ವೀರಾಜಪೇಟೆ, ನ. ೨೪: ಈ ವರ್ಷ ನಿರಂತರ ಮಳೆಯಿಂದಾಗಿ ಜಿಲ್ಲೆಯ ರಸ್ತೆಗಳು ಶೋಚನೀಯ ಸ್ಥಿತಿಯಲ್ಲಿವೆ. ಮಳೆ ಸ್ವಲ್ಪ ಬಿಡುವು ನೀಡಿರುವುದರಿಂದ ಶೀಘ್ರದಲ್ಲೇ ಎಲ್ಲ ರಸ್ತೆಗಳ ಅಭಿವೃದ್ಧಿ ಕಾಮಗಾರಿಯನ್ನು ಪ್ರಾರಂಭಿಸಲಾಗುತ್ತದೆ ಎಂದು ಶಾಸಕ ಕೆ.ಜಿ. ಬೋಪಯ್ಯ ಹೇಳಿದರು
ವೀರಾಜಪೇಟೆ ತಾಲೂಕಿನ ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂರು ರಸ್ತೆಯಿಂದ ಕಡಂಗ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ೩.೪೦ ಕಿ.ಮೀ. ರಸ್ತೆ, ರೂ, ೨ ಕೋಟಿ ಅನುದಾನದ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದ ಶಾಸಕ ಬೋಪಯ್ಯ, ಈ ರಸ್ತೆಯು ಜಿಲ್ಲಾ ಪಂಚಾಯಿತಿಗೆ ಸೇರಿದ ರಸ್ತೆಯಾಗಿದ್ದು ಇದೀಗ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಲಾಗಿದ್ದು ಲೋಕೋಪಯೋಗಿ ಇಲಾಖೆಯ ಮೂಲಕ ಕಾಮಗಾರಿ ನಡೆಸಲಾಗುತ್ತಿದೆ. ಈಗಾಗಲೇ ಹಲವೆಡೆ ರಸ್ತೆ ಕಾಮಗಾರಿ ಪ್ರಾರಂಭವಾಗಿದ್ದು, ಕೆಲವೇ ದಿನಗಳಲ್ಲಿ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿಗೊಳಿಸಲಾಗುವುದು. ರಸ್ತೆ ಕಾಮಗಾರಿಗಳು ನಡೆಯುವ ಸಂದರ್ಭ ಸ್ಥಳೀಯರು ಸಹಕಾರ ನೀಡಬೇಕು. ಪ್ರತಿಯೊಬ್ಬರಿಗೂ ಬದುಕಲು ಮನೆ ಅವಶ್ಯವಿದೆ ಹಾಗೆ ವಿದ್ಯುತ್, ಕುಡಿಯುವ ನೀರು ಮೂಲಭೂತ ಸೌಲಭ್ಯಗಳನ್ನು ಸರಕಾರದಿಂದ ಒದಗಿಸಿ ಕೊಡುವುದಾಗಿ ಹೇಳಿದರು.
ಕೆದಮುಳ್ಳೂರು ಮತ್ತು ಬೇಟೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಮಳೆ ಬೀಳುವ ಪ್ರದೇಶವಾಗಿದ್ದು ಇಲ್ಲಿನ ಗ್ರಾಮೀಣ ಭಾಗದ ರಸ್ತೆಗಳಿಗೆ ಸರಕಾರದಿಂದ ಹೆಚ್ಚು ಅನುದಾನ ತಂದು ಗ್ರಾಮದ ಕಾಲೋನಿಗಳಿಗೆ ಉತ್ತಮ ಕಾಂಕ್ರೀಟ್ ರಸ್ತೆ ಮಾಡಲಾಗಿದೆ. ಈಗ ಬಾಕಿ ಉಳಿದಿರುವ ಕೆಲವೇ ರಸ್ತೆಗಳು ಮುಂದಿನ ದಿನದಲ್ಲಿ ಅಭಿವೃದ್ಧಿ ಕಾಣಲಿವೆ ಎಂದರು.
ರಸ್ತೆ ಕಾಮಗಾರಿಗೆ ಭೂಮಿ ಪೂಜೆ ಮಾಡುವ ಸಂದರ್ಭ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಡಿಕೇರಿಯಂಡ ಶೀಲಾ, ಗ್ರಾ.ಪಂ. ಸದಸ್ಯ ಪರಮೇಶ್ವರ, ಕೆ. ರಾಮಯ್ಯ, ವೀಣಾ, ಸಾಬು ಮುತ್ತಪ್ಪ, ಸರಕಾರದಿಂದ ಹೆಚ್ಚು ಅನುದಾನ ತಂದು ಗ್ರಾಮದ ಕಾಲೋನಿಗಳಿಗೆ ಉತ್ತಮ ಕಾಂಕ್ರೀಟ್ ರಸ್ತೆ ಮಾಡಲಾಗಿದೆ. ಈಗ ಬಾಕಿ ಉಳಿದಿರುವ ಕೆಲವೇ ರಸ್ತೆಗಳು ಮುಂದಿನ ದಿನದಲ್ಲಿ ಅಭಿವೃದ್ಧಿ ಕಾಣಲಿವೆ ಎಂದರು.
ರಸ್ತೆ ಕಾಮಗಾರಿಗೆ ಭೂಮಿ ಪೂಜೆ ಮಾಡುವ ಸಂದರ್ಭ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಡಿಕೇರಿಯಂಡ ಶೀಲಾ, ಗ್ರಾ.ಪಂ. ಸದಸ್ಯ ಪರಮೇಶ್ವರ, ಕೆ. ರಾಮಯ್ಯ, ವೀಣಾ, ಸಾಬು ಮುತ್ತಪ್ಪ, ಕೊರಿಯಾರು ತಾಯಮ್ಮ, ಪ್ರಶಾಂತ್ ಉತ್ತಪ್ಪ, ಕುಂಬೇಯAಡ ಗಣೇಶ್, ಡಿಸಿಸಿ ಬ್ಯಾಂಕ್ನ ನಿರ್ದೇಶಕ ಪಟ್ರಪಂಡ. ರಘು ನಾಣಯ್ಯ, ಶಕ್ತಿ ಕೇಂದ್ರದ ಅಧ್ಯಕ್ಷ ರತ್ನ ಅಯ್ಯಣ್ಣ, ಬಿಜೆಪಿ ಪ್ರಮುಖ ಮಾಳೇಟಿರ ಬೋಪಣ್ಣ, ವಿಎಸ್ಎಸ್ಎನ್ ಅಧ್ಯಕ್ಷ ಮಿಟ್ಟು ಅಯ್ಯಪ್ಪ, ಮಾಜಿ ಅಧ್ಯಕ್ಷ ಮಣಿ ಮಾಚಯ್ಯ, ಗುತ್ತಿಗೆದಾರ
ಕೆ. ಯು. ತಿಮ್ಮಯ್ಯ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ವೈ. ಎಸ್. ಸಿದ್ದೇಗೌಡ, ಗೌಡುದಾರೆ ಚೋಟು ಬಿದ್ದಪ್ಪ, ಬಿ. ಕಿರಣ್ ಸೇರಿದಂತೆ ಮತ್ತಿತರ ಗ್ರಾಮಸ್ಥರು ಉಪಸ್ಥಿತರಿದ್ದರು.