಣ್ ಗೋಯಲ್ ಅವರು ನ.೧೯ ರಂದು ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದರು. ನ್ಯಾ. ಕೆಎಂ ಜೋಸೆಫ್ ನೇತೃತ್ವದ ಪಂಚ ಸದಸ್ಯರನ್ನೊಳಗೊಂಡ ಸಾಂವಿಧಾನಿಕ ಪೀಠ, ಕೇಂದ್ರಕ್ಕೆ ಸೂಚನೆ ನೀಡಿದ್ದು, ಗೋಯಲ್ ಸ್ವಯಂ ನಿವೃತ್ತಿ ಪಡೆದಿದ್ದರು. ಆದರೆ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಲಾಗಿರುವುದರ ಹಿಂದೆ ಯಾರದ್ದಾದರೂ ಕೈಚಳಕ ಇದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು, ಅದಕ್ಕಾಗಿ ನೇಮಕಕ್ಕೆ ಸಂಬAಧಿಸಿದ ಕಡತವನ್ನು ಹಾಜರುಪಡಿಸಬೇಕೆಂದು ಕೋರ್ಟ್ ಸರ್ಕಾರಕ್ಕೆ ಹೇಳಿದೆ. ವಿಚಾರಣೆ ವೇಳೆ, ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರ ಆಕ್ಷೇಪಣೆಗಳನ್ನು ನ್ಯಾಯಪೀಠ ತಿರಸ್ಕರಿಸಿದೆ. ಕೋರ್ಟ್ ಚುನಾವಣಾ ಆಯುಕ್ತ ಹಾಗೂ ಮುಖ್ಯ ಚುನಾವಣಾ ಆಯುಕ್ತರ ನೇಮಕಕ್ಕೆ ಸಂಬAಧಿಸಿದ ಗಂಭೀರ ವಿಷಯದೊಂದಿಗೆ ವ್ಯವಹರಿಸುತ್ತಿದೆ. ಇದನ್ನು ಅಡ್ವೊಕೇಟ್ ಪ್ರಶಾಂತ್ ಭೂಷಣ್ ಅವರು ಪ್ರಸ್ತಾಪಿಸಿರುವ ವಿಷಯ ಎಂದಷ್ಟೇ ನೋಡುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಸಾಂವಿಧಾನಿಕ ಪೀಠದ ವಿಚಾರಣೆ ನಡುವೆ ಕೋರ್ಟ್ ಕಡತವನ್ನು ನೋಡುವುದಕ್ಕೆ ನನ್ನ ಅಭ್ಯಂತರವಿದೆ ಎಂದು ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಹೇಳಿದ್ದಾರೆ. ಕಳೆದ ಗುರುವಾರ ವಿಷಯವನ್ನು ವಿಚಾರಣೆಗೆ ಕೈಗೆತ್ತಿಕೊಂಡಿರುವುದಾಗಿ ಹೇಳಿರುವ ಕೋರ್ಟ್, ನ.೧೯ ರಿಂದಲೇ ಜಾರಿಗೆ ಬರುವಂತೆ ನೇಮಕಾತಿ ಮಾಡಲಾಗಿದೆ. ಆದ್ದರಿಂದ ಈ ನಡೆಗೆ ಏನು ಪ್ರಚೋದನೆ ಇರಬಹುದು ಎಂಬುದನ್ನು ನೋಡಬೇಕು ಎಂದು ಕೋರ್ಟ್ ಹೇಳಿದೆ.

ಸಹೋದ್ಯೋಗಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪೊಲೀಸ್

ಕೊಹಿಮಾ, ನ. ೨೩: ನಾಗಾಲ್ಯಾಂಡ್ ಪೊಲೀಸ್ ವಿಶೇಷ ಕಾರ್ಯಪಡೆ (ಎಸ್‌ಟಿಎಫ್)ಯ ಸಿಬ್ಬಂದಿಯೊಬ್ಬರು ತನ್ನ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಪೆರೆನ್ ಜಿಲ್ಲೆಯ ಜಲುಕಿಯಲ್ಲಿ ಮಂಗಳವಾರ ರಾತ್ರಿ ೮:೩೦ ರ ಸುಮಾರಿಗೆ ಕರ್ತವ್ಯದಲ್ಲಿದ್ದ ಯೋಧ ಜೆನಿಸಿ ತನ್ನ ಎಸ್‌ಟಿಎಫ್ ಪಡೆಯ ಒಬ್ಬ ಸಹೋದ್ಯೋಗಿ ಮತ್ತು ನಾಗಾಲ್ಯಾಂಡ್ ಸಶಸ್ತ್ರ ಪೊಲೀಸ್ ಪಡೆಯ ೧೦ನೇ ಇಂಡಿಯಾ ರಿಸರ್ವ್ ಬೆಟಾಲಿಯನ್‌ನ ಇನ್ನೊಬ್ಬ ಸಹೋದ್ಯೋಗಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಜೆೆನಿಸಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಘಟನೆಯ ನಂತರ ಆತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಹತ್ಯೆಯಾದವರನ್ನು ಎಸ್‌ಟಿಎಫ್‌ನ ಲ್ಯಾನ್ಸ್ ನೈಲ್ ಜೆವಾಂಗ್ಬಾ ಯಿಮ್ಖಿಯುಂಗ್ ಮತ್ತು ೧೦ನೇ ಇಂಡಿಯಾ ರಿಸರ್ವ್ ಬೆಟಾಲಿಯನ್‌ನ ಕಾನ್‌ಸ್ಟೆಬಲ್ ಕೆವಿಶೆಖೋ ಖಾಟೆ ಎಂದು ಗುರುತಿಸಲಾಗಿದೆ. ಈ ಹತ್ಯೆಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ಆಟೋ ಸ್ಫೋಟ ಪ್ರಕರಣ ಶೀಘ್ರದಲ್ಲೇ ಎನ್‌ಐಎಗೆ ಹಸ್ತಾಂತರ

ಮAಗಳೂರು, ನ. ೨೩: ಮಂಗಳೂರಿನ ಗರೋಡಿಯಲ್ಲಿ ಸಂಭವಿಸಿದ ಆಟೋರಿಕ್ಷಾ ಸ್ಫೋಟ ಪ್ರಕರಣವನ್ನು ಶೀಘ್ರದಲ್ಲೇ ರಾಷ್ಟಿçÃಯ ತನಿಖಾ ಸಂಸ್ಥೆ (ಎನ್‌ಐಎ)ಗೆ ಅಧಿಕೃತಕವಾಗಿ ಹಸ್ತಾಂತರಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶ(ಡಿಜಿಪಿ) ಪ್ರವೀಣ್ ಸೂದ್ ಅವರು ಬುಧವಾರ ಹೇಳಿದ್ದಾರೆ. ಇಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಡಿಜಿಪಿ ಪ್ರವೀಣ್ ಸೂದ್ ಅವರು ನಗರದ ಹೊರವಲಯದಲ್ಲಿ ಸ್ಫೋಟ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಆಟೋ ಚಾಲಕ ಪುರುಷೋತ್ತಮ ಪೂಜಾರಿ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೂ ಭೇಟಿ ನೀಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರಗ ಜ್ಞಾನೇಂದ್ರ ಅವರು, ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ ತಮಿಳುನಾಡಿನ ಕೊಯಮತ್ತೂರು ಮತ್ತು ಕನ್ಯಾಕುಮಾರಿಯಂತಹ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆಯ ಭಾಗವಾಗಿ ವಿವಿಧ ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಮತ್ತು ವಿವಿಧ ಸ್ಥಳಗಳಿಗೆ ತಂಡಗಳನ್ನು ಕಳುಹಿಸಲಾಗಿದೆ ಎಂದರು. ಈ ವೇಳೆ ಮಾತನಾಡಿದ ಪ್ರವೀಣ್ ಸೂದ್ ಅವರು, ಸ್ಫೋಟ ನಡೆದ ಮೊದಲ ದಿನದಿಂದಲೇ ಎನ್‌ಐಎ ಮತ್ತು ಕೇಂದ್ರೀಯ ತನಿಖಾ ಸಂಸ್ಥೆಗಳು ತನಿಖೆಯ ಭಾಗವಾಗಿದ್ದು, ಶೀಘ್ರದಲ್ಲೇ ಪ್ರಕರಣವನ್ನು ಅಧಿಕೃತವಾಗಿ ಎನ್‌ಐಎಗೆ ಹಸ್ತಾಂತರಿಸಲಾಗುವುದು ಎಂದು ಹೇಳಿದರು.