ನಾಪೋಕ್ಲು, ನ. ೨೩: ನಂ. ೨೭೪ ನಾಪೋಕ್ಲು ನಾಡು ಗ್ರಾಹಕರ ಸಹಕಾರ ಸಂಘ ನಿಯಮಿತ ಇದರ ನೂತನ ಕಟ್ಟಡದ ಉದ್ಘಾಟನೆ ತಾ. ೨೫ ರಂದು ಬೆಳಿಗ್ಗೆ ೯ ಗಂಟೆಗೆ ಪಟ್ಟಣದ ಬಸ್ ನಿಲ್ದಾಣದ ಸಮೀಪ ಜರುಗಲಿದೆ. ಇದರ ಉದ್ಘಾಟನೆಯನ್ನು ಶಾಸಕ ಕೆ.ಜಿ. ಬೋಪಯ್ಯ ನವರು ನೆರವೇರಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರ ಸಂಘದ ಅಧ್ಯಕ್ಷ ಪಟ್ರಪಂಡ ಮೋಹನ್ ಮುದ್ದಯ್ಯ ವಹಿಸಲಿದ್ದಾರೆ.