ಸೋಮವಾರಪೇಟೆ, ನ. ೨೩: ಭಾರತೀಯ ಜನತಾ ಪಾರ್ಟಿ ನೇತೃತ್ವದ ರಾಜ್ಯ ಸರ್ಕಾರವು ಪ್ರಸಕ್ತ ಅವಧಿಯಲ್ಲಿ ಕೊಡಗು ಜಿಲ್ಲೆಗೆ ೨೦೦೦ ಕೋಟಿಗೂ ಅಧಿಕ ಅನುದಾನ ಬಿಡುಗಡೆ ಮಾಡಿದೆ. ಪ್ರಸಕ್ತ ಸಾಲಿನಲ್ಲಿ ಕೊಡಗಿನಲ್ಲಿ ಅಕಾಲಿಕ ಮಳೆಯಿಂದ ಕೃಷಿ ಫಸಲು ನಷ್ಟವಾಗಿದ್ದು, ೧೧೦ ಕೋಟಿ ಪರಿಹಾರ ನೀಡಲು ಕ್ರಮವಹಿಸಲಾಗಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.

ಇಲ್ಲಿನ ಕೊಡವ ಸಮಾಜದಲ್ಲಿ ಮಂಡಲ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಆಯೋಜಿಸಿದ್ದ ಕಾರ್ಯಕಾರಿಣಿ ಸಮಿತಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ಅವಧಿಯಲ್ಲಿ ೧೮೦೦ ಕೋಟಿ ಅನುದಾನ ವಿನಿಯೋಗವಾಗಿದೆ. ಈ ಬಾರಿ ೨ ಸಾವಿರ ಕೋಟಿಗೂ ಅಧಿಕ ಅನುದಾನವನ್ನು ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯ, ಪರಿಹಾರ ಕ್ರಮಗಳಿಗೆ ವಿನಿಯೋಗಿಸಲಾಗಿದೆ ಎಂದರು.

ಅನುದಾನದ ಬಗ್ಗೆ ಎಲ್ಲರಿಗೂ ಮುಂದಿನ ದಿನಗಳಲ್ಲಿ ಸಮಗ್ರ ವಿವರ ನೀಡಲಾಗುವುದು. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಸಾಧನೆಗಳು, ಜನಪರ ಕಾರ್ಯಕ್ರಮಗಳನ್ನು ಪ್ರತಿಯೋರ್ವರಿಗೂ ತಿಳಿಸುವ ಕೆಲಸವನ್ನು ಮುಖಂಡರು ಹಾಗೂ ಕಾರ್ಯಕರ್ತರು ಮಾಡಬೇಕಿದೆ ಎಂದರು.

ಕಾಫಿ ಬೆಳೆಗಾರರಿಗೆ ಕಾಂಗ್ರೆಸ್ ಸರ್ಕಾರ ಈವರೆಗೆ ನಯಾಪೈಸೆ ಪರಿಹಾರ ನೀಡಿಲ್ಲ. ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದ ಸಂದರ್ಭ ಕೊಡಗಿನ ಅಭಿವೃದ್ಧಿಗೆ ಅನುದಾನ ನೀಡಿಲ್ಲ ಎಂದ ರಂಜನ್, ಕೃಷಿಕ ಸಮ್ಮಾನ್ ಮೂಲಕ ಕೇಂದ್ರದ ಮೋದಿ ಸರ್ಕಾರ

(ಮೊದಲ ಪುಟದಿಂದ) ವರ್ಷಕ್ಕೆ ೬ ಸಾವಿರ, ರಾಜ್ಯ ಬಿಜೆಪಿ ಸರ್ಕಾರ ೪ ಸಾವಿರ ಸೇರಿದಂತೆ ೧೦ ಸಾವಿರ ಹಣ ನೀಡುತ್ತಿದೆ. ಬಿಜೆಪಿಯಿಂದ ಮಾತ್ರ ಅಭಿವೃದ್ಧಿ ಕಾರ್ಯಗಳು ನಡೆಯುತ್ತವೆ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ರಂಜನ್ ಕರೆ ನೀಡಿದರು.

ಲೋಕೋಪಯೋಗಿ ಇಲಾಖೆ ಮೂಲಕ ೨೦೦ ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿ ಕೈಗೊಳ್ಳಲು ಅನುದಾನ ಬಿಡುಗಡೆಯಾಗಿದ್ದು, ೧೦೦ ಕೋಟಿ ವೆಚ್ಚದ ಕಾಮಗಾರಿಗಳಿಗೆ ಇನ್ನಷ್ಟೇ ಚಾಲನೆ ನೀಡಬೇಕಿದೆ. ಜಿಲ್ಲಾ ಪಂಚಾಯಿತಿಗೆ ೬೦ ಕೋಟಿ ಅನುದಾನ ನೀಡಿದ್ದು, ಮಳೆ ವಾತಾವರಣ ದೂರಾದ ನಂತರ ಕಾಮಗಾರಿಗೆ ಭೂಮಿ ಪೂಜೆ ನಡೆಯಲಿದೆ ಎಂದರು.

ಪ್ರಸ್ತುತ ರಾಜ್ಯ ಸರ್ಕಾರ ಎಸ್‌ಸಿ ಎಸ್‌ಟಿ ಸಮುದಾಯದ ಮೀಸಲಾತಿಯನ್ನು ಪರಿಷ್ಕರಣೆ ಮಾಡಿದ್ದು, ಆ ಸಮುದಾಯಕ್ಕೆ ಕಾನೂನಾತ್ಮಕವಾಗಿಯೂ ಪ್ರಾಶಸ್ತö್ಯ ನೀಡಿದೆ. ಈ ಹಿಂದೆ ಬಿಜೆಪಿಯು ಬ್ರಾಹ್ಮಣರ ಪಕ್ಷ ಎಂದು ಮೂದಲಿಸುತ್ತಿದ್ದ ವಿಪಕ್ಷಗಳು ಇಂದು ಬಾಯಿಮುಚ್ಚಿಕೊಂಡಿವೆ. ಆ ಸಮುದಾಯದ ಮಂದಿಗೆ ಬಿಜೆಪಿ ಹೆಚ್ಚಿನ ಸ್ಥಾನಮಾನ ನೀಡಿದೆ ಎಂದು ರಂಜನ್ ಹೇಳಿದರು.

ಪಕ್ಷದ ಕಾರ್ಯಕರ್ತರು ಸೇವಾ ಹೀ ಸಂಘಟನ್ ಮಾದರಿಯಲ್ಲಿ ಕೆಲಸ ನಿರ್ವಹಿಸಬೇಕು. ರಾಜ್ಯ ಹಾಗೂ ದೇಶದ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ. ಕಳೆದ ಚುನಾವಣೆಯಲ್ಲಿ ಕೊಡಗಿನ ಎರಡೂ ಕ್ಷೇತ್ರಗಳಲ್ಲಿ ಹಾಗೂ ಎಂ.ಎಲ್.ಸಿ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜಯಗಳಿಸಿದ್ದಾರೆ. ಮುಂದಿನ ಚುನಾವಣೆಯಲ್ಲೂ ಸಹಕಾರ ನೀಡಬೇಕೆಂದು ರಂಜನ್ ಹೇಳಿದರು.

ಪ್ರಾಸ್ತಾವಿಕವಾಗಿ ಮಂಡಲ ಬಿಜೆಪಿ ಅಧ್ಯಕ್ಷ ಮನುಕುಮಾರ್ ರೈ ಮಾತನಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ನಾಯಕರ ಮಾರ್ಗದರ್ಶನದಂತೆ ಸಂಘಟನೆ ನಡೆಯುತ್ತಿದೆ. ಮುಂದಿನ ಚುನಾವಣೆಯಲ್ಲೂ ಯಾರೇ ಅಭ್ಯರ್ಥಿಯಾದರೂ ಒಗ್ಗಟ್ಟಾಗಿ ಬಿಜೆಪಿಯ ಗೆಲುವಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.

ವೇದಿಕೆಯಲ್ಲಿ ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ರವಿ ಕಾಳಪ್ಪ, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್, ವಿಧಾನ ಪರಿಷತ್ ಮಾಜೀ ಸದಸ್ಯ ಎಸ್.ಜಿ. ಮೇದಪ್ಪ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಕೆ. ಮಾದಪ್ಪ, ನಿಕಟಪೂರ್ವ ಮಂಡಲ ಅಧ್ಯಕ್ಷ ಕೊಮಾರಪ್ಪ ಅವರುಗಳು ಉಪಸ್ಥಿತರಿದ್ದರು.