*ಗೋಣಿಕೊಪ್ಪ, ನ. ೨೫: ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಪ್ರಾಥಮಿಕ ಶಾಲೆಗೆ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ವೇದಮೂರ್ತಿ ಭೇಟಿ ನೀಡಿ ಕಲಿಕಾ ಚೇತರಿಕೆ, ಬಿಸಿ ಊಟ, ತರಗತಿವಾರು ಮಕ್ಕಳ ಕಲಿಕೆ ಬಗ್ಗೆ ಪರಿಶೀಲಿಸಿದರು.
ನಂತರ ಮಕ್ಕಳ ಕಲಿಕೆಗೆ ಶಿಕ್ಷಕರು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆ ನೀಡಿದರು. ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ವನಜಾಕ್ಷಿ, ಕರ್ನಾಟಕ ವಿಜ್ಞಾನ ಪರಿಷತ್‌ನ ಜಿಲ್ಲಾ ಅಧ್ಯಕ್ಷ ಟಿ.ಜಿ. ಪ್ರೇಮಕುಮಾರ್, ಮುಖ್ಯ ಶಿಕ್ಷಕ ಬಿ.ಎಂ. ವಿಜಯ್, ಸಮೂಹ ಸಂಪನ್ಮೂಲ ವ್ಯಕ್ತಿ ತಿರುನೆಲ್ಲಿಮಾಡ ಜೀವನ್, ಶಿಕ್ಷಕರುಗಳಾದ ರೋಸಿ, ಜಾನ್ಸಿ, ಫಿಲೋಮೀನ, ಶಕೀಲಾ ಬಾನು, ಗಂಗಾಮಣಿ, ಮಂಗಳಾAಗಿ, ವಿನಿತ, ಮಹೇಶ್, ನಿಂಗರಾಜು, ಶ್ವೇತಾ, ಚಂದ್ರಮತಿ ಇದ್ದರು.