ಮಡಿಕೇರಿ, ನ. ೨೫: ಜಿಲ್ಲಾ ಮಟ್ಟದಲ್ಲಿ ವಿಶ್ವ ವಿಶೇಷಚೇತನರ ದಿನಾಚರಣೆ ಆಚರಿಸುವ ಸಲುವಾಗಿ ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನೆ, ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ, ಪಾಲಿಬೆಟ್ಟ ಚೆಷೈರ್ ಹೋಂ ಶಾಲೆ, ದೇವರಪುರ ಅಮೃತವಾಣಿ ಶಾಲೆ, ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್, ಎಂಆರ್‌ಡಬ್ಲೂö್ಯ, ವಿಆರ್ ಡಬ್ಲೂö್ಯ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ವೀರಾಜಪೇಟೆ ತಾಲೂಕಿನ ವಿಶೇಷಚೇತನರಿಗೆ ತಾಲೂಕುಮಟ್ಟದ ಕ್ರೀಡಾ ಮತ್ತು ಪ್ರತಿಭಾ ಸ್ಪರ್ಧೆಯು ತಾ. ೨೮ ರಂದು ಬೆಳಿಗ್ಗೆ ೧೦ ಗಂಟೆಗೆ ಗೋಣಿಕೊಪ್ಪಲು ದಸರಾ ಮೈದಾನ(ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ)ದಲ್ಲಿ ನಡೆಯಲಿದೆ.

ಈ ಆಟೋಟ ಸ್ಪರ್ಧೆಯಲ್ಲಿ ವೀರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ವಿಶೇಷಚೇತನರು ಭಾಗವಹಿಸುವಂತೆ ಪೊನ್ನಂಪೇಟೆ ತಾಲೂಕು ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.