ವೀರಾಜಪೇಟೆ, ನ. ೨೪: ಕಟ್ಟಡ ಕಾರ್ಮಿಕ ಸಂಘದಿAದ ಗುರುತಿನ ಚೀಟಿ ಪಡೆದ ಫಲಾನುಭವಿಗಳು ಸರಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಮುಂದೆ ಬರಬೇಕು ಎಂದು ವೀರಾಜಪೇಟೆ ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಸಿ.ಮಾದಪ್ಪ ಹೇಳಿದರು.
ವೀರಾಜಪೇಟೆ ನಗರದಲ್ಲಿರುವ ಕಾರ್ಮಿಕ ನಿರೀಕ್ಷಕರ ಕಛೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ತಾಲೂಕಿನಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮುಖ್ಯವಾಗಿ 'ಗಾರೆ ಕೆಲಸದ ಕಾರ್ಮಿಕರಿಗೆ ಟೂಲ್ಸ್ ಕಿಟ್ ವಿತಾರಣೆ' ಕಾರ್ಯಕ್ರಮದಲ್ಲಿ ಮಾತನಾಡಿ, ಕಟ್ಟಡ ಕಾರ್ಮಿಕರಿಗಾಗಿ ಸರಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು. ಬಡ ಕುಟುಂಬದ ಕಾರ್ಮಿಕರು ಸಂಘದ ಮೂಲಕ ಗುರುತಿನ ಚೀಟಿ ಪಡೆದುಕೊಂಡು ಸರಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವಂತಾಗಬೇಕು ಎಂದರು.
ಟೂಲ್ಸ್ ಕಿಟ್ ವಿತರಣೆ ಸಂದರ್ಭ ಕಾರ್ಮಿಕ ನಿರೀಕ್ಷಕರ ಕಚೇರಿಯ ಸಹಾಯಕ ಎಸ್. ನವಿನ್, ಕಟ್ಟಡ ಕಾರ್ಮಿಕ ಜಿಲ್ಲಾ ಸಂಘದ ಸಿ.ಜಿ. ವರ್ಗಿಸ್, ಎಂ. ಸೇದು ಹಾಗೂ ಕಾರ್ಮಿಕ ಸಂಘದ ಸದಸ್ಯರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಒಟ್ಟು ೮೦ ಮಂದಿ ಗಾರೆ ಕಾರ್ಮಿಕರಿಗೆ ಕಿಟ್ ವಿತರಿಸಲಾಯಿತು.