ಮಾತುಕತೆ ಮೂಲಕ ಗಡಿ ವಿವಾದ ಬಗೆಹರಿಸಿಕೊಳ್ಳಲು ನಿರ್ಧಾರ
ಬೆಂಗಳೂರು, ನ. ೨೪: ಗಡಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂಬ ಮಹಾರಾಷ್ಟç ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೇಳಿಕೆ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಗೃಹ ಸಚಿವ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕರ್ನಾಟಕ ಮತ್ತು ಮಹಾರಾಷ್ಟç ನಡುವಿನ ಗಡಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಎಂದು ಮಹಾರಾಷ್ಟç ಸಿಎಂ ಏಕನಾಥ್ ಶಿಂಧೆ ಅವರು ಹೇಳಿರುವುದನ್ನು ಗಮನಿಸಿದ್ದೇನೆ. ಈ ಬಗ್ಗೆ ಮುಂದಿನ ವಾರ ಸರ್ವಪಕ್ಷ ಸಭೆ ಕರೆದು, ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು. ಮಹಾರಾಷ್ಟç ಸರ್ಕಾರವೇ ಸುಪ್ರೀಂ ಕೋರ್ಟ್ನಲ್ಲಿ ದಾವೆ ಹೂಡಿದೆ. ನಾವು ವಾದ ಮಂಡನೆಗೆ ಸಮರ್ಥವಾಗಿ ತಯಾರಿ ಮಾಡಿಕೊಂಡಿದ್ದೇವೆ. ಈ ಮಧ್ಯೆ ಮಾತುಕತೆ ನಡೆಸುವ ಕುರಿತು ಹೇಳಿಕೆ ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್ನಲ್ಲಿ ವಾದ ಮಾಡುವ ಬಗ್ಗೆ ಈ ಹಿಂದೆ ನಡೆದ ಸರ್ವಪಕ್ಷ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು ಎಂದು ಸಿಎಂ ಹೇಳಿದರು. ನಮ್ಮ ಮುಂದೆ ಸುಪ್ರೀಂ ಕೋರ್ಟ್ನಲ್ಲಿ ವಾದ ಮಂಡಿಸುವ ಉದ್ದೇಶ ಇದೆ. ಆದರೆ ಮಾತುಕತೆ ಬಗ್ಗೆ ಮಹಾರಾಷ್ಟç ಸಿಎಂ ಶಿಂಧೆ ಹೇಳಿಕೆ ನೀಡಿದ್ದಾರೆ. ಈ ಮೂಲಕ ಗಡಿ ವಿಚಾರವೇ ಮುಗಿದು ಹೋಗಿದೆ. ಜತ್ ತಾಲೂಕು ಕರ್ನಾಟಕಕ್ಕೆ ಸೇರುವ ಬಗ್ಗೆ ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳು ನಿರ್ಧರಿಸಿವೆ. ಇವೆಲ್ಲ ಸುಪ್ರೀಂಕೋರ್ಟ್ ಮುಂದೆ ವಾದ ಮಂಡನೆ ವೇಳೆ ಬರಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ಟಿಆರ್‌ಎಸ್ ಶಾಸಕರ ಖರೀದಿ ಪ್ರಕರಣ: ಬಿ.ಎಲ್. ಸಂತೋಷ್ ಆರೋಪಿ
ಹೈದರಾಬಾದ್, ನ. ೨೪: ನಾಲ್ವರು ಟಿಆರ್‌ಎಸ್ ಶಾಸಕರ ಖರೀದಿ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿ.ಎಲ್. ಸಂತೋಷ್ ಮತ್ತು ಇತರ ಮೂವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಆರೋಪಿಗಳೆಂದು ಹೆಸರಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ತೆಲಂಗಾಣ ಹೈಕೋರ್ಟ್ನ ನಿರ್ದೇಶನದ ನಂತರ, ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ, ಬಿಜೆಪಿ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಸಂತೋಷ್ ಅವರಿಗೆ ಎರಡನೇ ನೋಟೀಸ್ ಜಾರಿ ಮಾಡಿದೆ. ಹೊಸ ನೋಟೀಸ್‌ನಲ್ಲಿ, ತಾ. ೨೬ ಅಥವಾ ತಾ. ೨೮ ರಂದು ವಿಚಾರಣೆಗಾಗಿ ಎಸ್‌ಐಟಿ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈವರೆಗಿನ ತನಿಖೆಯ ಆಧಾರದ ಮೇಲೆ ಎಸ್‌ಐಟಿ ಇಲ್ಲಿನ ವಿಶೇಷ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ನ್ಯಾಯಾಲಯಕ್ಕೆ ಮೆಮೊ ಸಲ್ಲಿಸಿದ್ದು, ಅದರಲ್ಲಿ ಸಂತೋಷ್ ಮತ್ತು ಕೇರಳದ ಇಬ್ಬರು ವ್ಯಕ್ತಿಗಳಾದ ಜಗ್ಗು ಸ್ವಾಮಿ ಮತ್ತು ತುಷಾರ್ ವೆಲ್ಲಪಲ್ಲಿ, ಬಿ. ಶ್ರೀನಿವಾಸ್ ಅವರನ್ನು ಪ್ರಕರಣದ ಆರೋಪಿಗಳೆಂದು ಸೇರಿಸಿದೆ. ರಾಮಚಂದ್ರ ಭಾರತಿ ಅಲಿಯಾಸ್ ಸತೀಶ್ ಶರ್ಮಾ, ನಂದ ಕುಮಾರ್ ಮತ್ತು ಸಿಂಹಯಾಜಿ ಸ್ವಾಮಿ ಎಂಬ ಮೂವರನ್ನು ಈಗಾಗಲೇ ಪ್ರಕರಣದಲ್ಲಿ ಆರೋಪಿಗಳೆಂದು ಹೆಸರಿಸಲಾಗಿತ್ತು. ಟಿಆರ್‌ಎಸ್ ಶಾಸಕ ಪೈಲಟ್ ರೋಹಿತ್ ರೆಡ್ಡಿ ಅವರು ಅಕ್ಟೋಬರ್ ೨೬ ರಂದು ನಾಲ್ವರು ಶಾಸಕರ ಖರೀದಿ ಸಂಬAಧ ದೂರು ದಾಖಲಿಸಿದ್ದಾರೆ.
೩೧ ಗೋವುಗಳ ದತ್ತು ಸ್ವೀಕಾರ: ನಟ ಸುದೀಪ್ ಘೋಷಣೆ
ಬೆಂಗಳೂರು, ನ. ೨೪: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸರ್ಕಾರಿ ಗೋಶಾಲೆಗಳಲ್ಲಿ ಪ್ರತಿ ಜಿಲ್ಲೆಗೆ ಒಂದರAತೆ ೩೧ ಗೋವುಗಳನ್ನು ದತ್ತು ಪಡೆಯುತ್ತೇನೆ ಎಂದು ಚಿತ್ರನಟ ಸುದೀಪ್ ಹೇಳಿದರು. ಇಂದು ತಮ್ಮ ನಿವಾಸದಲ್ಲಿ ಪಶುಸಂಗೋಪನೆ ಸಚಿವ ಪ್ರಭು ಬಿ. ಚವ್ಹಾಣ್ ಅವರೊಂದಿಗೆ ಗೋಪೂಜೆ ನೇರವೇರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗೋಸಂಕುಲ ಸಂರಕ್ಷಣೆಯಲ್ಲಿ ಮಹತ್ವದ ಕೆಲಸ ಮಾಡುತ್ತಿದೆ ಎಂದರು. ನನ್ನನ್ನು ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯನ್ನಾಗಿ ನೇಮಕ ಮಾಡಿ ಸರ್ಕಾರ ನನ್ನ ಜವಾಬ್ದಾರಿ ಹೆಚ್ಚಿಸಿದೆ. ಸಾರ್ವಜನಿಕರು, ಚಿತ್ರರಂಗದ ಕಲಾವಿದರು, ಸಾರ್ವಜನಿಕ ಸಂಘ-ಸAಸ್ಥೆಗಳು ಗೋವುಗಳನ್ನು ದತ್ತು ಪಡೆಯಬೇಕು ಎಂದು ಸುದೀಪ್ ಮನವಿ ಮಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಹುಟ್ಟುಹಬ್ಬದಂದು ೧೧ ಗೋವು ದತ್ತು ಪಡೆದು, ತಮ್ಮ ಕನಸಿನ ಕೂಸಾದ ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತಂದರು. ನಾನು ಕೂಡ ಜಿಲ್ಲೆಗೆ ಒಂದರAತೆ ೩೧ ಗೋವುಗಳನ್ನು ದತ್ತು ಪಡೆದಿದ್ದೇನೆ ಎಂದು ಸಚಿವ ಪ್ರಭು ಚವ್ಹಾಣ್ ಅವರು ವಿವರಿಸಿದಾಗ ನಾನು ಕೂಡ ನಿಮ್ಮಂತೆ ದತ್ತು ಪಡೆಯುತ್ತಿದ್ದೇನೆ ಎಂದು ಸುದೀಪ್ ಅವರು ಸಚಿವರಿಗೆ ತಿಳಿಸಿದರು. ಇದೇ ಸಂದರ್ಭದಲ್ಲಿ ಚಿತ್ರನಟ ಸುದೀಪ್ ಅವರಿಗೆ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿ ನೇಮಕಾತಿ ಪತ್ರ ವಿತರಿಸಿ, ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದ ನಂತರ ೧೦೦ ಸರ್ಕಾರಿ ಗೋಶಾಲೆ ಸ್ಥಾಪಿಸಲಾಗುತ್ತಿದೆ. ರಾಷ್ಟçದಲ್ಲಿಯೇ ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ. ಪ್ರಾಣಿ ಕಲ್ಯಾಣ ಮಂಡಳಿ, ಪ್ರಾಣಿ ಸಹಾಯವಾಣಿ ಕೇಂದ್ರ, ಪಶು ಸಂಜೀವಿನಿ ಆ್ಯಂಬುಲೆನ್ಸ್, ಗೋಮಾತಾ ಸಹಕಾರ ಸಂಘ, ಆತ್ಮನಿರ್ಭರ ಗೋಶಾಲೆ ಸ್ಥಾಪನೆ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಸಚಿವರು ತಿಳಿಸಿದರು.
ಪತಿ-ಕುಟುಂಬದೊAದಿಗೆ ಬರುವ ಮಹಿಳೆಯರ ಪ್ರವೇಶವನ್ನು ನಿಷೇಧಿಸಿಲ್ಲ
ನವದೆಹಲಿ, ನ. ೨೪: ರಾಷ್ಟç ರಾಜಧಾನಿ ದೆಹಲಿಯ ಜಾಮಾ ಮಸೀದಿಗೆ ಗುಂಪಾಗಿ ಅಥವಾ ಒಂಟಿಯಾಗಿ ಬರುವ ಮಹಿಳೆಯರ ಪ್ರವೇಶವನ್ನು ನಿಷೇಧಿಸಲಾಗಿದೆ. ಆದರೆ, ಕುಟುಂಬದೊAದಿಗೆ ಬರುವ ಹೆಣ್ಣು ಮಕ್ಕಳು, ಮಹಿಳೆಯರಿಗೆ ಯಾವುದೇ ನಿಷೇಧವಿಲ್ಲ ಎಂದು ಮಸೀದಿಯ ಪಿಆರ್‌ಓ ಸಬಿ ಉಲ್ಲಾಖಾನ್ ತಿಳಿಸಿದ್ದಾರೆ. ಮಹಿಳೆ ಒಂಟಿಯಾಗಿ ಬಂದಾಗ ಅನುಚಿತ ಕೃತ್ಯಗಳನ್ನು ಮಾಡಲಾಗುತ್ತದೆ. ವೀಡಿಯೋ ಮಾಡಲಾಗುತ್ತದೆ. ಇವೆಲ್ಲಾವನ್ನು ತಡೆಗಟ್ಟಲು ಅಂತಹ ಮಹಿಳೆಯರ ಪ್ರವೇಶವನ್ನು ನಿಷೇಧಿಸಲಾಗಿದೆ. ಧಾರ್ಮಿಕ ಸ್ಥಳಗಳನ್ನು ಭೇಟಿ ಮಾಡುವ ಸ್ಥಳಗಳನ್ನಾಗಿ ಮಾಡಬಾರದು. ಕುಟುಂಬದೊAದಿಗೆ ಬರುವ ಅಥವಾ ವಿವಾಹಿತ ಮಹಿಳೆಯರಿಗೆ ಇಂತಹ ಯಾವುದೇ ನಿಷೇಧ ಇರುವುದಿಲ್ಲ ಎಂದರು. ಜಾಮಾ ಮಸೀದಿಗೆ ಗುಂಪಾಗಿ ಬರುವ ಹೆಣ್ಣು ಮಕ್ಕಳ ಪ್ರವೇಶವನ್ನು ನಿಷೇಧಿಸಿದ ನಂತರ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾಮಿ ಮಾಲಿವಾಳ್ ನೋಟೀಸ್ ಹೊರಡಿಸಿದ್ದರು. ಈ ರೀತಿ ಮಹಿಳೆಯರ ಪ್ರವೇಶವನ್ನು ನಿಷೇಧಿಸುವ ಹಕ್ಕು ಯಾರಿಗೂ ಇಲ್ಲ. ಜಾಮಾ ಮಸೀದಿಗೆ ಮಹಿಳೆಯರ ನಿಷೇಧ ನಿರ್ಧಾರ ಖಂಡಿತವಾಗಿ ತಪ್ಪು ಎಂದು ಟ್ವೀಟ್ ಮಾಡಿದ್ದರು.