ಕೂಡಿಗೆ, ನ. ೨೩ : ಕೂಡಿಗೆ ಶ್ರೀ ಉದ್ಭವ ಸುಬ್ರಹ್ಮಣ್ಯ ಸ್ವಾಮಿ ಷಷ್ಠಿಯ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯು ಕೂಡಿಗೆ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯಿತು. ಮೂರ್ನಾಡು ತಂಡ ಪ್ರಥಮ ಸ್ಥಾನವನ್ನು ಪಡೆದು ನಗದು ಹಾಗೂ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ದ್ವಿತೀಯ ಸ್ಥಾನವನ್ನು ಕೂಡಿಗೆಯ ಕೋಮನ್ ತಂಡ ಪಡೆದರೆ ತೃತೀಯ ಸ್ಥಾನವನ್ನು ಕುಶಾಲನಗರ ಸಹಾರ ಫ್ರೆಂಡ್ಸ್ ತಂಡ ಪಡೆದುಕೊಂಡಿತು.
ಪAದ್ಯಾಟದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ಎಂ. ವಿಜಯ ನೆರವೇರಿಸಿ ಮಾತನಾಡಿ, ಗ್ರಾಮಾಂತರ ಪ್ರದೇಶಗಳಲ್ಲಿ ಕ್ರೀಡಾಕೂಟಗಳು ನಡೆಯುವುದರಿಂದ ಯುವಕರಲ್ಲಿ ಸ್ನೇಹ ಸಮ್ಮಿಲನವಾಗುವುದು, ಕ್ರೀಡಾ ಮನೋಭಾವನೆ ಮೂಲಕ ಒಗ್ಗೂಡಿ ಗ್ರಾಮದಲ್ಲಿ ಧಾರ್ಮಿಕ, ಮತ್ತು ಸಾಮಾಜಿಕ ಕಾರ್ಯಕ್ರಮದ ಚಟುವಟಿಕೆಗಳನ್ನು ಕೈಗೊಳ್ಳಲು ಸಹಕಾರಿಯಾಗುತ್ತದೆ ಎಂದರು. ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟದ ೧೨ ತಂಡಗಳು ಭಾಗವಹಿಸಿದವು. ಇದರಲ್ಲಿ ಬೆಸ್ಟ್ ಅಟ್ಯಾಕರ್, ಬೆಸ್ಟ್ ಪಾಸರ್, ಬೆಸ್ಟ್ ಡಿಫೆಂಡರ್, ಸರಣಿ ಶ್ರೇಷ್ಠ ಬಹುಮಾನಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭ ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ.P.ೆ ನಾಗರಾಜಶೆಟ್ಟಿ, ಸಮಿತಿಯ ಸದಸ್ಯರಾದ ಕಿರಣ್, ಸೆಲ್ವ, ಆಲಿ, ದರ್ಶನ, ಮಂಜುನಾಥ, ಸಂತೋಷ ಸೇರಿದಂತೆ ಕೂಡಿಗೆ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೂರಾರು ಕ್ರೀಡಾಪಟುಗಳು ಭಾಗವಹಿಸಿದರು.