ಪೊನ್ನಂಪೇಟೆ, ನ. ೨೩: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಮಡಿಕೇರಿ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ ಮಡಿಕೇರಿ, ಪೊನ್ನಂಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ, ಪೊನ್ನಂಪೇಟೆ ಪಟ್ಟಣ ಸಹಕಾರ ಬ್ಯಾಂಕ್ ನಿಯಮಿತ, ಪೊನ್ನಂಪೇಟೆ ಎಪಿಸಿಎಂಎಸ್ ನಿಯಮಿತ ಮತ್ತು ಪೊನ್ನಂಪೇಟೆ ಮಹಿಳಾ ಸಹಕಾರ ಸಂಘ ನಿಯಮಿತ ಇವರ ಸಂಯುಕ್ತ ಆಶ್ರಯದಲ್ಲಿ ೬೯ ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ, "ಉದ್ಯಮಶೀಲತೆ ಅಭಿವೃದ್ಧಿ, ಸಾರ್ವಜನಿಕ, ಖಾಸಗಿ, ಸಹಕಾರಿ ಸಹಭಾಗಿತ್ವವನ್ನು ಬಲಗೊಳಿಸುವ ದಿನಾಚರಣೆ" ಕಾರ್ಯಕ್ರಮವನ್ನು ಪೊನ್ನಂಪೇಟೆ ಕೊಡವ ಸಮಾಜ ರಿಕ್ರಿಯೇಷನ್ ಕ್ಲಬ್ ಸಭಾಂಗಣದಲ್ಲಿ ನಡೆಸಲಾಯಿತು.

ಪೊನ್ನಂಪೇಟೆ ಪಟ್ಟಣ ಸಹಕಾರ ಬ್ಯಾಂಕ್‌ನ ಅಧ್ಯಕ್ಷ ಚಿರಿಯಪಂಡ ಕೆ. ಉತ್ಪಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸಹಕಾರಿ ಸಂಸ್ಥೆಗಳ ಆಡಳಿತ ಮಂಡಳಿಗೆ ರಾಜಕೀಯ ರಹಿತವಾಗಿ, ಸಹಕಾರಿ ಮನೋಭಾವ ಹಾಗೂ ಆಸಕ್ತಿ ಇರುವ ವ್ಯಕ್ತಿಗಳನ್ನು ಆಯ್ಕೆ ಮಾಡಿದರೆ ಮತ್ತಷ್ಟು ಸಹಕಾರಿ ಸಂಸ್ಥೆಗಳು ಅಭಿವೃದ್ಧಿಯಾಗಿ ರೈತರಿಗೆ ಸಹಕಾರವಾಗುತ್ತೆ ಎಂದರು.

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಅಧ್ಯಕ್ಷ ಕೊಡಂದೇರ ಪಿ. ಗಣಪತಿಯವರು ಸಹಕಾರಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕೊಡಗು ಜಿಲ್ಲಾ ಸಹಕಾರ ಬ್ಯಾಂಕು ನಮ್ಮ ಜಿಲ್ಲೆಯ ಸರ್ವ ಸಹಕಾರಿ ಸಂಸ್ಥೆಗಳ ಉತ್ತಮ ವ್ಯವಹಾರ, ಒಡನಾಟ, ಸಹಕಾರದಿಂದ ಸುಭದ್ರತೆಯಿಂದ ಬೆಳೆದು ಕೊಡಗಿನ ರೈತಾಪಿ ವರ್ಗಕ್ಕೆ ಸಹಕಾರಿಯಾಗಿದೆ ಎಂದು ಹೇಳಲು ಹೆಮ್ಮೆಯಾಗುತ್ತದೆ ಎಂದರು.

ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ನ ಅಧ್ಯಕ್ಷ ಅಪ್ಪಚಟ್ಟೋಳಂಡ ಕೆ. ಮನು ಮುತ್ತಪ್ಪನವರು ಹಿರಿಯ ಸಹಕಾರಿಗಳಿಗೆ ಸನ್ಮಾಸಿ ಮಾತನಾಡಿ ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪೊನ್ನಂಪೇಟೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚೀರಂಡ ಕಂದಾ ಸುಬ್ಬಯ್ಯನವರು ಮಾತನಾಡಿ, ಸಹಕಾರಿ ಸಂಘದ ಸದಸ್ಯರು ಒಂದು ವ್ಯವಹಾರ, ಒಡನಾಟ, ಸಹಕಾರದಿಂದ ಸುಭದ್ರತೆಯಿಂದ ಬೆಳೆದು ಕೊಡಗಿನ ರೈತಾಪಿ ವರ್ಗಕ್ಕೆ ಸಹಕಾರಿಯಾಗಿದೆ ಎಂದು ಹೇಳಲು ಹೆಮ್ಮೆಯಾಗುತ್ತದೆ ಎಂದರು.

ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ನ ಅಧ್ಯಕ್ಷ ಅಪ್ಪಚಟ್ಟೋಳಂಡ ಕೆ. ಮನು ಮುತ್ತಪ್ಪನವರು ಹಿರಿಯ ಸಹಕಾರಿಗಳಿಗೆ ಸನ್ಮಾಸಿ ಮಾತನಾಡಿ ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪೊನ್ನಂಪೇಟೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚೀರಂಡ ಕಂದಾ ಸುಬ್ಬಯ್ಯನವರು ಮಾತನಾಡಿ, ಸಹಕಾರಿ ಸಂಘದ ಸದಸ್ಯರು ಒಂದು ಹೊಟ್ಟೇಂಗಡ ಎಂ.ರಮೇಶ್, ಕುಂಞAಗಡ ಅರುಣ್ ಭೀಮಯ್ಯ, ಕೊಂಗAಡ ವಾಸು ಮುದ್ದಯ್ಯ, ಪೆಮ್ಮಂಡ ವಿ.ಭರತ್, ಪೊನ್ನಂಪೇಟೆ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಚಿರಿಯಪಂಡ ಇಮ್ಮಿ ಉತ್ತಪ್ಪ, ಕೆ. ಹುದಿಕೇರಿ ಪ್ಯಾಕ್ಸ್ ಅಧ್ಯಕ್ಷ ರಘು ತಿಮ್ಮಯ್ಯ, ಕೆ.ಐ.ಸಿ.ಸಿ. ನಿವೃತ್ತ ಪ್ರಾಂಶುಪಾಲರಾದ ಎಂ.ಎA. ಶ್ಯಾಮಲ, ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ವರ್ಗದವರು ಇದ್ದರು.

ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಿಇಒ ಯೋಗೇಂದ್ರ ನಾಯಕ ಪ್ರಾರ್ಥಿಸಿ, ಪೊನ್ನಂಪೇಟೆ ಎ.ಪಿ.ಸಿ.ಎಂ.ಎಸ್. ಅಧ್ಯಕ್ಷ ಮುದ್ದಿಯಡ ಮಂಜು ಗಣಪತಿ ಸ್ವಾಗತಿಸಿ, ಪೊನ್ನಂಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಓ ಶ್ರೀನಿವಾಸ್ ನಾಯ್ಡು ವಂದಿಸಿದರು.