ಮಡಿಕೇರಿ, ನ. ೨೫: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ವಿಶೇಷ ಘಟಕ ಯೋಜನೆಯಡಿ ‘ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಓದು’ ಕುರಿತ ಕಾರ್ಯಕ್ರಮವು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಬುಧವಾರ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತç ವಿಭಾಗದ ಮುಖ್ಯಸ್ಥರಾದ ಡಾ. ಕೆ.ಪಿ. ಕುಸುಮ ಅವರು, ಡಾ. ಬಿ.ಆರ್. ಅಂಬೇಡ್ಕರ್ ಅವರು ಮಹಿಳೆಯರ ಹಕ್ಕುಗಳು ಹಾಗೂ ಸ್ಮರಿಸಿದರು. ಸಮಾಜದಲ್ಲಿ ಮಹಿಳೆ ಯರಿಗೆ ಸಮಾನ ಅವಕಾಶಗಳು ದೊರೆಯಬೇಕು ಎಂಬುದು ಅಂಬೇಡ್ಕರ್ ಅವರ ಆಶಯವಾಗಿತ್ತು. ಆ ನಿಟ್ಟಿನಲ್ಲಿ ಮಹಿಳೆಯರಿಗೆ ಶಿಕ್ಷಣ ಮತ್ತು ಉದ್ಯೋಗ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲೂ ಸಮಾನ ಅವಕಾಶ ದೊರೆಯಬೇಕು ಎಂಬುದನ್ನು ಡಾ. ಬಿ.ಆರ್. ಅಂಬೇಡ್ಕರ್ ಅವರು ಪ್ರತಿಪಾದಿಸಿದರು ಎಂದರು.
ಸಮಾನತೆಗಾಗಿ ಹೋರಾಟ ಮಾಡಿದ್ದಾರೆ ಎಂದು ಅವರು ಸಾಮಾಜಿಕವಾಗಿ ಹಿಂದುಳಿದ ಜನರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಸಂವಿಧಾನದ ಮೂಲಕ ಸಾಕಷ್ಟು ಅವಕಾಶ ಕಲ್ಪಿಸಿದ್ದಾರೆ.
ಮಹಿಳೆಯರಿಗೆ ಸಮಾನ ಆಸ್ತಿಯ ಹಕ್ಕು ದೊರೆಯಬೇಕು ಎಂಬುದನ್ನು ಪ್ರತಿಪಾದಿಸಿದ್ದರು ಎಂದು ಡಾ. ಕುಸುಮ ಅವರು ಹೇಳಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಡಿ. ನಿರ್ಮಲ ಅವರು ಮಾತನಾಡಿ, ಸಾಮಾಜಿಕವಾಗಿ ಹಿಂದುಳಿದ ವರ್ಗದವರ ಶ್ರೇಯೋಭಿವೃದ್ಧಿಗೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ ಅಪಾರ. ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರನ್ನು ಭಾರತ ಇತಿಹಾಸದ ಪುಟದಲ್ಲಿ ಮರೆಯುವಂತಿಲ್ಲ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ ಮಾತನಾಡಿದರು. ಸಹಾಯಕ ಪ್ರಾಧ್ಯಾಪಕರಾದ ಡಾ. ಕಾವೇರಿ, ಉಪನ್ಯಾಸಕರಾದ ಧನಂಜಯ, ಸುರೇಶ್ ಇತರರು ಇದ್ದರು. ಕಾವ್ಯ ಸ್ವಾಗತಿಸಿದರು, ರೀನಾ ನಿರೂಪಿಸಿದರು, ವಸಿಷ್ಮಾ ಪ್ರಾರ್ಥಿಸಿದರು, ಶಿಫಾ ವಂದಿಸಿದರು.