ಸುಂಟಿಕೊಪ್ಪ, ನ. ೨೪: ವ್ಯಕ್ತಿಯೋರ್ವ ಮನನೊಂದು ಕೆರೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ಸುಂಟಿಕೊಪ್ಪ ಉಲುಗುಲಿ ರಸ್ತೆಯ ನಿವಾಸಿ ಸ್ಥಳೀಯ ಮಾರ್ಕೆಟಿಂಗ್ ಅಂಗಡಿಯೊAದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಧು(೩೬) ಎಂಬಾತ ತಾ.೨೩ ರಂದು ಸಂಜೆ ಎಮ್ಮೆಗುಂಡಿ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನಾ ಸ್ಥಳಕ್ಕೆ ಸುಂಟಿಕೊಪ್ಪ ಠಾಣಾಧಿಕಾರಿ ಮಂಜು ಸಿಬ್ಬಂದಿಗಳು ತೆರಳಿ ಮಹಜರು ನಡೆಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ. ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಮೃತದೇಹ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಮೃತನು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾನೆ.